Showing 20 of 21613 articles • Page 110 of 1081
ಮಾದಾವರ – ರೇಷ್ಮೆ ಸಂಸ್ಥೆ ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ನಡೆದಿದೆ.
ಅನಂತಪುರದ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ‘ನನ್ನ ಅತ್ತೆ ಸಾಯುವಂತೆ ಮಾಡು’ ಎಂದು ಬರೆದ 20 ರು. ನೋಟು ಪತ್ತೆಯಾಗಿದೆ.
ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಜೂ.27 ರಂದು ನಡೆಯಲಿರುವ ನಾಡಪ್ರಭು ಕೆಂಪೇಗೌಡರ ಜಯಂತಿ ಹಾಗೂ ಜು.2 ರಂದು ನಡೆಯಲಿರುವ ಡಾ.ಫ.ಗು ಹಳೆಕಟ್ಟೆ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕು ಆಡಳಿತ ಭವನದ ತಹಶೀಲ್ದಾರ್ ಕಛೇರಿಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು.
ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) ವತಿಯಿಂದ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ಆಯೋಜಿಸಲಾದ ಭವ್ಯ ‘ಸಂಭ್ರಮ 2026’ ಸಾಂಸ್ಕೃತಿಕ ಮಹೋತ್ಸವದಲ್ಲಿ, ಇಡೀ ಕತಾರ್ ಅನಿವಾಸಿ ಕನ್ನಡಿಗರ ಪರವಾಗಿ ಖ್ಯಾತ ಹಿನ್ನೆಲೆ ಗಾಯಕ ಹಾಗೂ “ಮೆಲೋಡಿ ಕಿಂಗ್” ಶ್ರೀ ರಾಜೇಶ್ ಕೃಷ್ಣನ್ ಅವರಿಗೆ ಪ್ರತಿಷ್ಠಿತ “ಸ್ವರ ಯೋಗಿ” ಗೌರವ ಬಿರುದು ಪ್ರದಾನ ಮಾಡಿ ಸನ್ಮಾನಿಸಲಾಯಿತು.
ನಗರದ ಆದಿ ಉಡುಪಿ ಸಂತೆ ಮಾರ್ಕೆಟ್ನಲ್ಲಿರುವ ಹಣ್ಣು–ಹಂಪಲು ಸಂಗ್ರಹ ಅಂಗಡಿಗೆ ಭಾನುವಾರ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ.
12ನೇ ವಿಶ್ವ ಯೋಗ ದಿನವನ್ನು ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಉಡುಪಿ ಕೃಷ್ಣ ಮಠ, ಶಿರೂರು ಮಠ ಹಾಗೂ ಪತಂಜಲಿ ಯೋಗ ಪೀಠದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಯೋಗಪಟುಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು.
ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದು, 2 ವರ್ಷದ ಮಗು ಅನಾಥವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಸಮೀಪದ ಕಜೆಯಲ್ಲಿ ನಡೆದಿದೆ.
ಕರಾವಳಿ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ನೂತನ ಮುಖ್ಯಮಂತ್ರಿ ಡಿಕೆಶಿಯವರು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಕರೆಯುವುದಾಗಿ ಹೇಳಿದ್ದು, ಈ ಮೂಲಕ ಕರಾವಳಿ ಪ್ರವಾಸೋದ್ಯಮ ಹೊಸ ರೂಪು ಪಡೆಯುವ ನಿರೀಕ್ಷೆ ಇದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರು: ಇದು ಪೊಲೀಸ್ ಚೌಕಿಯೋ ಅಥವಾ ಚಾ ಕುಡಿಯುವ ಸ್ಟಾಂಡ್ ಎಂಬ ಗೊಂದಲ ಉಂಟಾಗಿದೆ. ಮಂಗಳೂರು ಸ್ಟೇಟ್ ಬ್ಯಾಂಕ್ ಸರ್ಕಲ್ ಬಳಿ ಈ ದೃಶ್ಯ ಕಂಡು ಬಂದಿದೆ. ಹೋಟೆಲ್ ಮಾಲಕರೇ ಚಾ ಕುಡಿಯಲು ನಿಮ್ಮಲ್ಲಿ ಸ್ಥಳ ಇಲ್ಲವೇ, ಟ್ರಾಫಿಕ್ ಪೊಲೀಸ್ ಚೌಕಿ ಚಾ ಕುಡಿಯುವ ತಾಣವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ಇಲ್ಲಿ ಗಮನ ಹರಿಸಬೇಕಾಗಿದೆ. View this post on Instagram A post shared by News Karnataka (@newskarnataka)
ಸ್ವಾತಂತ್ರ್ಯ ನಂತರ ದೇಶದಲ್ಲಿ ಮುಸಲ್ಮಾನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾ ಬಂದಿದೆ, ಆದರೆ ಮುಸಲ್ಮಾನರಿಗೆ ಸೂಕ್ತ ಸ್ಥಾನ ನೀಡದೆ ತುಳಿಯುತ್ತಾ ಬರಲಾಗಿದ್ದು ಬಾಬರಿ ಮಸೀದಿ ಧ್ವಂಸ ಬಳಿಕ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ ಎಂದು ಹನೀಫ್ ಖಾನ್ ಕೊಡಾಜೆ ಹೇಳಿದರು.
