Showing 20 of 21629 articles • Page 113 of 1082
ಯುವಕರ ಗುಂಪೊಂದು ನಡುರಸ್ತೆಯಲ್ಲೇ ತಲ್ವಾರ್ ಹಿಡಿದು ಪುಂಡಾಟ ಮೆರೆದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಕರ್ನಾಟಕದ ಕರಾವಳಿ ಪ್ರದೇಶ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಡುವಿನ ಹೈಸ್ಪೀಡ್ ರೈಲು ಸಂಪರ್ಕದ ಕನಸನ್ನು ನನಸಾಗಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ.
ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣದಲ್ಲಿ ಶಾಲಾ ಸಹ ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್ಪಿ ಹಾಗೂ ಬಿಆರ್ಪಿ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ರಾಷ್ಟ್ರೀಯ ಹೆದ್ದಾರಿ-05 ರಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದಾಗಿ, ಎರಡೂ ದಿಕ್ಕುಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು.
ಜೂನ್ 21 ರಿಂದ ಪ್ರಾರಂಭವಾಗಿ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿದ್ದಾರೆ.
ಟೋಕಿಯೋದ ಉತ್ತರದ ವಾರ್ಡ್ ಆದ ‘ಕಿಟಾ’ದಲ್ಲಿರುವ ನಾಲ್ಕು ಅಂತಸ್ತಿನ ‘ತಕಿನೊಗಾವಾ ನಂ. 3 ಪ್ರಾಥಮಿಕ ಶಾಲೆ’ಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಕಬ್ಬಿಣದ ಸೇತುವೆಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಕೊಳ್ಳೇಗಾಲ ನ್ಯಾಯಾಲಯದ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಕೊಳ್ಳೇಗಾಲ ನಗರದ ಮುಡಿಗುಂಡ ಬಳಿ ಜೂ.18ರ ಗುರುವಾರ ತಡರಾತ್ರಿ ಸಂಭವಿಸಿದೆ.
ಸಿಎಂ ಡಿ.ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳಿದ್ದಾರೆ.
ಗಡಿ ಭದ್ರತಾ ಪಡೆಯ ನಾಲ್ವರು ಮಹಿಳಾ ಸಿಬ್ಬಂದಿಗಳು 8,848.86 ಮೀಟರ್ ಎತ್ತರದ ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು ಏರುವ ಮೂಲಕ ಇತಿಹಾಸ ಬರೆದಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ.
ವಿಶೇಷ ಆರ್ಥಿಕ ವಲಯ ನಿಯಮಿತ (MSEZL) ಕರ್ನಾಟಕ ರಾಜ್ಯ ಮಾಲಿನ್ಯನಿಯಂತ್ರಣ ಮಂಡಳಿ, ಮಂಗಳೂರು, ಅರಣ್ಯ ಇಲಾಖೆ, ಮಂಗಳೂರು ವಲಯ ಇವರ ಸಂಯುಕ್ತ ಅಶ್ರಯದಲ್ಲಿ ವಿಶ್ವ ಪರಿಸರ ದಿನ ಪ್ರಯುಕ್ತ ಸಾಮೂಹಿಕ ಗಿಡ ನಾಟಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 10.06.2026 ರಂದು MSEZ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕರಾವಳಿಯಲ್ಲಿ ಮುಂಗಾರು ಪ್ರವೇಶಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದಿರುವುದು ನಾಡದೋಣಿ ಮೀನುಗಾರರ ಆತಂಕ ಹೆಚ್ಚಿಸಿದೆ.
ಬಸ್ ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.
ಮಿರ್ಜಾಪುರ ಕಲೆಕ್ಟರೇಟ್ ಬಳಿ ಪೊಲೀಸ್ ಸಮವಸ್ತ್ರ ಧರಿಸಿ ಸಬ್ ಇನ್ಸ್ಪೆಕ್ಟರ್ ಎಂದು ನಟಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಮಾರು 25 ವರ್ಷಗಳಷ್ಟು ಹಳೆಯದಾದ ವಿಧಾನಸಭೆ ಸಂಪ್ರದಾಯಕ್ಕೆ ಬದಲಾಗಿ, ವಿಜಯ್ ನೇತೃತ್ವದ ಸರ್ಕಾರ ಅಧಿಕಾರ ವಹಿಸಿಕೊಂಡ ಮೇಲೆ ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಪ್ರತಿಧ್ವನಿಸಿತು.
12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಮಗ್ರ ಆರೋಗ್ಯದ ಬಗ್ಗೆ ಸ್ಥಳೀಯ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ 17 ಜೂನ್ 2026ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಉಳ್ಳಾಲ ಆಯುಷ್ ಘಟಕದಲ್ಲಿ ಯೆನೆಪೋಯ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆ, ನರಿಂಗಾಣ ಹಾಗೂ ಆಯುಷ್ ಘಟಕ, ಉಳ್ಳಾಲ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಯಿತು.
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕುಕ್ಕರ್ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.
ಟಿಪ್ಪರ್ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಅಪಘಾತ ಸಂಭವಿಸಿದೆ.