Showing 20 of 21629 articles • Page 128 of 1082
ಅಗತ್ಯ ಪರವಾನಗಿ ಮತ್ತು ದಾಖಲೆಗಳಿಲ್ಲದೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳನ್ನು ಸಂಗ್ರಹಿಸಿ ಮಾರಾಟ ಮಾಡಿದ ಆರೋಪದ ಮೇಲೆ ಮಲ್ಪೆ ಪೊಲೀಸರು ಓರ್ವ ವ್ಯಕ್ತಿಯನ್ನವ ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಬಾಯ್ಲರ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಉತ್ತರ ಪ್ರದೇಶ
ಖತರ್ ದೇಶದಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ಹೃದಯಾಘತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮಹೇಶ್ ಮರ್ಣೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕಲಾವಿದ. ಅಶ್ವಥ ಎಲೆಯಲ್ಲಿ ಭಾವಚಿತ್ರ ಮೂಡಿಸುವುದರಲ್ಲಿ ಇವರು ಎತ್ತಿದ ಕೈ. ಅನೇಕ ಗಣ್ಯರು ಮತ್ತು ರಾಜಕೀಯ ನಾಯಕರ ಭಾವಚಿತ್ರಗಳನ್ನು ಎಲೆಯಲ್ಲಿ ಮೂಡಿಸಿ ಸೈ ಎನಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದಂತ್ಯ ಬೆಳಗಿನಿಂದ ಭಾರೀ ಮಳೆಯಾಗಿದ್ದು, ಕುಳೂರು ಬಸ್ ನಿಲ್ದಾಣದಲ್ಲಿ ಜಲಮಯವಾಗಿದೆ.
ಮಳೆಗಾಲ ಬಂತೆಂದರೆ ಮಂಗಳೂರು ನಗರದ ಜನರನ್ನು ಹೆಚ್ಚು ಕಾಡುವ ಸಮಸ್ಯೆಗಳಲ್ಲಿ ಕೃತಕ ಪ್ರವಾಹವೂ ಒಂದು. ಅದರಲ್ಲೂ ಪಂಪ್ವೆಲ್ ಜಂಕ್ಷನ್ ಮತ್ತು ಪಡೀಲ್ ರೈಲ್ವೆ ಅಂಡರ್ಪಾಸ್ ಪ್ರದೇಶಗಳು ಪ್ರತಿವರ್ಷ ಮಳೆ ನೀರಿನಿಂದ ಜಲಾವೃತಗೊಂಡು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತವೆ. ಈ ಬಾರಿ ಮುಂಗಾರು ಆರಂಭಕ್ಕೂ ಮುನ್ನವೇ ಈ ಎರಡು ಪ್ರದೇಶಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ.
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ ದರ್ಶನ್ ರವರು ತಿಳಿಸಿದ್ದಾರೆ.
ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.
ಹೊಸ ತುಳು ಸಿನಿಮಾ ಕಜ್ಜ. ಸಂಪೂರ್ಣ ಕುಟುಂಬ ಮನೋರಂಜನೆಯ ಚಿತ್ರವಾಗಿದ್ದು, ಈ ಸಿನಿಮಾ ಹೇಳೋದು ನಮ್ಮ ಬದುಕಿನ ಬೆಲೆಬಾಳುವ ವಿಷಯಗಳನ್ನ, ಕುಟುಂಬದ ಬಂಧ, ಧಾರ್ಮಿಕ ಸೌಹಾರ್ದತೆ ಮತ್ತು ತುಳುನಾಡಿನ ಸಂಸ್ಕೃತಿ-ಸಂಪ್ರದಾಯದ ಮೌಲ್ಯಗಳಿವೆ.
ನಮ್ಮ ಸರಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತು ಪಡಿಸಲಾಗಿದೆ.
ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವ ಕಾಲವಿದು. ಇದಕ್ಕೆ ಸ್ಪಷ್ಟ ಉದಾಹರಣೆಯಂತೆ ನಂಜನಗೂಡಿನ ದೇವಿರಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಹೊರತಾಗಿಲ್ಲ.
ಸಮಾಜಮುಖಿ ಚಟುವಟಿಕೆಗಳು, ಸೇವಾ ಮನೋಭಾವ ಹಾಗೂ ಸಂಘಟನಾ ಕೌಶಲ್ಯದ ಮೂಲಕ ಜಿಲ್ಲೆಯಾದ್ಯಂತ ಗುರುತಿಸಿಕೊಂಡಿರುವ ಲಯನ್ ಲೂಯಿಸ್ ಲೋಬೊ ಅವರು ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಸಿ ಇದರ ಪ್ರಾಂತ್ಯ 3ರ ಪ್ರಾಂತ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ರಾಜ್ಯದ ಎಲ್ಲ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.
ವಿದ್ಯುತ್ ಕಂಬದಿಂದ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಮೌಲ್ಯದ ಮೇವು ಸುಟ್ಟು ಭಸ್ಮವಾದ ಘಟನೆ ತಾಲೂಕಿನ ದೌಲತ್ಪುರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.
ಕಾರು ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿಯಾಗಿ ಮಗು ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ನಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಮಧ್ಯಪ್ರದೇಶದ ಶಾಸಕ ಯೋಗೇಂದ್ರ ಸಿಂಗ್ ಬಾಬಾ ಪ್ರಯಾಣಿಸುತ್ತಿದ್ದ ಕಾರು ಶಾಲೆಯ ಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದಿದ್ದು, ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ತಾಲ್ಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದ್ದು, ರೈತರನ್ನು ಕಛೇರಿಯಿಂದ ಕಛೇರಿಗೆ ಅಲೆದಾಡಿಸುತ್ತಿದ್ದಾರೆ.
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.