Showing 20 of 21209 articles • Page 1058 of 1061
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು ತನಿಖೆ ಚುರುಕುಗೊಳಿಸಿದ್ದು, ಇಂದು ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಆಟೋ ಏಕಾಏಕಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ದಾರುಣ ಘಟನೆ ಬಣಕಲ್ ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ.
ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆ ಮಾಡಿದರು.
ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ಎಂ. ರವಿಕುಮಾರ್ ಆಗ್ರಹಿಸಿದ್ದಾರೆ.
ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಟೀಂ ಇಂಡಿಯಾದ ಕೋಚ್ ಹುದ್ದೆ ನ್ಯೂಜಿಲೆಂಡ್ ಮಾಜಿ ನಾಯಕ, ನಿವೃತ್ತ ಆಟಗಾರ ಸ್ಟೀಫನ್ ಫ್ಲೆಮಿಂಗ್ ಅವರನ್ನು ಮನವೊಲಿಸಲು ಬಿಸಿಸಿಐ ಎಂಎಸ್ ಧೋನಿ ಅವರ ಸಹಾಯವನ್ನು ಕೋರಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಪ್ರತಿ ರ್ಯಾಲಿಯಲ್ಲೂ ವಾಗ್ದಾಳಿ, ಆರೋಪ, ಟೀಕೆ, ವ್ಯಂಗ್ಯ ಮಾಡುತ್ತಿದ್ದಾರೆ.
ಬಾಡಿಗೆ ಮನೆಯಲ್ಲಿ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.ಮನೆಯಿಂದ ದುರ್ವಾಸನೆ ಬರತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.
‘ಬಿಗ್ ಬಾಸ್ ಕನ್ನಡ 10’ರ ಖ್ಯಾತಿಯ ಡ್ರೋನ್ ಪ್ರತಾಪ್ ಇದೇ ಜೂನ್ 11ಕ್ಕೆ ಹುಟ್ಟುಹಬ್ಬವಾಗಿದ್ದು, ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದಾರೆ. ಬಡಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವಾಗಲು ಪ್ರತಾಪ್ ನಿರ್ಧರಿಸಿದ್ದಾರೆ.
ತಾಲೂಕಿನ ಹೆಡಗಿಮದ್ರಾ ಗ್ರಾಮದ ಶ್ರೀ ಶಾಂತಶಿವಯೋಗಿ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಹುಟ್ಟು ಹಬ್ಬದ ದಿನದಂದು ಮಠದ ಆವರಣದಲ್ಲಿ ರಕ್ತದಾನ ಶಿಬಿರ ನಡೆಯಿತು.
ಭಾರತದ ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿಯವರ 33ನೇ ಪುಣ್ಯತಿಥಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಚರಿಸಲಾಯಿತು.
‘ವಸಂತ ಬಂಗೇರ ಅವರು ಸದಾ ಬಡವರ ಪರ, ಸತ್ಯದ ಪರ ಇದ್ದರು. ಬಡವರ ಕೆಲಸ ಮಾಡಿಕೊಡಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಸರಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದು, ಒಂದು ವರ್ಷದ ಸಾಧನೆ ಶೂನ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪವಿತ್ರತೆ ಉಳಿಸಲು ಈ ಬಾರಿ 20 ಗ್ರೇಸ್ ಅಂಕ ನೀಡಲಾಗಿದೆ. ಗ್ರೇಸ್ ಅಂಕ ನೀಡಿರುವುದು ಈ ವರ್ಷಕ್ಕೆ ಮಾತ್ರ. ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್ ಅಂಕ ಇರುವುದಿಲ್ಲ.
ರೈತನ ಮನೆಯ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ಮನೆಯ ಛಾವಣಿ ಶೀಟ್ ಧ್ವಂಸಗೊಳಿಸಿ ಹೆಂಚುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಯಡಕುಮರಿ ಗ್ರಾಮದಲ್ಲಿ ನಡೆದಿದೆ.
ಬಿಜೆಪಿಯವರು ಬಜೆಟ್ ಓದುವುದಿಲ್ಲ ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ. ಬಜಪೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ನಾವು ಏನೇನು ಕೆಲಸ ಕಾರ್ಯ ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ ಎಂದರು
ಚುನಾವಣಾ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಅವರಿಗೆ ನಿಮ್ಮ ಬೆಲೆ ಎಷ್ಟು ಎಂದು ಪ್ರಶ್ನಿಸಿದ್ದ ಪಶ್ಚಿಮ ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಹೇಳಿಕೆಯನ್ನು ಚುನಾವಣಾ ಆಯೋಗ ಖಂಡಿಸಿದೆ.
ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ತಿದೆ. ಈ ಪ್ರಕರಣದಲ್ಲಿ ಹೇಮಾ ಹೆಸರು ಕೇಳಿ ಬಂದಿತ್ತು.
ಲಂಡನ್ನಿಂದ ಬಂದ ಸಿಂಗಾಪುರ ಏರ್ಲೈನ್ಸ್ ವಿಮಾನದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ತೀವ್ರ ಪ್ರಕ್ಷುಬ್ಧತೆ ಉಂಟಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ.