Showing 20 of 21592 articles • Page 13 of 1080
ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಭದ್ರತಾ ಕೊಠಡಿಯಿಂದ (Strong Room) 55.72 ಪವನ್ ತೂಕದ ಅಪರೂಪದ ಚಿನ್ನದ ಕಿರೀಟ ಕಾಣೆಯಾಗಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ.
ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಣೂರು ಶ್ರೀರಾಮ ಮಂದಿರದ ಎದುರಿನ ಸೇತುವೆ ಕಾಮಗಾರಿ ನಿಧಾನಗತಿ, ಅವೈಜ್ಞಾನಿಕ ಸಂಚಾರ ವ್ಯವಸ್ಥೆ ಹಾಗು ಅಪೂರ್ಣ ಸುರಕ್ಷತಾ ಕ್ರಮಗಳಿಂದ ಈ ಭಾಗ ಇದೀಗ ವಾಹನ ಸವಾರರಿಗೆ ಅಪಘಾತಗಳ ಹಾದಿಯಾಗಿ ಪರಿಣಮಿಸಿದೆ.
ಕೆಪಿಎಸ್ಸಿ ಹಗರಣದ ತನಿಖೆಗೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ರಾಜ್ಯ ಸರ್ಕಾರ ಅಂಗೀಕರಿಸಿ, ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.
ವಂದೇ ಮಾತರಂ ಹಾಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಹೇಳಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪೂರ್ಣ ವಂದೇ ಮಾತರಂ ಹಾಡದಿದ್ದರೆ ಬಿಜೆಪಿ ತನ್ನ ಪ್ರತಿರೋಧ ಮುಂದುವರಿಸಲಿದೆ ಎಂದು ಹೇಳಿದರು.
ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಭೂ ಸರ್ವೇ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳೂರಿನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ₹32 ಸಾವಿರ ಕೋಟಿ ಮೊತ್ತದ ಕರಾವಳಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹವನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆ ಹಾಗೂ ಶಾರ್ಜಾದ ರಾಯಭಾರಿ ಕಚೇರಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು 36 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿ, ರೂ. 1.15 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ವತಿಯಿಂದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ ದಿನಾಚರಣೆಯನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂಬೈ ಹಾಲ್ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಚಿನ್ನದ ದರದಲ್ಲಿ ಇಂದು ದಿಢೀರ್ ಇಳಿಕೆ ಕಂಡುಬಂದಿದೆ.
ಶಿರ್ವ ಹಾಗೂ ಉಡುಪಿ ನಗರ ಪೊಲೀಸರು ಪ್ರತ್ಯೇಕವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಮತ್ತು ದಾಸ್ತಾನು ಪ್ರಕರಣ
ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಹತ್ತು ದಿನಗಳಿಂದ ನಡೆಯುತ್ತಿದ್ದ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪದ ಅಂಗವಾಗಿ ಬುಧವಾರ ರಾತ್ರಿ ವೈಭವದ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಿತು.
ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ ಎಂದು ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಘಟಕದಿಂದ ಪ್ರತಿಭಟನೆ ಮಾಡಲಾಯಿತು.
ಭಾರತದ ರೋಯಿಂಗ್ ಪಟುಗಳಾದ ಸತ್ನಾಮ್ ಸಿಂಗ್ ಮತ್ತು ಸಲ್ಮಾನ್ ಖಾನ್, ಏಷ್ಯನ್ ಗೇಮ್ಸ್ನ ಪುರುಷರ ಡಬಲ್ ಸ್ಕಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಏಷ್ಯನ್ ಗೇಮ್ಸ್ನ ಪುರುಷರ ಡಬಲ್ ಸ್ಕಲ್ಸ್ ವಿಭಾಗದಲ್ಲಿ ಭಾರತಕ್ಕೆ ಲಭಿಸಿದ ಮೊದಲ ಪದಕ ಇದಾಗಿದೆ.
ನಂದಿನಿ ಹಾಲಿನ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಹಾಲು ಉತ್ಪಾದಕರ ಸಂಘಗಳ ಬೇಡಿಕೆಯ ಹಿನ್ನೆಲೆಯಲ್ಲಿ ಪ್ರತಿ ಲೀಟರ್ಗೆ 4ರಿಂದ 5 ರೂ.ವರೆಗೆ ದರ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ.
ಭಾರತಕ್ಕೆ ತೆರಳುತ್ತಿದ್ದ `ಎಂವಿ ಕೇಪ್ ಡಾವೊ’ ವಾಣಿಜ್ಯ ಹಡಗಿನ ಮೇಲೆ ಓಮನ್ನ ಪೂರ್ವ ಕರಾವಳಿ ಬಳಿ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದಾರೆ.
ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಬುಧವಾರ ವಾಷಿಂಗ್ಟನ್ಗೆ ಬಂದಿಳಿದಿದ್ದಾರೆ. ಇದು ದಶಕಕ್ಕೂ ಹೆಚ್ಚು ಕಾಲದ ಬಳಿಕ ಅವರ ಮೊದಲ ಅಮೆರಿಕ ಭೇಟಿಯಾಗಿದೆ.
ಚಲಿಸುತ್ತಿದ್ದಾಗಲೇ ಸ್ಲೀಪರ್ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದ ನಂಜನಗೂಡಿನ ದೇಬೂರು ಸರ್ಕಾರಿ ಆದರ್ಶ ಪದವಿಪೂರ್ವ ಕಾಲೇಜಿನ ಅವ್ಯವಸ್ಥೆ ಕುರಿತು ನ್ಯೂಸ್ ಕರ್ನಾಟಕ ವರದಿ ಪ್ರಸಾರ ಮಾಡಿದ್ದಕ್ಕೆ ಇದೀಗ ಬಿಗ್ ಇಂಪ್ಯಾಕ್ಟ್ ಕಂಡುಬಂದಿದೆ.
ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.