Showing 20 of 21625 articles • Page 105 of 1082
ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ, ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ.ಯವರಿಗೆ ಜೂನ್ 25, 2026 ರಂದು ಭಾರತ ಸರ್ಕಾರವು ಅಧಿಕೃತವಾಗಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ನಲ್ಲಿ ಗೌರವ ಕರ್ನಲ್ ಹುದ್ದೆ ಮತ್ತು ‘ಕರ್ನಲ್ ಕಮಾಂಡೆಂಟ್’ (ಸಂಖ್ಯೆ: UN/NOTICE*/2026/102) ಆಗಿ ನೇಮಕ ಮಾಡಿದೆ. ಈ ಗೌರವಕ್ಕಾಗಿ ಎನ್.ಸಿ.ಸಿ. ಪ್ರಧಾನ ಕಚೇರಿ, ಮಂಗಳೂರು ಗ್ರೂಪ್ ನವರು ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್ಜೆ ಅವರನ್ನು ಈ ಮಹಾನ್ ಗೌರವಕ್ಕಾಗಿ ಶಿಫಾರಸು ಮಾಡಿದ್ದರು.
ದೇಶ ವಿದೇಶದ ಸಮಸ್ತ ಶ್ರದ್ದಾಳುಗಳ ಕೇಂದ್ರವಾಗಿ ರುವ ರಾಮ ಮಂದಿರದಲ್ಲಿ ಅವ್ಯವಹಾರ ದಂತಹ ಘೋರ ಅಪಚಾರ ನಡೆಯಬಾರದಿತ್ತು. ನಡೆದದ್ದು ಸತ್ಯವಾದರೆ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ರಾಮಮಂದಿರ ವಿಶ್ವಸ್ಥಮಂಡಳಿ ಟ್ರಸ್ಟ್ ಸದಸ್ಯರಾದ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಜಿಲ್ಲೆಯ ಮೂವರು ರೌಡಿ ಶೀಟರ್ಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಶ್ರೀ ಕ್ಷೇತ್ರ ಕಟೀಲು ದೇವಾಲಯದಲ್ಲಿ ನಡೆದ ತುಳುವರ್ಲ್ಡ್ ಫೌಂಡೇಶನ್ನ ಆಡಳಿತ ಮಂಡಳಿ ಸಭೆಯಲ್ಲಿ 2026–27ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ವಸಂತ ರೈ ಕುತ್ತೆತ್ತೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಆರೋಪದ ಬೆನ್ನಲ್ಲೇ ರಾಮಮಂದಿರ ಟ್ರಸ್ಟ್ನ ಉನ್ನತ ಹುದ್ದೆಯಲ್ಲಿದ್ದ ಚಂಪತ್ ರಾಯ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕುಳಾಯಿ ಗುಡ್ಡೆ ಪರಿಸರದ ಮನೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಆರೋಪಿ ಹೊಸಬೆಟ್ಟು ಕುಳಾಯಿಯ ಅಣ್ಣಪ್ಪ ಸ್ವಾಮಿ ಯಾನೆ ಮನು (26) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ಮುಂಡ್ಕಾ ಕೈಗಾರಿಕಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭೀಕರ ದುರಂತವೊಂದು ಸಂಭವಿಸಿದೆ.
ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಂಬದಕೋಣೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವಕ್ಕೆ ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಸಿಟ್ಟಿದ್ದ ಶವದ ಗೌರವಯುತ ಅಂತ್ಯಸಂಸ್ಕಾರವನ್ನು ನಗರದ ಬಿಡಿನಗುಡ್ಡೆ ದಹನ ಭೂಮಿಯಲ್ಲಿ ಶುಕ್ರವಾರ ನೆರವೇರಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮಹಿಳೆಯರಿಗೂ ಸಮಾನ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ನೀಡಬೇಕು.
ಮಲ್ಪೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ₹1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಹಾಗೂ ಸುಸ್ಥಿರ ಅಭ್ಯಾಸಗಳನ್ನು ಉತ್ತೇಜಿಸುವ ಉದ್ದೇಶದಿಂದ, ಯೆನೆಪೋಯ ನರ್ಸಿಂಗ್ ಕಾಲೇಜಿನ ಇನ್ಸ್ಟಿಟ್ಯೂಷನಲ್ ಇನ್ನೋವೇಶನ್ ಕಮಿಟಿ (IIC) ಆಯುಷ್ ಕ್ಲಸ್ಟರ್, ಯೂತ್ ರೆಡ್ ಕ್ರಾಸ್ (YRC), ಪರಿಸರ ಅಧ್ಯಯನ ಕೇಂದ್ರ ಮತ್ತು ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಪರಿಸರ ದಿನಾಚರಣೆ 2026’ ರ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸರಣಿಯನ್ನು ಆಯೋಜಿಸಲಾಗಿತ್ತು.
ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಶನಿವಾರ ಶಾಲೆಗಳು ಹೊಸ ಸಮಯದಂತೆ ನಡೆಯಲಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಸಮಯ ಜಾರಿಯಾಗಿದೆ.
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ. ಆ ಹಣದಲ್ಲಿ ಅಕ್ರಮ ಎಸಗುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಸಿದ್ದಾರೆ.
ಕ್ಯಾಬ್ ಚಾಲಕ ಸಿಎನ್ಜಿ ತುಂಬಿಸಿಕೊಳ್ಳಲು ಕೋರಮಂಗಲಕ್ಕೆ ಬಂದಿದ್ದ ವೇಳೆ ಸಿಎನ್ಜಿ ಬಂಕ್ನಲ್ಲಿ ಅನಿರೀಕ್ಷಿತ ಅವಘಡ ಸಂಭವಿಸಿದೆ. ಗ್ಯಾಸ್ ತುಂಬುವ ವೇಳೆ ಪೈಪ್ ಸಿಡಿದು ಚಾಲಕನ ಕಣ್ಣಿಗೆ ತೀವ್ರ ಗಾಯವಾಗಿದೆ.
ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿದಾಗ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ತಿಳಿಸಿದ್ದಾರೆ.
ಧರ್ಮಸ್ಥಳದ ಸನ್ನಿಧಿ ಗೆಸ್ಟ್ ಹೌಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುದ್ದಿಗೋಷ್ಟಿ ನಡೆಸಿ ಕಳೆದ ಮೂರ್ನಾಲ್ಕು ದಿನಗಳ ಕಾಲ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರ ಭೇಟಿ ಮಾಡಿದ್ದೇನೆ. ದೆಹಲಿಯಿಂದ ನೇರವಾಗಿ ಧರ್ಮಸ್ಥಳ ಬಂದು ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದೇನೆ. ಮಂಜುನಾಥೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ. ರಾಜ್ಯದಲ್ಲಿ ಭೀಕರ ಬರಗಾಲದ ಸನ್ನಿವೇಶ ಇದೆ, ಅದು ಸರಿಯಾಗಬೇಕು ಎಂದರು.
ಕ್ಯಾರೆಟ್ ಅತ್ಯಂತ ಬಹುಮುಖ ಮತ್ತು ಪೌಷ್ಟಿಕ ತರಕಾರಿಯಾಗಿದ್ದು, ಆರೋಗ್ಯ ಪ್ರಯೋಜನಗಳಿಂದ ತುಂಬಿದೆ.