Showing 20 of 21592 articles • Page 14 of 1080
ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಲಕ್ಷ್ಮೇಶ್ವರ ಪಟ್ಟಣದ ಕಟ್ಟಿಲೇಔಟ್ ಬಳಿ ರೌಡಿಶೀಟರ್ ಒಬ್ಬನ ಬರ್ಬರ ಕೊಲೆ ನಡೆದಿದೆ.
ಪವಿತ್ರ ಚಾರ್ ಧಾಮ್ ಯಾತ್ರೆಗಾಗಿ ಉತ್ತರಾಖಂಡಕ್ಕೆ ತೆರಳಿದ್ದ ಉಳ್ಳಾಲ ತಾಲೂಕಿನ ಕುಂಪಲದ ನಿವಾಸಿಯೊಬ್ಬರು ಯಮುನೋತ್ರಿಯಲ್ಲಿ ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ (Heart Attack) ಅಕಾಲಿಕ ಮರಣ ಹೊಂದಿದ್ದಾರೆ. ಕುಂಪಲ ವಿದ್ಯಾನಗರ ನಿವಾಸಿ ರಾಜೇಶ್ ಗಾಣಿಗ (53) ಮೃತಪಟ್ಟ ದುರದೃಷ್ಟಕರ ಯಾತ್ರಿಕರಾಗಿದ್ದಾರೆ.
ಪತ್ನಿಯ ಮೃತದೇಹ ಜಮೀನಿನ ಕೆರೆಯಲ್ಲಿ ಅಸಹಜ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ಪತಿಯೂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಹಾಗೂ ಶಂಕಾಸ್ಪದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ.
ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 6 ಜನರಿಗೆ ಗಂಭೀರವಾದ ಘಟನೆ ಹಾವೇರಿ ತಾಲೂಕಿನ ಹಳೇರತ್ತಿ ಗ್ರಾಮದ ಬಳಿ ನಡೆದಿದೆ.
ಬೈಂದೂರು ತಾಲ್ಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ಬುಧವಾರ ದಾಳಿ ನಡೆಸಿ, ₹16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು ಮೂರು ತಿಂಗಳ ಹಿಂದೆ ನಡೆದಿರಬಹುದು ಎನ್ನಲಾದ ಈ ಪ್ರಕರಣದಲ್ಲಿ ಪ್ರಕಾಶ್ ಕುಂದರ್ (ಹೆಸರು ಕುಟುಂಬದ ಮಾಹಿತಿ ಆಧಾರಿತ) ಅವರ ಶವವನ್ನು ಒಂಬತ್ತು ತುಂಡುಗಳಾಗಿ ಕತ್ತರಿಸಿ, ಅವರದ್ದೇ ಕಾರಿನ ಡಿಕ್ಕಿಯಲ್ಲಿ ಎರಡು ಚೀಲಗಳಲ್ಲಿ ಇರಿಸಲಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಬಂಧಿಕರ ಡಿಎನ್ಎ ಪರೀಕ್ಷೆಯ ಮೂಲಕ ಪತ್ತೆಯಾದ ಶವ ಪ್ರಕಾಶ್ ಅವರದ್ದೇ ಎಂಬುದು ದೃಢಪಟ್ಟಿದ್ದು, ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ಪ್ರಯತ್ನ ನಡೆಸುತ್ತಿದ್ದಾರೆ.
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಉಡುಪಿ ನಗರದಲ್ಲಿ ಬುಧವಾರ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಪ್ರಮುಖ ಬೀದಿಗಳ ಮೂಲಕ ಅಜ್ಜರಕಾಡು ಪುರಭವನದವರೆಗೆ ನಡೆದ ಮೆರವಣಿಗೆಯಲ್ಲಿ ಪೌರ ಕಾರ್ಮಿಕರು ಹಾಗೂ ನಗರಸಭೆಯ ಅಧಿಕಾರಿಗಳು ಪಾಲ್ಗೊಂಡರು.
