ಬೆಂಗಳೂರು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಬಿಎಸ್ವೈ ಬಂಧನ ಭೀತಿಯಲ್ಲಿದ್ದ ಪಾರಾಗಿದ್ದಾರೆ. ಇದೀಗ ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿಯನ್ನು (ಚಾರ್ಜ್ಶೀಟ್) ನ್ಯಾಯಾಲಕ್ಕೆ ಸಲ್ಲಿಸಲಾಗಿದೆ. ಇಂದು(ಜೂನ್ 27) ಪೊಲೀಸರು, ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದರು.
ಬಾಲಕಿ ದಾಖಲಿಸಿದ್ದ ಹಳೇ ಕೇಸ್ ಬಗ್ಗೆ ವಿಚಾರಿಸುತ್ತಾ ರೂಮಿಗೆ ಕರೆದೊಯ್ದು ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಆರೋಪಪಟ್ಟಿಯಲ್ಲಿ ಉಲ್ಲೇಖವಾಗಿದೆ. ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿರುವುದಾಗಿ ಆರೋಪಿಸಲಾಗಿದೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ.
ನಂತರ ಬಾಲಕಿಯ ತಾಯಿ ಇದನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಪೋಸ್ಟ್ ಆಗಿದ್ದ ವಿಡಿಯೋ ಡಿಲೀಟ್ ಮಾಡಿಸಲು ಮೂವರು ಪ್ರಯತ್ನಿಸಿದ್ದಾರೆ. ವೈ.ಎಂ. ಅರುಣ್, ಎಂ.ರುದ್ರೇಶ್, ಜಿ.ಮರಿಸ್ವಾಮಿ ಎನ್ನುವರು ಮಹಿಳೆಯನ್ನು ಕರೆತಂದು ವಿಡಿಯೋ ಪೋಸ್ಟ್ ಡಿಲೀಟ್ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ನಾಲ್ವರ ವಿರುದ್ದವೂ ದ ಪೊಲೀಸರು, ಆರೋಪಪಟ್ಟಿ ದಾಖಲಿಸಿದ್ದಾರೆ.