Showing 20 of 21629 articles • Page 123 of 1082
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ 23 ಲಕ್ಷದ 67 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ದಸ್ತಗಿರಿಗೆ ಸಿಗದೇ, ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ದಸ್ತಗಿರಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಎಡಪದವು ಪಂಚ್ಯಾತ್ ವ್ಯಾಪ್ತಿಯ ಕೊರ್ಡೆಲ್ , ಪದರಂಗಿ ಗ್ರಾಮದಲ್ಲಿ ಕುಡಿಯುವ ನೀರು ಸಹಿತ ಇತರ ಮೂಲಭೂತ ಸೌಕರ್ಯ ವಂಚಿತರಾಗಿದ್ದು ಎಡಪದವು ಪಂಚ್ಯಾತ್ ಗೆ ಎಷ್ಟೇ ಮನವಿ ನೀಡಿದರು ಸ್ಪಂದಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಎಡಪದವು ಪಂಚ್ಯಾತ್ ಎದುರು ಪ್ರತಿಭಟನೆಯನ್ನ ಮಾಡಲಾಯಿತು.
ತಾಲ್ಲೂಕು ಆಡಳಿತ ನಿಷ್ಕ್ರಿಯ ಮತ್ತು ಕಪಿಲಾ ನದಿ ನೀರು ಹರಿಯುತ್ತಿದ್ದರೂ, ನೀರಾವರಿ ಯೋಜನೆಯನ್ನು ರೂಪಿಸಿಲ್ಲ. ನಂಜನಗೂಡು ತಾಲ್ಲೂಕಿನ ಎಲ್ಲಾ ಹೋಬಳಿಗಳಿಗೂ ಸಮಗ್ರ ನೀರಾವರಿ ಯೋಜನೆಯನ್ನು ಜಾರಿಗೆ ತರುವಂತೆ ಆಗ್ರಹಿಸಿ ರೈತರು ಬೃಹತ್ ಬಾರುಕೋಲು ಚಳುವಳಿಯನ್ನು ನಡೆಸುತ್ತಿದ್ದಾರೆ. ಇಂದು ಎರಡನೇ ದಿನಕ್ಕೆ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಪೊರಕೆ ಹಿಡಿದು ನಾರಿಯರು ಪ್ರತಿಭಟನೆಗೆ ಧುಮುಕಿದ್ದಾರೆ.
ಪ್ರಸಿದ್ದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಕಾಂಗ್ರೆಸ್ ಮುಖಂಡನೊಬ್ಬ ಬ್ಲಾಕ್ಕೇಲ್ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಉರ್ವಾ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಕಸಾಯಿಖಾನೆಗಳನ್ನು ಮುಚ್ಚಿ, ಗೋಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಗೋಹತ್ಯೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ […]
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ–ಹಾಲಾಡಿ ರಸ್ತೆಯ ಅಂಡರ್ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.
ಕಲಬುರಗಿ-ಬೆಂಗಳೂರು ಸಂಚಾರ ಜೂನ್ 10 ರಿಂದ ಪುನರಾರಂಭಗೊಳ್ಳುತ್ತಿದೆ. ಸ್ಟಾರ್ ಏರ್ ಸಂಸ್ಥೆಯ 76 ಸೀಟುಗಳ ವಿಮಾನ ವಾರದ 7 ದಿನ ಸಂಚಾರ ಮಾಡಲಿದೆ.
ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಇತ್ತೀಚೆಗೆ ಮೂವರು ವ್ಯಕ್ತಿಗಳು ಮದ್ಯ ಸೇವನೆ ಮಾಡಿದ್ದ ಕೇಸ್ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಮದ್ದೂರು ವಲಯ ಅರಣ್ಯಾಧಿಕಾರಿ ಡಿ. ಪುನೀತ್ ಅವರನ್ನು ಅಮಾನತುಗೊಳಿಸಲಾಗಿದೆ.
ಆಟವಾಡುತ್ತಿದ್ದ ವೇಳೆ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಸಂಪ್ನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನವನಗರದ ಸೆಕ್ಟರ್-38ರಲ್ಲಿ ನಡೆದಿದೆ.
ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.
ರಾಜ್ಯಾದ್ಯಂತ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಶೇ. 5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಇಂದಿನಿಂದ (ಜೂನ್ 9) ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.
ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಡಿಸಿಎಂ ಜಿ.ಪರಮೇಶ್ವರ ಅವರು, ತಮ್ಮ ರಾಜಕೀಯ ಜೀವನ ನಡೆದು ಬಂದ ಹಾದಿ ನೆನೆದು ಇಲ್ಲಿ ಭಾವುಕರಾದರು.
ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ರೂಪಿಸಬೇಕು. ಹಳಿ ತಪ್ಪಿದ ತಾಲ್ಲೂಕು ಆಡಳಿತದ ವಿರುದ್ಧ ರೈತರು ಸಿಡಿದೆದ್ದು, ಬೃಹತ್ ಬಾರುಕೋಲು ಚಳುವಳಿಯನ್ನು ನಡೆಸಿದರು.
ಖಾಸಗಿ ಜೆಟ್ ಒಂದು ಭೂಸ್ಪರ್ಶ ಮಾಡುವ ವೇಳೆ ಪತನಗೊಂಡು, ಪೈಲಟ್ ಹಾಗೂ ಸಹ ಪೈಲಟ್ ಇಬ್ಬರೂ ಮೃತಪಟ್ಟಿರುವ ಘಟನೆ ರವಿವಾರ ಪೂರ್ವ ಡೊಮಿನಿಕನ್ ರಿಪಬ್ಲಿಕ್ ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ ಆರಂಭದಿಂದಲೂ ಏರಿಳಿತ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ಭಾರೀ ಕುಸಿತ ಕಂಡುಬಂದಿದೆ.
ದಕ್ಷಿಣ ಭಾಗದಲ್ಲಿ ಸಂಭವಿಸಿದ ೭.೮ ತೀವ್ರತೆಯ ಬಲ ಭೂಕಂಪವು ಭಾರಿ ವಿನಾಶವನ್ನು ಸೃಷ್ಟಿಸಿದೆ. ಈ ನೈಸರ್ಗಿಕ ವಿಕೋಪದ ತೀವ್ರತೆಗೆ ಕನಿಷ್ಠ ೧೯ ಜನರು ಜೀವ ಕಳೆದುಕೊಂಡಿದ್ದು, ೨೦೦ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿ, ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.