Showing 20 of 21612 articles • Page 126 of 1081
ಹನುಮ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ನಂಜನಗೂಡು ನಗರದಾದ್ಯಂತ ಪೊಲೀಸ್ ಸಿಬ್ಬಂದಿಗಳು ಪಥ ಸಂಚಲನ ನಡೆಸಿದ್ದಾರೆ.
ಕೆಲವು ವರ್ಷಗಳ ಹಿಂದೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಹೋಗಿದ್ದ ಯಾತ್ರಿಕರ ಮೃತದೇಹವನ್ನು ಭಾರಿ ಮಳೆಯ ನಡುವೆಯೂ ಹರಸಾಹಸ ಪಟ್ಟು ಮೇಲಕ್ಕೆತ್ತಿ ತಂದು ರಾಜ್ಯ ಸರಕಾರದ ಗಮನ ಸೆಳೆದು ಮುಖ್ಯಮಂತ್ರಿ ಪದಕ್ಕ ಪಡೆದಿರುವ ಅಗ್ನಿಶಾಮಕ ದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಇದೀಗ ಮತ್ತೊಂದು ಸಾಹಸ ಕಾರ್ಯದ ಮೂಲಕ ವ್ಯಕ್ತಿಯ ಜೀವ ಉಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದ ದನವೊಂದನ್ನು ಸ್ಥಳೀಯರು ಹಾಗೂ ಕ್ರೇನ್ ಚಾಲಕರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಶುಕ್ರವಾರ ಹೊಸಂಗಡಿ ಗ್ರಾಮದ ಅಂಬೂರು ಪ್ರದೇಶದಲ್ಲಿ ನಡೆದಿದೆ.
ಹರಾಜಿನ ಕೂಗು, ಬೋಟ್ ಗಳ ಎಂಜಿನ್ಗಳ ಸದ್ದು, ಟೆಂಪೋ – ಲಾರಿಗಳ ಓಡಾಟ ಹಾಗೂ ಕಾರ್ಮಿಕರ ಗದ್ದಲಗಳಿಂದ ಗಿಜಿಗುಡುತ್ತಿದ್ದ ಮಂಗಳೂರಿನ ಮೀನುಗಾರಿಕ ದಕ್ಕೆ ಇದೀಗ ಸ್ತಬ್ಧವಾಗಿದೆ.
ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ ಎದುರಾಗಿದೆ.
ಕರ್ನಾಟಕ ಸರಕಾರದ ವಿರುದ್ಧದ ಜನಾಕ್ರೋಶದ ಕಾರಣದಿಂದ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿಯನ್ನು ಬದಲಾಯಿಸಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಳೆ ಅಬ್ಬರಕ್ಕೆ ಬೃಹತ್ ಕಟ್ಟಡವೊಂದು ನೆಲಕ್ಕುರುಳಿದ ಘಟನೆ ಅಥಣಿಯಲ್ಲಿ ನಡೆದಿದೆ.
ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮೆಲ್ಕಾರ್ ಪ್ರೈಓವರ್ ಸಮೀಪ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
: ಏ.22, 23, 24ರಂದು ನಡೆದಿದ್ದ 2026ರ UG CET ಪರೀಕ್ಷೆಯ ಫಲಿತಾಂಶ ನಾಳೆ (ಜೂ.6) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಮದ್ದಡ್ಕ-ವರಕದೆ ಸಮೀಪ ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಅನಿವಾಸಿ ಉದ್ಯಮಿ ಬಿ.ಆರ್.ಶೆಟ್ಟಿ ಮಾಲಕತ್ವದ ಬಿಆರ್ಎಸ್ ಲೈಫ್ ಗ್ರೂಪ್ ದುಬೈ ಶೈಲಿಯಲ್ಲಿ ನಿರ್ಮಿಸಿದ್ದ ಆರು ಮಹಡಿಯ ಸರ್ವಸುಸಜ್ಜಿತ ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ನಿರ್ವಹಣೆ ಇದೀಗ ಸರಕಾರಕ್ಕೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ.
ಹೊಸಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ರಾಪುರದ ಕಪ್ಪೆ ಹೊಂಡ ಪ್ರದೇಶದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿಯ ಅವ್ಯವಸ್ಥೆಯಿಂದ ಸ್ಥಳೀಯ ಕೃಷಿಕರೊಬ್ಬರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ.
ಮಟ್ಟು ಗ್ರಾಮದ ಹೆಮ್ಮೆ, ರೈತರ ಭಾವನೆ ಹಾಗೂ ವಿಶ್ವಪ್ರಸಿದ್ಧ ಮಟ್ಟುಗುಳ್ಳದ ಪ್ರತೀಕವಾಗಿದ್ದ ಪ್ರತಿಕೃತಿಯನ್ನು ಇತ್ತೀಚೆಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸಹಿತ 10ಕ್ಕೂ ಹೆಚ್ಚು ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – 2026 ನಡೆಯಲಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಜೂ. 20ರಂದು ಈ ಪ್ರಕ್ರಿಯೆ ಆರಂಭವಾಗಲಿದ್ದು ಜೂ. 30ರಿಂದ ಬಿಎಲ್ಒಗಳು ಮನೆ ಮನೆ ಭೇಟಿ ಶುರು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.
ಬೆಂಗಳೂರಿನಲ್ಲಿ‘ಕೇರಳ ಲಾಟರಿ’ ಹೆಸರಿನಲ್ಲಿ ಆನ್ಲೈನ್ ವಂಚನೆ ಜಾಲ ಸಕ್ರಿಯವಾಗಿದ್ದು, ಇಬ್ಬರು ಅಮಾಯಕ ನಾಗರಿಕರು ಬರೋಬ್ಬರಿ ₹13.71 ಲಕ್ಷ ಕಳೆದುಕೊಂಡು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ.
ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ.
ನಗರದ ಹೃದಯಭಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಹೆಸರಿನಲ್ಲಿ ಅಕ್ರಮ ಹಣ ವಸೂಲಿ ನಡೆಯುತ್ತಿದ್ದು, ರಾತ್ರಿ ವೇಳೆ ನಿಯಮ ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಹೋಟೆಲ್ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಆಗ್ರಹಿಸಿದ್ದಾರೆ.