Showing 20 of 21624 articles • Page 104 of 1082
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ.
ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಭಾರತೀಯ ಚಿತ್ರರಂಗದ ದಂತಕಥೆ, ಚಿತ್ರಕಥೆಯ ರಾಜ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಕೆ. ಭಾಗ್ಯರಾಜ್ (73) ಅವರು ಶನಿವಾರ ಚೆನ್ನೈನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಮ್ಮ ಮೆಟ್ರೋ ಪಿಲ್ಲರ್ಗಳಿಗೆ ಬೆಳಕಿನ ವ್ಯವಸ್ಥೆಗಾಗಿ ನಡೆಯುತ್ತಿದ್ದ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಸಮೀಪ ಶುಕ್ರವಾರ ನಡೆದಿದೆ.
ಪ್ರೇಮಿಗಳ ನಡುವೆ ಕಾರಲ್ಲೇ ಗಲಾಟೆ ನಡೆದು, ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿದಂಟಕಲ್ ಗ್ರಾಮದಲ್ಲಿ ನಡೆದಿದೆ.
ನಾಡಪ್ರಭು ಕೆಂಪೇಗೌಡರ ಆದರ್ಶ ಮತ್ತು ಆಡಳಿತ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರಮುಖ ಪ್ರೇರಣೆಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಜನರ ಸಮಸ್ಯೆ ಕೇಳಿ ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ನಂಜನಗೂಡು ತಾಲ್ಲೂಕಿನ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿದರು.
ನಗರದ ತುಂಬಾ ಟ್ರಾಫಿಕ್ ಜಾಮ್ ಆಗಿದ್ದು, ಸಾಲು ಸಾಲು ರಜೆಗಳ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿ ನಡೆಸಿದರು. ಒಟ್ಟು ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಭ್ರಷ್ಟಚಾರ ವಾಗಿದೆ.
ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ.
ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಹೇಳಿದರು.
ಕಾಡಿನಿಂದ ತಪ್ಪಿಸಿಕೊಂಡು ಬಂದ ಜಿಂಕೆಯೊಂದು ಬೀದಿ ನಾಯಿಗಳ ದಾಳಿಗೆ ಒಳಗಾದ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ನಡೆದಿದೆ. ಯುವಕರ ತಂಡ ತಕ್ಷಣ ಸ್ಪಂದಿಸಿ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಐದು ದಿನಗಳ ಹಿಂದೆಯಷ್ಟೇ ಹುಸಿ ಬಾಂಬ್ ಬೆದರಿಕೆಗೆ ಈಡಾಗಿದ್ದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಮತ್ತೆ ಈಮೇಲ್ ಮೂಲಕ ಬೆದರಿಕೆ ಕರೆ ಬಂದಿದೆ.
ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ.
ಟ್ರಕ್ ಚಾಲಕನೊಬ್ಬ ಮೊದಲು ಗುಂಡರ್ದೇಹಿ ಪ್ರದೇಶದಲ್ಲಿ ಒಂದು ಪುಟ್ಟ ಮಗುವಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಲು ಯತ್ನಿಸಿರುವ ಘಟನೆ ಛತ್ತೀಸ್ಗಢ ರಾಜ್ಯದ ಮೊಹ್ಲಾ-ಮಾನ್ಪುರ್-ಅಂಬಾಗಢ್ ಚೌಕಿ ಜಿಲ್ಲೆಯಲ್ಲಿ ನಡೆದಿದೆ.
ರಾಜಾಜಿನಗರದಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಒಣಗಿದ ಮರದ ಕೊಂಬೆಯೊಂದು ಮೋಟಾರ್ ಸೈಕಲ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ, 52 ವರ್ಷದ ವ್ಯಕ್ತಿಯೊಬ್ಬರು ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ.
ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ (NH169A) ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಇಂದಿನ ಯುವಜನತೆ ಕೃಷಿಯಿಂದ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ, ಕೃಷಿಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ವಿಶಿಷ್ಟ ಪ್ರಯತ್ನವೊಂದು ಉಡುಪಿಯಲ್ಲಿ ನಡೆದಿದೆ.
ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.