ಹಾಸನ: ಇಬ್ಬರ ನಡುವಿನ ಕೌಟುಂಬಿಕ ಕಲಹ ಹಿನ್ನೆಲೆ ಪತಿ ತನ್ನ ಪತ್ನಿಯನ್ನೇ ಎಸ್ ಪಿ ಕಚೇರಿ ಮುಂದೆಯೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದಿದೆ.ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ್ದಾರೆ. ಚಾಕು ಇರಿತಕ್ಕೆ ಒಳಗಾಗಿದ್ದ ಪತ್ನಿ ಸಾವನ್ನಪ್ಪಿದ್ದಾರೆ.
ಇಬ್ಬರಿಗೂ ಮದುವೆಯಾಗಿ ಎರಡು ಮಕ್ಕಿಳಿದ್ದರು. ಆಗಾಗ ಇಬ್ಬರ ನಡುವೆ ಗಲಾಟ ನಡುಯುತ್ತಿತ್ತು ಹೀಗಾಗಿ ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.
ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಆರೋಪಿಗಾಗಿ ಹಾಸನ ಪೊಲೀಸ್ ಹುಡುಕಾಟ ನಡೆಸಿದ್ದಾರೆ.
Ad