ದೆಹಲಿ: ಪ್ರಧಾನಿ ನರೇಂದ್ರ ಮೋ ಅವರು ಜೂ5ರಂದು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿಗಳ ಮನವಿಗೆ ಹೊಸ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮುಂದುವರಿದಿದ್ದಾರೆ.
ಇದರ ಜತೆಗೆ ಎನ್ಡಿಎ ಸಭೆಯನ್ನು ನಡೆಸಿ ಎನ್ಡಿಎ ನಾಯಕರ ಸರ್ವಾನುಮತದ ಮೂಲಕ ಎನ್ಡಿಎ ನಾಯಕನಾಗಿ ಆಯ್ಕೆ ಮಾಡಿದೆ. ಇದರ ಜತೆಗೆ ಶನಿವಾರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುದಾಗಿ ದೃಢಪಡಿಸಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ತಾವು ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಫೋನ್ ಕರೆ ಮೂಲಕ ತಿಳಿಸಿದ್ದಾರೆ.
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.