ಬೆಳಗಾವಿ: ಬೆಳಗಾವಿ ಖನಗಾಂವ ಕೆ.ಎಚ್.ಗ್ರಾಮದ ಬಳಿ ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸುಳೇಬಾವಿ ಗ್ರಾಮದ ವಿಠ್ಠಲ ದತ್ತಾ ಲೋಕರೆ(29) ಬಸ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ಬಸ್ ಬೆಳಗಾವಿ ಕಡೆಗೆ ಬರುತ್ತಿತ್ತು. ಈ ವೇಳೆ ಬೈಕ್ ಸವಾರನಿಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ 30 ಅಡಿ ಎತ್ತರಕ್ಕೆ ಜಿಗಿದು ಹೊಲದಲ್ಲಿ ಬಿದ್ದಿದ್ದಾನೆ. ಬಸ್ ಗುದ್ದಿದ ರಭಸಕ್ಕೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಬಸ್ ಪಲ್ಟಿ ಹೊಡೆದ ರಭಸಕ್ಕೆ ಬಸ್ನಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Ad