ಬೆಂಗಳೂರು : ಕೆಸಿ ಜನರಲ್ ಹಾಸ್ಪಿಟಲ್ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯುನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ(ಮೇ.24) ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ. ನೆಲಮಂಗಲ ಮೂಲದ ವೆಂಕಟೇಶ್ ಎಂಬುವವರು ವಿಷ ಸೇವಿಸಿ ಐಸಿಯು ವಾರ್ಡ್ ಸೇರಿದ್ದರು. ಈ ವೇಳೆ ಆಸ್ಪತ್ರೆಯ ವಾರ್ಡ್ ಬಾಯ್ ಧನಂಜಯ್ ಎಂಬಾತ ಇಗ್ಗಾ ಮುಗ್ಗ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.
ಚಿಕಿತ್ಸೆ ವೇಳೆ ಕೂಗಾಡಿದ ಎನ್ನುವ ಕಾರಣಕ್ಕೆ ಥಳಿತ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಆಸ್ಪತ್ರೆ ಬೇಜವಾಬ್ದಾರಿತನದ ವಿರುದ್ಧ ಗಾಯಾಳು ವೆಂಕಟೇಶ್ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Ad