Showing 20 of 21629 articles • Page 142 of 1082
ಇದು ನಿಮ್ಮ ವಾಹಿನಿ ಕಲಾ ವೇದಿಕೆಯಿಂದ ಬುದ್ಧ ಮತ್ತು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಹಾಗೂ 22 ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಹೇಳಿದರು
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರಿನಲ್ಲಿ, ಎಂಫಸಿಸ್ ಫೌಂಡೇಶನ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಮತ್ತು NASSCOM ಫೌಂಡೇಶನ್ ಸಹಯೋಗದೊಂದಿಗೆ, ಮೇ 22, 2026 ರಂದು ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಅತ್ಯಾಧುನಿಕ ಎಂಫಸಿಸ್ AI & ರೊಬೊಟಿಕ್ಸ್ ಲ್ಯಾಬ್ ಅನ್ನು ಉದ್ಘಾಟಿಸಲಾಯಿತು.
ಸಹ್ಯಾದ್ರಿ ಕಾಲೇಜಿನಲ್ಲಿ ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರವನ್ನು ಕರ್ನಾಟಕ ಸರ್ಕಾರದ ಗೌರವಾನ್ವಿತ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಶನಿವಾರದಂದು ಮೇ 23 ರಂದು ಬೆಳಿಗ್ಗೆ 11:00 ಗಂಟೆಗೆ ಉದ್ಘಾಟಿಸಲಿದ್ದಾರೆ.
ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಹಾನಗರದ ಜೆಪ್ಪು ಕಡೆಕಾರು, ಜೆಪ್ಪಿನಮೊಗರು ನೇತ್ರಾವತಿ ನದಿ ತೀರದ ಪ್ರದೇಶದಲ್ಲಿನ ನೇತ್ರಾವತಿ ಸಭಾಂಗಣದಲ್ಲಿ ನಾಲ್ಕು ಅತ್ಯಾಧುನಿಕ ಸಭಾಭವನಗಳ ಲೋಕಾರ್ಪಣೆಗೆ ಚಾಲನೆ ನೀಡುವ ಸಮಾರಂಭ ಜರುಗಿತು.
ಬಕ್ರೀದ್ ಹಬ್ಬದ ಮುನ್ನ ದೆಹಲಿ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬಕ್ರೀದ್ ಹಬ್ಬದಂದು ಹಸುಗಳು, ಕರುಗಳು, ಒಂಟೆಗಳನ್ನು ಬಲಿ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಉಲ್ಲಂಘಿಸುವವರ ವಿರುದ್ಧ ಪೂರ್ವ ಸೂಚನೆ ಇಲ್ಲದೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ.
ಚಿನ್ನದ ಬೆಲೆಯಲ್ಲಿ ಇಂದು ಗಮನಾರ್ಹ ಇಳಿಕೆ ಕಂಡುಬಂದಿದೆ. ಆಭರಣ ತಯಾರಿಕೆಗೆ ಹೆಚ್ಚಾಗಿ ಬಳಸಲಾಗುವ 22 ಕ್ಯಾರೆಟ್ ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗದಲ್ಲಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27 ವ) ಅವರು ವಾಹನ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಹುಲಿಯೊಂದು ಒಂದೇ ಸಮಯದಲ್ಲಿ ದಾಳಿ ನಡೆಸಿ ನಾಲ್ವರು ಮಹಿಳೆಯರನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.
ಭಾರತೀಯ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್ಗಳೊಂದಿಗೆ ಹಂಚಿಕೊಂಡಿದ್ದ ಆರೋಪದಡಿ ಒಬ್ಬ ವ್ಯಕ್ತಿಯನ್ನು ಪಂಜಾಬ್ನ ಪಠಾಣ್ಕೋಟ್ನ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾದ ಹಲವು ಭಾಗಗಳಲ್ಲಿ ಎಬೋಲಾ ವೈರಸ್ ಹಾವಳಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಾನುವಾರುಗಳ ಹತ್ಯೆಯನ್ನು ನಿಯಂತ್ರಿಸಲು ಪಶ್ಚಿಮ ಬಂಗಾಳ ಸರ್ಕಾರ ಜಾರಿಗೆ ತಂದಿದ್ದ ಕಠಿಣ ನಿಯಮಗಳಿಗೆ ಕೊಲ್ಕತ್ತಾ ಹೈಕೋರ್ಟ್ ಸಂಪೂರ್ಣ ಕಾನೂನು ಮಾನ್ಯತೆ ನೀಡಿದೆ.
ದೇವಸ್ಥಾನಕ್ಕೆ ಹೊರಟಿದ್ದ ಭಕ್ತರ ಆಟೋರಿಕ್ಷಾಕ್ಕೆ ಖಾಸಗಿ ಬಸ್ಸೊಂದು ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಗಂಜಾಂ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗವಾಗಿದೆ ಎಂದು ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದರು.
ಬಿಜೆಪಿ ಪ್ರಕಾರ ದೇಶದ ಹಿಂದೂಗಳು ಭಯಭೀತರಾಗಿದ್ದಾರೆ. ಅರಾಜಕತೆಯಲ್ಲಿದ್ದಾರೆ. ಬಿಜೆಪಿಯವರು ಭಯ ಸೃಷ್ಟಿಸುತ್ತಿದ್ದಾರೆ.
ನಗರದ ವಿವೇಕಾನಂದ ನಗರದ ನರಸಿಂಹಯ್ಯ ಬಡಾವಣೆಯಲ್ಲಿ ಮದ್ಯದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚನ್ನಪಟ್ಟಣದ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ವಿಭಾಗದ ಎಫ್ಡಿಎ ಯೋಗೀಶ್ ಕುಮಾರ್ (41) ಅವರನ್ನು ಕೊಲೆ ಮಾಡಿದ್ದ ಮೂವರನ್ನು ಐಜೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಮೆರಿಕದ ಪ್ರಸಿದ್ಧ ಲೆಕ್ಕಪತ್ರ ಸಂಸ್ಥೆ ‘ಎಂ.ಎಸ್. ಕ್ವಿಕ್ ಬುಕ್’ ಹೆಸರಿನಲ್ಲಿ ನಗರದ ಆಗ್ನೇಯ ವಿಭಾಗದಲ್ಲಿ ತೆರೆಯಲಾಗಿದ್ದ ನಾಲ್ಕು ನಕಲಿ ಕಾಲ್ ಸೆಂಟರ್ಗಳ ಮೇಲೆ ದಾಳಿ ನಡೆಸಿರುವ ಸೈಬರ್ ಕಮಾಂಡ್ ಸೆಂಟರ್ನ ಅಧಿಕಾರಿಗಳು, ಅಂದಾಜು ₹40 ಕೋಟಿ ಅಕ್ರಮವನ್ನು ಬಯಲಿಗೆ ಬಂದಿದೆ. ಹೊರ ರಾಜ್ಯದ ಇಬ್ಬರನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಕಡೆಗಳಲ್ಲಿ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಕೋಟ ಸಮೀಪದ ನಾಗರಮಠ ಮರಳು ದಕ್ಕೆಯಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಗಂಭೀರ ಸ್ವರೂಪ ಪಡೆದಿದೆ.
ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ.