Showing 20 of 21629 articles • Page 133 of 1082
ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮತ್ತು ವ್ಯಕ್ತಿತ್ವ ನೆನೆದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಕೊಡವೂರು ಶ್ರೀ ಮಹತೋಭಾರ ಶಂಕರನಾರಾಯಣ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಮಹಾರುದ್ರಯಾಗವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಭಕ್ತರು, ಸೇವಾಕರ್ತರು, ಮಹಾರುದ್ರಯಾಗ ಸಮಿತಿ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವ ಸಭೆ ಶನಿವಾರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್ಪಾತ್ ಮೇಲೆ ಏರಿದ ಘಟನೆ ಹಿರಿಯಡಕ ಪೇಟೆ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿತು.
ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನ ಜಾವ ಸಂಭವಿಸಿದೆ
ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಕನ್ನಡ ಚಿತ್ರರಂಗದ ತಾರಾ ದಂಪತಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರು ತಮ್ಮ ಪುಟ್ಟ ಮಗುವಿನೊಂದಿಗೆ ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಆರ್ ಸಿಬಿ ಭರ್ಜರಿ ಗೆಲುವು ಪಡೆದುಕೊಂಡಿದೆ. ಮಣಿಪಾಲದ ಕಾಯಿನ್ ಸರ್ಕಲ್ ನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಸತತ ಎರಡನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡವು ಚಾಂಪಿಯನ್ ಪಟ್ಟಕೇರಿದೆ.
ಸೂರತ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲು ಇನ್ನು ಮುಂದೆ ವಾರದಲ್ಲಿ ಎರಡು ದಿನ ನಿರಂತರ ಸಂಚರಿಸಲಿದೆ.
ಬೆಂಗಳೂರು ಹಾಗೂ ಕರಾವಳಿ ಕರ್ನಾಟಕದ ನಡುವೆ ಬಹುನಿರೀಕ್ಷಿತ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲು ಕಾರ್ಯಾಚರಣೆಗೆ ದಿನಗಣನೆ ಆರಂಭವಾಗಿದೆ. ಹಾಸನ-ಮಂಗಳೂರು ರೈಲು ವಿಭಾಗದ ಹೊಸದಾಗಿ ವಿದ್ಯುದ್ದೀಕರಿಸಲಾದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ಮಾರ್ಗದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ರೈಲ್ವೆ ಸಚಿವಾಲಯದ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆಯ (RDSO) ಉನ್ನತ ತಂಡವು ಸಜ್ಜಾಗಿದೆ. ಜೂನ್ 1 ರಿಂದ ಆರಂಭವಾಗಲಿರುವ ಈ ಹೈಟೆಕ್ ಪರೀಕ್ಷೆಗಳ ಬಳಿಕ, ವಂದೇ ಭಾರತ್ ಓಡಾಟಕ್ಕೆ ಇದ್ದ ಕೊನೆಯ ತಾಂತ್ರಿಕ ಅಡೆತಡೆ ನಿವಾರಣೆಯಾಗಲಿದೆ.
ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಹಿಂದಿನಿಂದ ಬರುತ್ತಿದ್ದ ಇನ್ನೊಂದು ಸಿಟಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡುವ ಮೂಲಕ ಹೃದಯಸ್ಪರ್ಶಿ ಮಾನವೀಯತೆಯ ಕಾರ್ಯ ಮಾಡಿದ್ದಾರೆ
ಖಾಸಗಿ ಲಕ್ಸುರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಇಂದು (ಶನಿವಾರ) ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ನಮಗೆ ಯಾವುದೇ ರೀತಿಯ ವೈಯಕ್ತಿಕ ದ್ವೇಷ ಅಥವಾ ಹಗೆತನ ಇಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಅತ್ಯಂತ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.
ಅಮೆರಿಕದೊಂದಿಗೆ ಯಾವುದೇ ಒಪ್ಪಂದವು ಇನ್ನೂ “ಅಂತಿಮಗೊಂಡಿಲ್ಲ” ಎಂದು ಇರಾನ್ನ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ ಸ್ಪಷ್ಟಪಡಿಸಿದ್ದಾರೆ.
ನಗರದ ನಾಗದೇವನಹಳ್ಳಿಯಲ್ಲಿರುವ ಪ್ರಸಿದ್ಧ ಚಿತ್ರಕೂಟ ಕೌಸಲ್ಯ ಶಾಲೆಯಲ್ಲಿ ಇಂದು ದಿಢೀರನೆ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಸಾರ್ವಜನಿಕರೆದುರೇ ಮಹಿಳೆ ಚಪ್ಪಲಿಯಿಂದ ಸರಿಯಾಗಿ ಧರ್ಮದೇಟು ನೀಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.
ಫೇಸ್ಬುಕ್ ಮೂಲಕ ಪರಿಚಯವಾಗಿ ಪ್ರೀತಿ ನಾಟಕವಾಡಿ, ವಿದೇಶದಿಂದ ಕೋಟಿ ಮೌಲ್ಯದ ಉಡುಗೊರೆ ಕಳುಹಿಸಿರುವುದಾಗಿ ನಂಬಿಸಿ ವ್ಯಕ್ತಿಯಿಂದ 7.05 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
ಬಕ್ರೀದ್ ಹಬ್ಬದ ದಿನದಂದೇ ಗೋಹತ್ಯೆ ನಡೆದಿರುವ ಆರೋಪ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ಕೇಳಿಬಂದಿದ್ದು, ಈ ಸಂಬಂಧ ಓರ್ವ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮಳೆಯ ತೀವ್ರತೆ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆಯಿದೆ.