Showing 20 of 21592 articles • Page 12 of 1080
ತಾಲ್ಲೂಕಿನ ದೇಬೂರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿನ ಮೂಲಸೌಕರ್ಯಗಳ ಕೊರತೆ.
ಪಡೀಲ್ನ ಕಾರು ಶೋರೂಂವೊಂದರಲ್ಲಿ ಶುಕ್ರವಾರ ರಾತ್ರಿ ಹಠಾತ್ ಹೊಗೆ ಸಹಿತ ಬೆಂಕಿ.
ಮೈಸೂರು ದಸರಾ ಉತ್ಸವದ ಅಂಗವಾಗಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳವನ್ನು ಆಯೋಜನೆ.
ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ವಿತ್ತೀಯ ಕೊರತೆ ಇದ್ರು ಸಚಿವ ಸಂಪುಟದಲ್ಲಿ ಬರಪೂರ ಘೋಷಣೆ ಆರೋಪ ಕೇಳಿಬಂದಿದ್ದು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯಿಂದ ಮಂಗಳೂರಿನ ಮಿನಿ ವಿಧಾನಸೌಧ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ತಾಲೂಕಿನ ತುಂಬುಸೋಗೆ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ.
ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ಬಜ್ಪೆ ಶಾಖೆಯ ಉದ್ಘಾಟನಾ ಸಮಾರಂಭ
ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ (VGST) ವಿಜ್ಞಾನ ಮತ್ತು ತಂತ್ರ ಜ್ಞಾನ ಇಲಾಖೆ, ಕರ್ನಾಟಕ ಸರಕಾರ,
2026 ನೇ ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಯುವ ಕವಿ ಮತ್ತು ಕಥೆಗಾರ ಗ್ಲ್ಯಾನಿಶ್ ಜ್ಯೂಡ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.
ಶಾರ್ಜಾದಲ್ಲಿ ಅಮಾನವೀಯವಾಗಿ ಹತ್ಯೆಗೀಡಾದ ಕುಂದಾಪುರ ತಾಲೂಕಿನ ಹೊನ್ನನಕೇರಿ ನಿವಾಸಿ ಆಲ್ವಿನ್ ಪ್ರಕಾಶ್ ಕುಂದರ್ ಅವರ ಪಾರ್ಥಿವ ಶರೀರ ಶುಕ್ರವಾರ ತವರಿಗೆ ತಲುಪಿತು.
ಉಡುಪಿ–ಮೂಡುಬೆಳ್ಳೆ ಮಾರ್ಗದಲ್ಲಿ ಸಂಚರಿಸುವ ‘ಶ್ರೀ ಕೃಷ್ಣಪ್ರಸಾದ್’ ಹೆಸರಿನ ಸಿಟಿ ಬಸ್ವೊಂದು ದೆಂದೂರುಕಟ್ಟೆಯ ಎಂಆರ್ಪಿಎಲ್ ಪೆಟ್ರೋಲ್ ಪಂಪ್ ಬಳಿ ಗುರುವಾರ ತಡರಾತ್ರಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಆಟೋಇಮ್ಯೂನ್ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಧ್ಯತೆಗಳು ಹಾಗೂ ಆಧುನಿಕ ರೋಗನಿರೋಧಕ ವಿಜ್ಞಾನದೊಂದಿಗೆ ಅದರ ಸಮನ್ವಯ ಕುರಿತು ಜಾಗತಿಕ ಮಟ್ಟದ ಚರ್ಚೆಗೆ ಉಡುಪಿ ವೇದಿಕೆಯಾಗಲಿದೆ.
ವಿಶ್ವ ಹೃದಯ ದಿನದ ಅಂಗವಾಗಿ ಹೃದಯದ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆಎಂಸಿ ಆಸ್ಪತ್ರೆ ಮಂಗಳೂರು ವತಿಯಿಂದ ‘ವಿಶ್ವ ಹೃದಯ ದಿನ ವಾಕ್ಥಾನ್ 2026’ ಆಯೋಜಿಸಲಾಗಿದೆ. ಸೆ.27ರಂದು ಬೆಳಗ್ಗೆ 6.15ಕ್ಕೆ ವಾಕ್ಥಾನ್ ನಡೆಯಲಿದೆ ಎಂದು ಕೆಎಂಸಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ನರಸಿಂಹ ಪೈ ತಿಳಿಸಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಸರ್ಕಾರ ಮುಂದಾಗಿರುವುದನ್ನು ಸ್ವಾಗತಿಸುತ್ತೇವೆ.
ಯೆನೆಪೋಯ (ಡೀಮ್ಡ್ ಟು ಬಿ ಯುನಿವರ್ಸಿಟಿ)ಯ ಅಧ್ಯಾಪಕರಾದ ಡಾ. ಫಹಿಝಾ ಎ. ಮತ್ತು ಡಾ. ರೂಬೆನ್ ಎ. ಜೇಕಬ್ ಸ್ಥಾಪಿಸಿದ ಫುವು ಇನೋವೇಷನ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಬ್ಲೂ 2026ರ ಟಾಪ್ 10 ಸ್ಟಾರ್ಟ್ಅಪ್ಗಳಲ್ಲಿ ಸ್ಥಾನ ಪಡೆದಿದೆ. ಈ ಕಾರ್ಯಕ್ರಮಕ್ಕೆ 110ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಅರ್ಜಿ ಸಲ್ಲಿಸಿದ್ದವು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ ನೀಡಿರುವುದು ಹಾಗೂ ಕರಾವಳಿ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳಿಗೆ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ), ವಾಮಂಜೂರು ಆಯೋಜಿಸಿದ್ದ ವಿಟಿಯು ಮಂಗಳೂರು ವಿಭಾಗದ ಪುರುಷರ ಹಾಗೂ ಮಹಿಳೆಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಎಸ್.ಜೆ.ಇ.ಸಿ ಮಹಿಳಾ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಪುರುಷರ ತಂಡವು ರನ್ನರ್ಅಪ್ ಸ್ಥಾನ ಪಡೆದುಕೊಂಡಿದೆ.
ರೈಲಿಗೆ ಎಮ್ಮೆಗಳು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ
ಬರಗಾಲದ ಬಿಸಿ ಮಂಗಳೂರಿಗೂ ತಟ್ಟುತ್ತಿದ್ದು, ಈಗಲೇ ನಗರದಲ್ಲಿ ಕುಡಿಯುವ ನೀರಿಗೆ ಅಭಾವವಿದೆ. ಮುಂದಿನ ಮಾರ್ಚ್ ಬಿಡಿ, ಇದೇ ವರ್ಷಾಂತ್ಯಕ್ಕೆ ಸಮಸ್ಯೆ ವಿಪರೀತ ಹಂತಕ್ಕೆ ಹೋಗುವ ಲಕ್ಷಣಗಳಿವೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು.