Showing 20 of 21629 articles • Page 148 of 1082
ಮಲ್ಪೆಯ ಕರ್ಕೇರ ಗೆಸ್ಟ್ ಹೌಸಿನಲ್ಲಿದ್ದ ವೈವಿಧ್ಯಮಯ ಮೀನುಗಳನ್ನು ಕಂಡು ಖ್ಯಾತ ಹಾಡುಗಾರ್ತಿ ಮಂಗ್ಲಿ ಖುಷಿ ಪಟ್ಟರು.
ತಾಲೂಕಿನ ಕುರಿಯಾಳ ಎಂಬಲ್ಲಿ ಬಾವಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರನ್ನು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬರಿಮಾರು ನಿವಾಸಿಗಳಾದ ಪದ್ಮನಾಭ(38) ಮತ್ತು ರಾಮಣ್ಣ(48) ಗಾಯಗೊಂಡವರು. ಭಾನುವಾರ ಸಂಜೆ ಈ ಘಟನೆ ನಡೆದಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೆಲ್ಕಾರ್ ನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡು ವಸ್ತುಗಳೆಲ್ಲವೂ ಭಸ್ಮಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.
ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್, ಜನಪ್ರಿಯ ನಟಿ ರಚಿತಾ ರಾಮ್ ಅವರ ಬಣ್ಣದ ಬದುಕಿಗೆ ಈಗ 14 ವರ್ಷಗಳ ಸಂಭ್ರಮ. ಸಿನಿರಂಗದಲ್ಲಿ ಯಶಸ್ಸಿನ ಪಯಣ ಮುಂದುವರಿಸುತ್ತಿರುವ ರಚಿತಾ ರಾಮ್ ಇದೀಗ ಭಕ್ತಿಯ ಮುಖಾಂತರವೂ ಗಮನ ಸೆಳೆದಿದ್ದಾರೆ.
ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ಮೇ.16 ರಂದು ಸಾರ್ವಜನಿಕರಲ್ಲಿ ಸರಿಯಾದ ಪೌಷ್ಠಿಕ ಆಹಾರ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಉಚಿತ ಆಹಾರ ಮತ್ತು ಪೌಷ್ಠಿಕತೆ ಜಾಗೃತಿ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಒಂಟಿಯಾಗಿದ್ದ ವೃದ್ಧೆಯ ಸಮಸ್ಯೆ ಹೇಳಿಕೊಂಡು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಅಹವಾಲು ಸಲ್ಲಿಸಲು ಮುಸ್ಲಿಂ ಮಹಿಳೆಯರು ಬಂದಿದ್ದರು.
ಮಕ್ಕಳಾಗಲಿಲ್ಲ ಅಂತ ಮನನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ.
ಸಿಎಸ್ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ಗೆ ಶಾಕ್ ಎದುರಾಗಿದೆ. ನಾಯಕ ರಿಷಭ್ ಪಂತ್ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.
ಬಾಲಿವುಡ್ ನಟ ರಣಬೀರ್ ಕಪೂರ್ ಅಯೋಧ್ಯೆಯಲ್ಲಿ ಕೋಟಿ ಮೌಲ್ಯದ ಭೂಮಿ ಖರೀದಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ಕೇವಲ ವಕೀಲರದ್ದಲ್ಲ, ಇಡೀ ಕರಾವಳಿ ಭಾಗದ ಸಾರ್ವಜನಿಕರ ನ್ಯಾಯಸಮ್ಮತ ಹಕ್ಕಿನ ಬೇಡಿಕೆಯಾಗಿದ್ದು ಇದಕ್ಕೆ ಮನ್ನಣೆಯನ್ನು ರಾಜ್ಯದ ಮುಖ್ಯ ಮಂತ್ರಿಗಳು ನೀಡಿದ್ದು ಅಕ್ಟೋಬರ್ ತಿಂಗಳ ಒಳಗಾಗಿ ನಗರದ ಹಳೆ ಡಿಸಿ ಕಚೇರಿಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯಾಗಲಿದೆ
ನಂಜನಗೂಡಿನಲ್ಲಿ ತೋಟಗಾರಿಕೆ ಇಲಾಖೆಯ ನೂತನ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಹಾಗೂ ವಾರಂಟ್ ಆರೋಪಿಯನ್ನು ಕಾಪು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಹೋಶಿಯಾರಪುರ ಜಿಲ್ಲೆಯಲ್ಲಿ ತಮ್ಮ ಮನೆಯ ಬಳಿ ಆಟವಾಡುತ್ತಿದ್ದಾಗ ಹೊಸದಾಗಿ ತೋಡಿದ್ದ ಕೊಳವೆಬಾವಿಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕನನ್ನು ವಿವಿಧ ರಕ್ಷಣಾ ಸಂಸ್ಥೆಗಳು ಮತ್ತು ಸ್ಥಳೀಯ ಸ್ವಯಂಸೇವಕರು ಸೇರಿದಂತೆ ನಡೆಸಿದ ಒಂಬತ್ತು ಗಂಟೆಗಳ ಬೃಹತ್ ಕಾರ್ಯಾಚರಣೆಯ ನಂತರ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಜಾಬ್ ಧರಿಸುವುದು ಹೊಸ ಪದ್ಧತಿಯಲ್ಲ, ಮುಸ್ಲಿಂ ಸಮುದಾಯದ ಧಾರ್ಮಿಕ, ಸಾಂಸ್ಕೃತಿಕ ಆಚರಣೆ: ಐವನ್ ಡಿ’ಸೋಜ
ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯವೇ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಐವನ್ ಡಿ’ಸೋಜ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆದು ಗಲೀಜು ಮಾಡಿದ ಪ್ರವಾಸಿಗರ ವಿರುದ್ಧ ಸಾಣೂರು ಗ್ರಾಮ ಪಂಚಾಯತ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೊಪ್ಪಳದಿಂದ ಬಂದ ಪ್ರವಾಸಿಗರ ತಂಡಕ್ಕೆ ₹2,000 ದಂಡ ವಿಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಉಡುಪಿ ಜಿಲ್ಲೆಯನ್ನು ರಾಜ್ಯ ಸರಕಾರ ನಿರ್ಲಕ್ಷ ಮಾಡುತ್ತಿದೆ ಎಂದು ಆರೋಪಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗೋ ಬ್ಯಾಕ್ ಹೇಳುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ಮನನೊಂದ ವ್ಯಕ್ತಿಯೊಬ್ಬರು ತನ್ನ ಹೆಂಡತಿಯ ಮನೆಯ ಮುಂಭಾಗ ಇರುವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾಪುವಿನ ಬೆಳಪುವಿನಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಿಷ್ಟಾಚಾರ ಪಾಲನೆ ಆಗುತ್ತಿಲ್ಲ ಎಂದು ಜಿಲ್ಲೆಯ ಬಿಜೆಪಿ ಶಾಸಕರುಗಳು ಆರೋಪಿಸಿದ್ದು ಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು.
ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ.