Bengaluru 22°C
Ad

ಪಿಎಂ ಮೋದಿ ಜೊತೆ ಸಂವಾದಕ್ಕೆ ಕರ್ನಾಟಕದ ಇಬ್ಬರು ಕೃಷಿ ಸಖಿ ಆಯ್ಕೆ

Modi

ಕಲಬುರಗಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೈಸರ್ಗಿಕ ಕೃಷಿ ತರಬೇತಿ ಪಡೆದಿರುವ ಕೃಷಿ ಸಖಿಯರೊಂದಿಗೆ ಸಂವಾದ ನಡೆಸಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಇಬ್ಬರು ಕೃಷಿ ಸಖಿಯರು ಪಾಲ್ಗೊಳ್ಳಲಿದ್ದಾರೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮೋತಕಪಲ್ಲಿ ಮೂಲದ ಕೃಷಿ ಸಖಿ ಅನುಷಾ ಹಾಗೂ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಜಂಬೇಸಾಲ ಗ್ರಾಮದ ಲತಾ ರಾಜೀವ ಹೆಗಡೆ ಆಯ್ಕೆಯಾದವರು.

ಲತಾ ಅವರು ತಮ್ಮ ಪತಿಯೊಂದಿಗೆ ನೈಸರ್ಗಿಕ ಪುಷ್ಪಕೃಷಿ, ಪಶು ಆಹಾರ ತಯಾರಿಕೆ, ಹೈನುಗಾರಿಕೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದಾರೆ.

Ad
Ad
Nk Channel Final 21 09 2023
Ad