ಟೊಕಿಯೊ: ಭಾರತದ ಸ್ಟಾರ್ ವೇಟ್ಲಿಫ್ಟರ್ ಮೀರಾಬಾಯಿ ಚಾನು ಕೊನೆಗೂ ಏಷ್ಯನ್ ಗೇಮ್ಸ್ ಪದಕ ಪಡೆಯುವಲ್ಲಿ ಯಶಸ್ಸಿಯಾಗಿದ್ದಾರೆ. 2026ರ ಆವೃತ್ತಿಯ ಏಷ್ಯನ್ ಗೇಮ್ಸ್ನಲ್ಲಿ ಬುಧವಾರ ನಡೆದ ಮಹಿಳೆಯರ 49 ಕೆ.ಜಿ. ವಿಭಾಗದಲ್ಲಿ ಚಾನು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದು ಏಷ್ಯನ್ ಗೇಮ್ಸ್ನಲ್ಲಿ ಮೀರಾಬಾಯಿ ಚಾನು ಅವರ ಚೊಚ್ಚಲ ಪದಕವಾಗಿದೆ. ಸ್ನ್ಯಾಚ್ನಲ್ಲಿ 87 ಕೆ.ಜಿ., ಕ್ಲೀನ್ ಆ್ಯಂಡ್ ಜೆರ್ಕ್ನಲ್ಲಿ 111 ಕೆ.ಜಿ ಒಟ್ಟು 198 ಕೆಜಿ ಭಾರ ಎತ್ತುವ ಮೂಲಕ ಚಾನು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಒಟ್ಟು 215 ಕೆಜಿ […]
ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿರುವ ನಿಯಮ ಹಾಗೂ ಅದನ್ನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವ ಕಾನೂನಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ.
ಮಾಜಿ ಸಂಸದ ಪ್ರತಾಪಸಿಂಹ ವಿರುದ್ಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ.
ಹುಲಿಗಳ ನಡುವಿನ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂರು ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದ ಕೆರೆ ಬಯಲಿನಲ್ಲಿ ನಡೆದಿದೆ.
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯದಿಂದ ಕೋಮಾ ಸ್ಥಿತಿಯಲ್ಲಿ ಮಗಳು ಜೀವನ್ಮರಣ ಹೋರಾಟ ಮಾಡುತ್ತಿರುವ ಘಟನೆ ನಡೆದಿದೆ.
ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆದ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭ ನಡೆಯಿತು.
ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು.
ಕಸ್ತೂರಿ ರಂಗನ್ ವರದಿ ಕುರಿತ ವಿಶೇಷ ಗ್ರಾಮಸಭೆಗೆ ಗೈರುಹಾಜರಾಗಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಶಿರ್ಲಾಲು ಗ್ರಾ.ಪಂ. ಪಿಡಿಒ ಸುಶೀಲ ಅವರನ್ನು ಅಮಾನತುಗೊಳಿಸಿ ದ.ಕ. ಜಿ.ಪಂ. ಸಿಇಒ ಆದೇಶ ಹೊರಡಿಸಿದ್ದಾರೆ.
ನಗರದ ಅಂಗಡಿ ಬೀದಿಯಲ್ಲಿರುವ ಪಾತ್ರೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ನಂಜನಗೂಡಿನ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಬೃಹತ್ ರಂಗೋಲಿ ಬಿಡಿಸುವ ಮೂಲಕ ಹಾಗೂ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
: ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯ ಎಂಬಲ್ಲಿ ದಿನಾಂಕ.03.09.2019 ರಂದು ಕಾರ್ತಿಕ್ ಮೆರ್ಲ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಖಲಾಗಿದ್ದ
ಬೆಂಗಳೂರು ಮಂಗಳೂರು ವಂದೇ ಭಾರತ್ ರೈಲು ಸಂಚಾರ ಹೆಚ್ಚು ಜನೋಪಯೋಗಿ ಆಗಲು, ಸಂಜೆಯ ಬದಲು, ಮುಂಜಾನೆಯೇ ಮಂಗಳೂರು ಸೆಂಟ್ರಲ್ನಿಂದ ಪ್ರಯಾಣ ಆರಂಭಿಸಬೇಕು ಎಂದು ಕರಾವಳಿಯ ಅಭಿವೃದ್ಧಿ ಸಮಿತಿಯು ಸಚಿವ ವಿ ಸೋಮಣ್ಣ ಅವರಿಗೆ ಮನವಿ ಮಾಡಿದೆ.