Bengaluru 22°C
Ad

ಕಾಫಿ ತುಂಬಿದ ಲಾರಿಯ ಟೈಯರ್ ಸಿಡಿದು ಬೆಂಕಿ: ಸುಟ್ಟು ಕರಕಲಾದ ಲಾರಿ

ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈಯರ್ ಸಿಡಿದು ಸಂಪೂರ್ಣವಾಗಿ ಲಾರಿ ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಣೇನೂರು ಗ್ರಾಮದ ಬಳಿ ನಡೆದಿದೆ.

ನಂಜನಗೂಡು: ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈಯರ್ ಸಿಡಿದು ಸಂಪೂರ್ಣವಾಗಿ ಲಾರಿ ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಣೇನೂರು ಗ್ರಾಮದ ಬಳಿ ನಡೆದಿದೆ.

ಚಾಮರಾಜನಗರದಿಂದ ಹುಲ್ಲಹಳ್ಳಿ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ವೇಳೆ ಕಣೇನೂರು ಗ್ರಾಮದ ಬಳಿ ಲಾರಿಯ ಮುಂಭಾಗದ ಚಕ್ರವೊಂದು ಸಿಡಿದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಲಾರಿ ಭಸ್ಮವಾಗಿದೆ.

ಲಾರಿಯಲ್ಲಿದ್ದ ಕಾಫಿ ಬೀಜ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಚಾಲಕ ಪಾರಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಅಸ್ವಸ್ಥಗೊಂಡು ಬಿದ್ದಿದ್ದ ಲಾರಿಯ ಚಾಲಕನನ್ನು ಹುಲ್ಲಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad