Showing 20 of 21629 articles • Page 114 of 1082
ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನ ವಿವಿಧೆಡೆ ಬಾಡಿಗೆ ಮನೆ ಹಾಗೂ ಸ್ಪಾಗಳನ್ನು ಕೇಂದ್ರವಾಗಿಸಿಕೊಂಡು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗಿ ಕೇವಲ 48 ದಿನಗಳಲ್ಲೇ ನವವಿವಾಹಿತೆಯೊಬ್ಬಳು ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮುಂಬೈ ಸಮೀಪದ ಅಂಬರ್ನಾಥ್ನಲ್ಲಿ ನಡೆದಿದೆ.
ಬೊಲೆರೊ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ನಡೆದಿದೆ.
ಎರಡು ಕಾರುಗಳು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ರಾಜ್ಯದಲ್ಲಿ ‘ನೀಟ್’ ಪರೀಕ್ಷೆ ವಿರುದ್ಧದ ಆಕ್ರೋಶವನ್ನು ಮತ್ತೊಮ್ಮೆ ಭುಗಿಲೇಳುವಂತೆ ಮಾಡಿದೆ.
ಬಾಲಕನ ಮೇಲೆ ಆರೇಳು ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೋಗಿಹಳ್ಳಿಯಲ್ಲಿ ನಡೆದಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನಿನ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಎರಡೂ ದೇಶಗಳ ನಡುವಿನ ದ್ವೇಷವನ್ನು ಕೊನೆಗೊಳಿಸುವುದು, ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವುದು ಮತ್ತು ನಿರ್ಬಂಧಗಳ ಪರಿಹಾರ ಮತ್ತು ಇರಾನ್ನ ಪರಮಾಣು ಕಾರ್ಯಕ್ರಮವನ್ನು ಒಳಗೊಂಡ ವಿಶಾಲ ಒಪ್ಪಂದದ ಕುರಿತು ಮಾತುಕತೆಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿರುವ 14 ಅಂಶಗಳ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದ್ದಾರೆ.
ಜಾರ್ಖಂಡ್ ರಾಜಧಾನಿ ರಾಂಚಿಯ ಆರ್ಎಸ್ಎಸ್ ಕಚೇರಿ ಮೇಲೆ ಮಧ್ಯರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.
ಎತ್ತಿನಹೊಳೆ (ನೇತ್ರಾವತಿ ನದಿ ತಿರುವು) ಯೋಜನೆಯಿಂದ ಕರಾವಳಿ ಭಾಗದ ಪರಿಸರ, ಜೀವವೈವಿಧ್ಯ ಹಾಗೂ ಕುಡಿಯುವ ನೀರಿನ ಭದ್ರತೆಗೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಆಗ್ರಹಿಸಿದರು.
ಉದ್ಯೋಗ ಸೃಷ್ಟಿ, ಸಾಮಾಜಿಕ ಭದ್ರತಾ ವ್ಯಾಪ್ತಿ ವಿಸ್ತರಣೆ ಹಾಗೂ ಉದ್ಯೋಗಾರ್ಹತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್ಗಾರ್ ಯೋಜನೆ (ಪಿಎಂವಿಬಿಆರ್ವೈ) ಕುರಿತ ಜಾಗೃತಿ ಮತ್ತು ಫಲಾನುಭವಿಗಳ ಕಾರ್ಯಕ್ರಮವು ಜೂನ್ 19ರಂದು ಸಂಜೆ 4 ಗಂಟೆಗೆ ನಗರದ ಬಂದರಿನ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಪಿಎಫ್ ಆಯುಕ್ತ ಸಂದೀಪ್ ಬಿಸ್ವಾಸ್ ತಿಳಿಸಿದ್ದಾರೆ.
ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪುತ್ತೂರಿನ ಕುಖ್ಯಾತ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಮಂಗಳವಾರ (ಜೂನ್ 16) ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಹೋಬಳಿಯ ಚಿಕ್ಕಹರಳಗೆರೆ ಮುಖ್ಯ ರಸ್ತೆಯಲ್ಲಿ ಬುಧವಾರ ಶಾಲಾ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಚಿಕ್ಕಹರಳಗೆರೆ ಗ್ರಾಮದ ಕಾಮಾಕ್ಷಮ್ಮ (49) ಮೃತಪಟ್ಟಿದ್ದು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಕ್ರಮವಾಗಿ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿ ದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಧಾನಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆಯಡಿ ಪ್ರಧಾನಿ ಮೋದಿ ಅವರು ಶುಕ್ರವಾರ ದೆಹಲಿಯಲ್ಲಿ ಸುಮಾರು 2,400 ಕೋಟಿ ರೂ. ಮೌಲ್ಯದ ಪ್ರೋತ್ಸಾಹ ಧನವನ್ನು ವಿತರಣೆ ಮಾಡಲಿದ್ದಾರೆ.
ಭಾರತ ಶಿಕ್ಷಣ ವ್ಯವಸ್ಥೆಯು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬಾವಿಯಿಂದ ಪೂರೈಕೆಯಾದ ನೀರನ್ನು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಬೀರನೂರ ಗ್ರಾಮದಲ್ಲಿ ನಡೆದಿದೆ.
ಲಿವ್-ಇನ್ ರಿಲೇಶನ್ಶಿಪ್ ನಲ್ಲಿದ್ದ ಪ್ರೇಯಸಿಯನ್ನು ಕತ್ತು ಹಿಸುಕಿ ಹತ್ಯೆಗೈದ ಪ್ರಕರಣದಡಿ ಆರೋಪಿಯನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ದೊಡ್ಡಣ್ಣ ನಿಧನರಾಗಿದ್ದಾರೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ದರು.
ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದಲ್ಲಿ ನಡೆದಿದೆ. ಯುವಕನೊಬ್ಬನ ನಿರಂತರ ಕಿರುಕುಳವೇ ಈ ದುಡುಕಿನ ನಿರ್ಧಾರಕ್ಕೆ ಕಾರಣ ಎಂದು ಆರೋಪಿಸಲಾಗಿದೆ.