ನಗರದ ಪಡೀಲ್ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಕಳೆದ 12ವರ್ಷಗಳಿಂದ ಬೀದಿಬದಿಯಲ್ಲಿ ಹೂವಿನ ವ್ಯಾಪಾರ ನಡೆಸುತಿದ್ದ ವಿಕಾಲಾಂಗ ಬೀದಿ ವ್ಯಾಪಾರಿಗಳಾದ ಚಂದ್ರಹಾಸ್ ಮತ್ತು ಸುನೀತಾ ಎಂಬವರ ಹೂವಿನ ಸ್ಟಾಲನ್ನು ನಗರಪಾಲಿಕೆಯ ವಲಯ 2ರ ಆಯುಕ್ತೆ ರೇಖಾ ಶೆಟ್ಟಿ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು ನಿಯಮಬಾಹಿರ ಕಾರ್ಯಾಚರಣೆ ನಡೆಸಿ ಅವರ ಸೊತ್ತುಗಳನ್ನು ಬುಲ್ದೊಜರ್ ಬಳಸಿಕೊಂಡು ಧ್ವಂಸಗೊಳಿಸಿ ನಾಶಪಡಿಸಿರುವ ಪಾಲಿಕೆಯ ಅಮಾನವೀಯ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಯೋಜಿಸಲಾಗುವ 16ನೆ ಆವೃತ್ತಿಯ ಈ ವರ್ಷದ ಉದ್ಯೋಗ ಮೇಳ ಆ.7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.
ನಿಶ್ಚಿತ ವಧುವಿನೊಂದಿಗೆ ಲೋಹಗಡ್ ಕೋಟೆಗೆ ಟ್ರೆಕಿಂಗ್ ಗೆ ತೆರಳಿದ್ದ ಪುಣೆಯ 26 ವರ್ಷದ ಯುವಕ 400 ಅಡಿ ಆಳದ ಕಂದಕಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ (84) ಅವರು ಕೀರ್ತಿ ಸುರೇಶ್ ಮತ್ತು ಕೃತಿ ಶೆಟ್ಟಿಯ ಕೈಗಳನ್ನು ಹಿಡಿದು ಎಳೆದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಲೇ, ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದೆ. ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲ್ ಡ್ರೋನ್ ದಾಳಿ ನಡೆಸಿದ್ದು, 5 ಜನ ಮೃತಪಟ್ಟಿದ್ದಾರೆ.
ಎರಡು ಖಾಸಗಿ ಬಸ್ ಗಳ ಚಾಲಕರು ಹಾಗೂ ನಿರ್ವಾಹಕರ ಮಧ್ಯೆ ಒವರ್ ಟೇಕ್ ವಿಚಾರಕ್ಕೆ ಮನಸ್ತಾಪ ಉಂಟಾಗಿ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಬಸ್ ಅನ್ನು ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವವು ಜೂ.23-2026 ರಿಂದ ಜೂ.30-2026 ರವರೆಗೆ ನಡೆಯಲಿದೆ.