ಮಂಗಳೂರು: ಮಂಗಳೂರಿನ ಹೊರ ವಲಯ ವಳಚ್ಚಿಲ್ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್ ವಿಚಾರಕ್ಕೆ ಜ್ಯೂನಿಯರ್ಸ್ – ಸೀನಿಯರ್ಸ್ ಗಲಾಟೆ ನಡೆದಿದ್ದು, ಕೈ ಸಿಕ್ಕ ವಸ್ತುಗಳಿಂದ ರಸ್ತೆಯಲ್ಲಿ ವಿದ್ಯಾರ್ಥಿಗಳು ಹೊಡೆದಾಡಿದ್ದಾರೆ.
ಕೇರಳ ಮೂಲದ ವಿದ್ಯಾರ್ಥಿಗಳಿಂದ ಹೊಟೆದಾಟ ನಡೆದಿದ್ದು,ಪೊಲೀಸರ ಮಧ್ಯೆ ಪ್ರವೇಶದಿಂದ ಗಲಾಟೆ ತಣ್ಣಗಾಗಿದೆ. ವಿದ್ಯಾರ್ಥಿಗಳು ಹೊಡೆದಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.