Showing 20 of 21629 articles • Page 137 of 1082
ಯಲಹಂಕದ ಎಂ.ಎಸ್. ಪಾಳ್ಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ದುರಂತ ತಪ್ಪಿದೆ.
ಬೈಜುಸ್ ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಕರ್ನಾಟಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಕೇಳಿಕೊಂಡಿದೆ ಎಂಬ ವರದಿಗಳು ಹೊರಬಿದ್ದಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಊಹಾಪೋಹಗಳು ಹುಟ್ಟಿಕೊಂಡಿವೆ.
ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿಗೆ ಮತ್ತೊಂದು ವಿವಾದ ಸುತ್ತಿಕೊಂಡಿದೆ. ಚೌಧರಿ ಮಾಜಿ ರೌಡಿಶೀಟರ್ಗೆ ಆಶೀರ್ವಾದ ಮಾಡುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕಂಪ್ಯೂಟಿಂಗ್, ಸೆಮಿಕಂಡಕ್ಟರ್, ಮೆಕಾಟ್ರಾನಿಕ್ಸ್, ಇಂಟೆಲಿಜೆಂಟ್ ಸಿಸ್ಟಮ್ಸ್ ಮತ್ತು ಕಮ್ಯುನಿಕೇಷನ್ಸ್ ಕುರಿತ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ (COSMIC-2026) ನವೆಂಬರ್ 27–28, 2026 ರಂದು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು, ಆಯೋಜಿಸಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆ, ನಾಯಕತ್ವ ಬದಲಾವಣೆ ಇಲ್ಲ ಎಂದು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ನಗರಸಭೆಯ ಅಧಿಕಾರಿಗಳು ನಗರದ ವಿವಿಧೆಡೆ ಸೋಮವಾರ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ, 100 ಕೆ.ಜಿಗೂ ಹೆಚ್ಚು ಪ್ಲಾಸ್ಟಿಕ್ ವಶಪಡಿಸಿಕೊಂಡು ₹30 ಸಾವಿರ ದಂಡ ವಸೂಲಿ ಮಾಡಿದರು.
ರಾಜ್ಯದಲ್ಲಿನ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಐಪಿಎಲ್ ಟಿ–20 ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ಅಕ್ರಮವಾಗಿ ಜೂಜಾಟ ಹಾಗೂ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 23 ಜನರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಮೆರಿಕ ಮತ್ತು ಥಾಯ್ಲೆಂಡ್ನಿಂದ ಚಾಮರಾಜಪೇಟೆಯಲ್ಲಿರುವ ವಿದೇಶಿ ಪೋಸ್ಟ್ ಆಫೀಸ್ಗೆ ಪಾರ್ಸೆಲ್ ಮೂಲಕ ಬಂದಿದ್ದ ಭಾರಿ ಮೌಲ್ಯದ ಮಾದಕ ವಸ್ತುವನ್ನು ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಬೀಟೆ ಮರದ ದಿಮ್ಮಿಗಳನ್ನು ಸಾಗಣೆ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಭೀಕರ ರಸ್ತೆ ಅಪಘಾತ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಎಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.
ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದ್ದು, ತಿ.ನರಸೀಪುರ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಅಶುಚಿತ್ವ ಎದ್ದು ಕಾಣುತ್ತಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿ ನರಸೀಪುರ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದರು.
ಸೋದರ ಮಾವನೇ ಅಳಿಯನಿಗೆ ಸ್ಕೆಚ್ ಮಾಡಿದ್ದು, ಸುಪಾರಿ ಪಡೆದು ಕೊಲೆ ಮಾಡಲು ಯತ್ನಿಸಿದ ಆರೋಪಿಗಳನ್ನು ಬಂಧಿಸಲಾಗಿದೆ.
ಯಾರ ಬಗ್ಗೆಯಾಗಲಿ ಮಾತನಾಡುವಾಗ ಏಕ ವಚನದಲ್ಲಿ ಮಾತನಾಡಬಾರದು ಮಾಜಿ ಸಚಿವ ಸಾ ರಾ ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದರು.
ಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.
ರಿಕ್ಷಾ, ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.
ದೆಹಲಿಯಲ್ಲಿ ಸಂಕುಚಿತ ನೈಸರ್ಗಿಕ ಅನಿಲ (CNG) ದರವನ್ನು ಪ್ರತಿ ಕೆಜಿಗೆ 2 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದೆ.
ಟೈಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಗರದ ಅಂಬಾಗಿಲು ಜಂಕ್ಷನ್ ಸಮೀಪ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.