Showing 20 of 21624 articles • Page 103 of 1082
ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ 365 ಸೀಯಾಳ (ಎಳನೀರು) ಅಭಿಷೇಕ ನೆರವೇರಿಸಲಾಯಿತು.
ದೇಶದಲ್ಲಿ ಸಹಕಾರಿ ಕ್ಷೇತ್ರ ಕ್ರಾಂತಿಕಾರಿ ಕೆಲಸ ಮಾಡುತ್ತಿದೆ. ವಾಣಿಜ್ಯ ಬ್ಯಾಂಕ್ಗಳಿಗೆ ಸಮಾನಾಂತರವಾಗಿರುವ ಸಹಕಾರಿ ಕ್ಷೇತ್ರವು ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಬಹಳಷ್ಟು ಸಹಕಾರ ನೀಡುತ್ತಿದೆ.
ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಾಗರ್ ಜಿಲ್ಲೆಯ 19 ತಿಂಗಳ ಬಾಲಕ, ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಎರಡೂ ಕಣ್ಣುಗಳಲ್ಲಿ ದೃಷ್ಟಿ ಕಳೆದುಕೊಂಡಿದ್ದಾನೆ, ಕರ್ತವ್ಯದಲ್ಲಿದ್ದ ಸರ್ಕಾರಿ ವೈದ್ಯರು ತಪ್ಪಾಗಿ ಕಣ್ಣಿನಲ್ಲಿ ಲವಣಯುಕ್ತ ಹನಿಗಳನ್ನು ಹಾಕಿದ್ದಾರೆ ಎಂದು ಕುಟುಂಬ ಆರೋಪಿಸಿದೆ.
ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರರ ಅನುಕೂಲಕ್ಕಾಗಿ ಸುಮಾರು 12 ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯಗಳು ಇಂದಿಗೂ ಬಳಕೆಗೆ ಲಭ್ಯವಾಗದೇ ನಿರುಪಯುಕ್ತವಾಗಿ ಬಿದ್ದಿವೆ. ಮಹಿಳಾ ಮೀನುಗಾರ್ತಿಯರಿಗಾಗಿ ನಿರ್ಮಿಸಿದ್ದ ವಿಶ್ರಾಂತಿ ಕೊಠಡಿಯೂ ಪಾಳುಬಿದ್ದಿದ್ದು, ಮೂಲಸೌಕರ್ಯಗಳ ಕೊರತೆ ಬಗ್ಗೆ ಮೀನುಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಿ ನರಸೀಪುರ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪಯ್ಯನಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು.
ಮೈಸೂರಿನ ಗೋಕುಲಂ ಏರಿಯಾದ ಅಪಾರ್ಟ್ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಛೋಲಿಕೆ ಪೀಚೆ ಕ್ಯಾಹೆ ಡ್ಯಾನ್ಸ್ ಮಾಡಲಾಯಿತು. ಕುಂದಾಪುರ ತಾಲೂಕಿನ ಆನೆಗುಡ್ಡೆ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಕಾರ್ಯಕ್ರಮ ನಡೆಯಿತು.
ಸಚಿವರು, ಶಾಸಕರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು ನಿವಾಸದಲ್ಲಿ ಬಾಡೂಟ ಆಯೋಜನೆ ಮಾಡಿದರು.
ಪತ್ನಿ ಜೊತೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ವಿಶೇಷ ಪೂಜೆ ಸಲ್ಲಿಸಿದರು.
ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿದ ವ್ಯಕ್ತಿಯ ಬಂಧಿಸಲಾಗಿದೆ.
ಬೀದಿಬದಿ ವ್ಯಾಪಾರಿಗಳ ವ್ಯಾಪಕ ವಿರೋಧದ ನಡುವೆ ನಗರದ ಮೈದಾನ ರಸ್ತೆ, ಲೇಡಿ ಘೋಷನ್ ಆಸ್ಪತ್ರೆ ರಸ್ತೆ, ಪುರಭವನದ ಬಳಿ ವ್ಯಾಪಾರ ಮಾಡುವ ಬೀದಿ ವ್ಯಾಪಾರಿಗಳನ್ನು ನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ತುಳುವ ಮಹಾಸಭೆಯ ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ನಡೆದಿದೆ.
ಜುಲೈ 1 ಮತ್ತು 2 ರಂದು ಎರಡು ದಿನಗಳ ಕಾಲ ಶ್ರೀ ಕ್ಷೇತ್ರ ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠದಲ್ಲಿ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯ ಆರಾಧನೆ ಹಮ್ಮಿಕೊಳ್ಳಲಾಗಿದೆ
ಮಾಲೀಕನ ಮನೆಯನ್ನು ಬಾಡಿಗೆದಾರರು ದೋಚಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಮೈಸೂರು–ಹುಣಸೂರು ಹೆದ್ದಾರಿಯ ಅರಬ್ಬಿತಿಟ್ಟು ವನ್ಯಧಾಮದ ಬಳಿ ನಡೆದಿದೆ.
ನಗರದ ಸೂಟರ್ಪೇಟೆಯಲ್ಲಿ ವೃದ್ಧ ಮಹಿಳೆಯ ಕುತ್ತಿಗೆಯಿಂದ ಸುಮಾರು ₹1.50 ಲಕ್ಷ ಮೌಲ್ಯದ 12 ಗ್ರಾಂ ತೂಕದ ಲಕ್ಷ್ಮಿ ಪೆಂಡೆಂಟ್ ಹೊಂದಿದ್ದ ಬಂಗಾರದ ಸರವನ್ನು ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ.
ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ದಲಿತ ಸಂಘರ್ಷ ಸಮಿತಿ ಸಂಯೋಜಕ ಬೆಂಬಲ ವ್ಯಕ್ತಪಡಿಸಿದೆ.