Showing 20 of 21626 articles • Page 108 of 1082
ಯೆನೆಪೋಯ ದಂತ ಮಹಾವಿದ್ಯಾಲಯ, ಯೆನೆಪೋಯ (ಪರಿಗಣಿತ ವಿಶ್ವವಿದ್ಯಾಲಯ)ದ ಮೌಖಿಕ ವೈದ್ಯಕೀಯ ಮತ್ತು ರೇಡಿಯಾಲಜಿ ವಿಭಾಗವು ವಿಭಾಗದ ಮುಖ್ಯಸ್ಥೆ ಡಾ. ವೀಣಾ ಕೆ. ಎಂ., ಪ್ರಾಧ್ಯಾಪಕಿ ಹಾಗೂ ವಿಭಾಗದ ಮುಖ್ಯಸ್ಥೆ ಅವರ ಮಾರ್ಗದರ್ಶನದಲ್ಲಿ ಯಂಗ್ ಇಂಡಿಯನ್ಸ್ (YI), ಮಂಗಳೂರು ಸಹಯೋಗದೊಂದಿಗೆ 2026ರ ಜೂನ್ 18ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಕಲ್ಬಾವಿ ಕನ್ಸ್ಯೂಮರ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಮೌಖಿಕ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿರುವ ತರಬೇತಿ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು 1ನೇ ಮಹಡಿಯಿಂದ ವಿದ್ಯಾರ್ಥಿಗಳು ಜಿಗಿದಿರುವ ಘಟನೆ ನಡೆದಿದೆ.
ನಟ ಪ್ರಕಾಶ್ ರಾಜ್ ವಿರುದ್ಧ ಬೆಂಗಳೂರಿನ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಹಲವು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ವಿಚಾರಣೆಗೆ ಹಾಜರಾಗಲು ಅವರು ವಿಫಲರಾಗಿದ್ದಾರೆ ಎಂದು 2019 ರಲ್ಲಿ ಸಲ್ಲಿಸಲಾದ ದೂರಿನಲ್ಲಿ ಹೇಳಲಾಗಿದೆ.
ಭಾರತೀಯ ಪರಂಪರೆಯಲ್ಲಿ ಮೈಸೂರು ಸಂಸ್ಥಾನದ ಹೆಸರು ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿರಲು ನಾಲ್ವಡಿ ಕೃಷ್ಣರಾಜ ಒಡೆಯರ ಆಳ್ವಿಕೆಯಲ್ಲಿ ಕೈಗೊಂಡ ಜನಪರ ಅಭಿವೃದ್ಧಿ ಕೆಲಸಕಾರ್ಯಗಳು ನೆರವಾಗಿವೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮಂಗಳೂರಿನ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಗೌರವಾನ್ವಿತ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ತಿಳಿದು ಕರ್ನಾಟಕ ರಾಜ್ಯ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಲಿಸುತ್ತಿದ್ದ ಮಾರುತಿ ಸಿಯಾಜ್ ಕಾರಿಗೆ ಬೆಂಕಿ ಕಾಣಿಸಿಕೊಂಡು ವಾಹನ ಭಾಗಶಃ ಸುಟ್ಟ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ.
ಐಎ ಎಸ್, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ “ಮಾರ್ಗದರ್ಶಿ – Cracking the UPSC Examination” ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು 2026ರ ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಸ್ ಐ ಆರ್ ಜನಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಪ್ರಸಾದ್ ಭಾಷಣ ಮಾಡಿ, ಎಸ್ ಐ ಆರ್ ಮೂಲಕ ಬಿಜೆಪಿ ಮತ್ತು ಆರ್ ಎಸ್ ಎಸ್ ನೈಜ ಮತದಾರರನ್ನು ಕೈ ಬಿಡಲು ಪ್ರಯತ್ನಿಸುತ್ತಿದೆ. ಪ್ರತೀ ವರ್ಷ ಜನವರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತಿತ್ತು.
ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರು ಅಪರೂಪದ ‘ಥೊರಾಸೊಸ್ಕೋಪಿಕ್ ಶ್ವಾಸಕೋಶದ ಹರ್ನಿಯಾ’ (lung herniation) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ದ.ಕ. ಜಿಲ್ಲಾ ಖಾಝಿ ಅಲ್ಲಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೆಸ್ಕಾಂ ಜಾಗೃತ ದಳದ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯಕುಮಾರ್ ಅವರನ್ನು ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2025-26ನೇ ಸಾಲಿನ ‘ಡಿಜಿ-ಐಜಿಪಿ ಪ್ರಶಂಸನಾ ಪದಕ’ಕ್ಕೆ ಆಯ್ಕೆ ಮಾಡಲಾಗಿದೆ.
ಇಂದಿನ ವಿದ್ಯಮಾನಗಳಲ್ಲಿ ರಾಜಕಾರಣದಲ್ಲಿ ದೇವರ ಹೆಸರನ್ನು ತರುವುದು, ಆಣೆ ಪ್ರಮಾಣ ಮಾಡುವುದು ಅಷ್ಟೊಂದು ಸಮಂಜಸವಲ್ಲ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಆರ್ಎಸ್ಎಸ್ ನೋಂದಣಿ ಬಗ್ಗೆ ಮಾತನಾಡುವ ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಶಕ್ತಿಯಿದ್ದರೆ ವಿಧಾನಸಭೆಯ ಒಳಗಡೆಯೇ ಆರ್ಎಸ್ಎಸ್ ಪ್ರಾರ್ಥನೆ ಹಾಡಿರುವ ಈಗಿನ ಸಿಎಂ ಬಗ್ಗೆ ಪ್ರಶ್ನೆ ಮಾಡಲಿ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸವಾಲೆಸೆದರು.
ನಗರದ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರು ನಗರದ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ನಡುವೆ ಜೂನ್ 22, 2026 ರಂದು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪರಸ್ಪರ ಸಹಕಾರ ಒಪ್ಪಂದಕ್ಕೆ (MoU) ಸಹಿ ಹಾಕಲಾಯಿತು.
ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿಯು ಮೇ 22 ರಿಂದ ನಾಪತ್ತೆಯಾಗಿರುತ್ತಾರೆ.
ಉಡುಪಿ: ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆ ಪೊಲೀಸರು ವೈದ್ಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಉಡುಪಿ ಕಾಮತ್ ನರ್ಸಿಂಗ್ ಹೋಮ್ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ (76), ಸಂತೆಕಟ್ಟೆ ನೇಜಾರಿನ ಎಸ್. ಪ್ರಕಾಶ್ (50), ಕಾರ್ಕಳದ ಸೂಡ ನಿವಾಸಿ ಸಂಪತ್ (22) ಹಾಗೂ ನಂದಳಿಕೆಯ ಸುಪ್ರೀತಿ (22) ಬಂಧಿತರು. ಜೂನ್ 19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿಚಾರಕರು ಮಕ್ಕಳ ರಕ್ಷಣಾ […]
ಅಚಾನಕ್ಕಾಗಿ ತನ್ನೆದುರಿಗೆ ಸಿಕ್ಕ ಪ್ರಾಣಿಗಳ ಮೇಲೆ ಏಕಾಏಕಿ ದಾಳಿ ನಡೆಸುವ ಹೆಬ್ಬುಲಿ ನೀಲದಂತದ ಆನೆಯನ್ನ ನೋಡಿ ಸೈಲೆಂಟಾಗಿ ಮಲಗಿದ ದೃಶ್ಯ ಬಂಡೀಪುರದಲ್ಲಿ ಸೆರೆಯಾಗಿದೆ.
ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ), ಕ. ರಾ. ರ. ಸಾ. ನಿಗಮ, ಮಂಗಳೂರು ವಿಭಾಗದ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಗಿದೆ.
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೂಲ ಉದ್ದೇಶ ಪ್ರಜಾಪ್ರಭುತ್ವದಲ್ಲಿ ನೈಜ ಭಾರತೀಯರ ಮತದಾನದ ಹಕ್ಕನ್ನು ಮತ್ತಷ್ಟು ಗಟ್ಟಿಗೊಳಿಸುವುದಾಗಿದ್ದು, ಭಾರತೀಯರಲ್ಲದವರಿಗೆ ಮತದಾನದ ಹಕ್ಕು ನಿರಾಕರಿಸುವುದೇ ಇದರ ಆಶಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.