Showing 20 of 21629 articles • Page 122 of 1082
ಶಾಲಾ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಕೆಳಗೆ ಬಿದ್ದು ಹದಿನೈದು ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಎಲ್ಐಸಿ ಕಾಲನಿಯಲ್ಲಿರುವ ಜನಸೇವಾ ಖಾಸಗಿ ಶಾಲೆಯಲ್ಲಿ ನಡೆದಿದೆ.
ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.
ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಜಿಲ್ಲೆಯ ವಿವಿಧ ಭಾಗಗಳ ಹೊಳೆ, ತೊರೆ ಹಾಗೂ ಸಿಹಿನೀರಿನ ಜಲಮೂಲಗಳಲ್ಲಿ ಸಾಂಪ್ರದಾಯಿಕ ಮೀನು ಬೇಟೆ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ. ಗ್ರಾಮೀಣ ಪ್ರದೇಶಗಳ ಮೀನುಗಾರರು ಹಾಗೂ ಮೀನು ಪ್ರಿಯರು ಉಬಾರ್ ಸೇರಿದಂತೆ ವಿವಿಧ ಸಾಂಪ್ರದಾಯಿಕ ವಿಧಾನಗಳ ಮೂಲಕ ಮೀನು ಹಿಡಿಯುವ ಕಾರ್ಯದಲ್ಲಿ ತೊಡಗಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಮಂಗಳವಾರ ರಾತ್ರಿ ಹೊರರಾಜ್ಯದ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿಯ ನಡುವೆ ಗಲಾಟೆ ನಡೆದು, ದೂರು ಪ್ರತಿದೂರು ದಾಖಲಾಗಿದೆ.
ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಪಂಚಾಯತ್ ವಾಣಿಜ್ಯ ಸಂಕೀರ್ಣದ ಹಿಂಭಾಗದಲ್ಲಿ ತ್ಯಾಜ್ಯಗಳನ್ನು ರಾಶಿ ಹಾಕಿದ್ದು, ರೋಗ ಭೀತಿ ಎದುರಾಗಿದೆ.
ಗೋಸೇವಾ ಗತಿವಿಧಿ ಮತ್ತು ಗವ್ಯ ಉತ್ಪನ್ನಗಳ ಮಾರುಕಟ್ಟೆ ಆಯಾಮ ಮಂಗಳೂರು ವಿಭಾಗದಿಂದ ಗೋವಿನಿಂದ ನನಗೇನು? ಗೋವಿಗಾಗಿ ನಾನೇನು ಮಾಡಬಹುದು ವಿಷಯದಲ್ಲಿ ಬಿ ಫಾರ್ಮ್ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ ‘ಹಳದಿ ಎಲೆ ರೋಗ’ ಮತ್ತು ‘ಎಲೆ ಚುಕ್ಕಿ ರೋಗ’ ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಪ್ರಮುಖ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈ ರೋಗಗಳ ವ್ಯಾಪಕ ಹರಡುವಿಕೆಯಿಂದಾಗಿ ರೈತರು ಎದುರಿಸುತ್ತಿರುವ ಗಂಭೀರ ಆರ್ಥಿಕ ಮತ್ತು […]
ಮಂಗಳೂರಿನ ಪ್ರತಿಭಾವಂತ ಮಗಳು ವೆನ್ಸಿಟಾ ಡಾಯಸ್ ಅವರು, ಜೂನ್ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಕಜ್ಜ’ದ ಮೂಲಕ ತುಳು ಸಿನಿಮಾರಂಗದಲ್ಲಿ ತಮ್ಮ ಹೆಜ್ಜೆಯನ್ನು ಮುಂದುವರಿಸುತ್ತಿದ್ದು, ಯುವ ಕನಸುಗಾರರಿಗೆ ಸ್ಫೂರ್ತಿಯಾಗಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಬರೋಬ್ಬರಿ ₹5.30 ಕೋಟಿ ವಂಚಿಸಿದ್ದ ತಂದೆ ಮತ್ತು ಮಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪತ್ನಿ, ಮಗನನ್ನು ಉಸಿರುಗಟ್ಟಿಸಿ ಕೊಂದು ಗಂಡನು ನೇಣಿಗೆ ಶರಣಾದ ಘಟನೆ ಇಲ್ಲಿನ ನೆಹರು ನಗರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಒಂದೇ ಕುಟುಂಬದ ಮೂವರು ಸಾವು ಪ್ರಕರಣ ಆತಂಕಕ್ಕೆ ಕಾರಣವಾಗಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿರುವ ರಾಷ್ಟ್ರೀಯ ಇಸ್ಪಾತ್ ನಿಗಮ್ ಲಿಮಿಟೆಡ್ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 9 ರಿಂದ ಜೂನ್ 13 ರವರೆಗೆ ವ್ಯಾಪಕ ಮಳೆಯಾಗುವಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹಾಗೂ ಫೋಟೋ-ವಿಡಿಯೋಗಳನ್ನು ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದಡಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಘಟನೆ ಸಂಬಂಧ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.
: ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಳೆದ ಒಂದೆರಡು ದಿನಗಳಿಂದ ಸುರಿದ ಮಳೆಗೆ ಜಪ್ಪಿನಮೊಗರು ಶಾಲೆಯೊಂದರ ಸಮೀಪದ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ.