Showing 20 of 21629 articles • Page 146 of 1082
ವಡೋದರಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದೊಳಗೆ ಉಂಟಾದ ವಿದ್ಯುತ್ ವ್ಯತ್ಯಯದಿಂದ ಪ್ರಯಾಣಿಕರು 30 ನಿಮಿಷಗಳ ಕಾಲ ಎಸಿ, ಬೆಳಕು ಇಲ್ಲದೇ ಪರದಾಡಿದ್ದಾರೆ.
ಅಕ್ರಮ ದನ ಸಾಗಣೆ ಮತ್ತು ಪ್ರಾಣಿ ಹಿಂಸೆ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಘಟನೆ ಪಡುಬಿದ್ರಿ ಪೊಲೀಸರು ಭಾನುವಾರ ಬೆಳಗಿನ ಜಾವ ಪಡುಬಿದ್ರಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ನಡೆಸಲಾಗಿದೆ.
ಬದಿಯಡ್ಕ ಸಮೀಪದ ಮಾರ್ಪನಡ್ಕದಲ್ಲಿ ನಡೆದ ಬ್ಯಾಂಕ್ ಕಾವಲುಗಾರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಸ್ಥಳೀಯರ ಸಮಸ್ಯೆ ಬಗ್ಗೆ ಸ್ಪಂದಿಸುವ ವೇಳೆ ಗೈರಾದ ಪಿಡಿಒಗೆ ಸಂಸದ ಸುನೀಲ್ ಬೋಸ್ ಮೊಬೈಲ್ ನಲ್ಲೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮತ್ತೆ ಹಿಜಾಬ್ ಗೆ ಅವಕಾಶ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಕಿಡಿಕಾರಿದರು.
ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಎಸ್ ಟಿ ಪಿ ಐ ಮುಖಂಡನ ವಿರುದ್ಧ ಕ್ರಮ ಕೈಗೊಳ್ಳಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್ (26) ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಸೋಮವಾರ ಬಂಧಿಸಲಾಗಿದೆ.
ಕೊಡವೂರುದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಲಾಗಿರುವ ಮಹಾರುದ್ರಯಾಗದ ಕೊನೆಯ ದಿನವಾದ ಮಂಗಳವಾರ ದೇವಸ್ಥಾನ ಪರಿಸರ ಭಕ್ತಸಾಗರಕ್ಕೆ ಸಾಕ್ಷಿಯಾಯಿತು.
ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಾರಾಷ್ಟ್ರದ ಲಾತೂರ್ನಲ್ಲಿ ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ನನ್ನು ಕೇಂದ್ರ ತನಿಖಾ ದಳ ಬಂಧಿಸಿದೆ.
ಉತ್ತರಾಖಂಡದ ಋಷಿಕೇಶದ ಖಾಂಡ್ ಗಾಂವ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಯೋಗ ನಗರಿ ರೈಲು ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನಲ್ಲಿರುವ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯು (DSM Hospital) ತನ್ನ ಡಯಾಲಿಸಿಸ್ ಘಟಕ ಆರಂಭವಾದ 2022ರ ಜನವರಿಯಿಂದ ಇಂದಿನವರೆಗೆ ಯಶಸ್ವಿಯಾಗಿ 10,000 ಡಯಾಲಿಸಿಸ್ ಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ ಮಹತ್ವದ ಆರೋಗ್ಯ ಸೇವಾ ಸಾಧನೆಯನ್ನು ದಾಖಲಿಸಿದೆ.
ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನ ಬಂಧಿಸಲಾಗಿದ್ದು 10 ಕೆಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಳ್ಳಲಾಗಿದೆ.
ಅಧಿಕಾರಿಗಳಿಗೆ ವರ್ಗಾವಣೆ ಒಂದು ಪ್ಯಾಕೇಜ್ ಆಗಿದೆ. ಯಾರು ಬರ್ತಾರೆ, ಯಾರು ಹೋಗ್ತಾರೆ ಯಾವುದು ಗೊತ್ತಾಗ್ತಾ ಇಲ್ಲ. ಅಧಿಕಾರಿಗಳು ಬಂದ ಮೇಲಷ್ಟೇ ನಮಗೆ ತಿಳಿಯುತ್ತಿದೆ ಎಂದು ಸಂಸದ ಸುನೀಲ್ ಬೋಸ್ ಕಿಡಿಕಾರಿದರು.
ನಿನ್ನೆ ತಡರಾತ್ರಿ ಕಳ್ಳರು ಸರಣಿ ಕಳ್ಳತನ ನಡೆಸಿದ್ದು, ಒಂದಲ್ಲ ಎರಡಲ್ಲ ಬರೋಬ್ಬರಿ ಹತ್ತು ಅಂಗಡಿ-ಕಚೇರಿಗಳ ಬೀಗ ಮುರಿದು ನಗದು ದೋಚಿ ಪರಾರಿಯಾಗಿರುವ ಘಟನೆ ಬೆಳ್ತಂಗಡಿ ನಗರ ಪ್ರದೇಶದಲ್ಲಿ ನಡೆದಿದೆ.
ಗಾಯನ ಹಾಗೂ ನಟನೆಯ ಮೂಲಕ ಕನ್ನಡಿಗರ ಮನಗೆದ್ದಿರುವ ನವೀನ್ ಸಜ್ಜು ಪ್ರಮುಖ ಭೂಮಿಕೆಯಲ್ಲಿ ನಟಿಸಿರುವ, ಇತ್ತೀಚೆಗಷ್ಟೇ ತೆರೆಕಂಡು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿರುವ ‘ಲೋ ನವೀನ’ ಚಲನಚಿತ್ರವು ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಖಂಡಿಸಿ ಉಡುಪಿ ಜಿಲ್ಲಾ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ) ಹಾಗೂ ಯುವ ಕಾಂಗ್ರೆಸ್ ಸೋಮವಾರ ಮಣಿಪಾಲದ ಟೈಗರ್ ಸರ್ಕಲ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿತು.
ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು ಸಾತ್ವಿಕವಾದ ಯಾಗ, ದಾನ ಮತ್ತು ಜ್ಞಾನ. ಇವು ಮೂರಕ್ಕೂ ಅನುಕೂಲವಾಗುವಂತೆ ಪ್ರಸಾದ್ ರಾಜ್ ಕಾಂಚನ್ ಅವರು ಈ ಮಹಾರುದ್ರಯಾಗವನ್ನು ಆಯೋಜಿಸಿದ್ದಾರೆ.
ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಉಡುಪಿ ಶ್ರೀಕೃಷ್ಣಮಠಕ್ಕೆ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.