Showing 20 of 21629 articles • Page 149 of 1082
ಹಿಜಾಬ್ ರಾಜ್ಯ ಸರ್ಕಾರದ ಆದೇಶ ತಂದ ವಿವಾದದ ಕುರಿತು ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.
ಕರಾವಳಿಯಲ್ಲಿ ದೇವಸ್ಥಾನಗಳ ಆದಾಯ ಹೆಚ್ಚಳ ಕುರಿತು ಉಡುಪಿಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಪ್ರಯುಕ್ತ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದ ಆರಂಭಗೊಂಡವು.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚನಹಳ್ಳಿ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದೆ.
ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಸುಮಾರು 75 ವರ್ಷಗಳ ಬಳಿಕ ಈ ಭಾಗದಲ್ಲಿ ರುದ್ರಯಾಗ ನಡೆಯುತ್ತಿದ್ದು, ಪ್ರಸಾದ್ರಾಜ್ ಕಾಂಚನ್ ಅವರಿಗೆ ಈ ಯೋಗ ದೊರೆತಿದೆ.
ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರನೇ ತರಗತಿಯ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ನೇಜಾರು ಜ್ಯೋತಿನಗರ ಆರನೇ ಕ್ರಾಸ್ ಸಮೀಪ ನಡೆದಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್ ಡಿಸೇಲ್ ದರ ಏರಿಕೆ ವಿಚಾರವಾಗಿ ಮಂಗಳೂರಿನಲ್ಲಿ ದ.ಕ.ಜಿಲ್ಲಾ NSUI ಹಾಗೂ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು.
ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಾಟ ಮಾಡುತಿದ್ದ ಅಕ್ರಮ ಜಾನುವಾರುವನ್ನು ಭಜರಂಗದಳ ಮಾಹಿತಿಯ ಮೇರೆಗೆ ಮಂಗಳೂರು ಜೆಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ (34) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಮುಸ್ಲಿಂ ಹೆಣ್ಣು ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.
ಡಿಸೇಲ್, ಪೆಟ್ರೋಲ್ ಉಳಿತಾಯದ ಬಗ್ಗೆ ಪ್ರಧಾನಿ ಮಾತಿಗೆ ಸಿಎಂ ತಕರಾರು ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕಿರುಗುಂದ ಗ್ರಾಮದಲ್ಲಿ ಶ್ರೀ ಬಿಳಿಗಿರಿ ರಂಗನಾಥಸ್ವಾಮಿಯ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಇಂಪು ಇಂಚರ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ಏರ್ಪಡಿಸಲಾಗಿದ್ದ ಬಿಳಿಗಿರಿ ರಂಗಯ್ಯನ ನೋಡೋಣ ಬನ್ನಿ ಜನಪದ ಕಲಾಪ್ರದರ್ಶನ, ಜಾನಪದ ಕಥೆ, ಗಾಯನ, ಸುಗಮಸಂಗೀತ, ಕಾರ್ಯಕ್ರಮವನ್ನು ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ಕೆ.ರಂಗಸ್ವಾಮಿ ಉದ್ಘಾಟಿಸಿದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನಿಯಮಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಮೇ 17 ಮತ್ತು 18 ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ‘ಗೇರು ಮೇಳ’ ಜರುಗಲಿದೆ ಎಂದು ಗೇರು ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್. ಗಟ್ಟಿ ಅವರು ತಮ್ಮ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಹೊಸ ಎತ್ತರಕ್ಕೆ ಏರಿದೆ. ಧಾರ್ಮಿಕ ಪ್ರವಾಸೋದ್ಯಮ, ಬೀಚ್ ಟೂರಿಸಂ, ದೈವಾರಾಧನೆ ಮತ್ತು ಪ್ರಕೃತಿ ಸೌಂದರ್ಯ ನೋಡಲು ದೇಶದ ಮೂಲೆ ಮೂಲೆಗಳಿಂದ ಪ್ರವಾಸಿಗರು ಹರಿದು ಬರುತ್ತಿದ್ದಾರೆ.
ಕೆಲವು ದಿನಗಳಲ್ಲಿಎಸ್ಐಟಿ ತಂಡಕ್ಕೆ ಕುಳಿತುಕೊಳ್ಳಲು ಶಾಮಿಯಾನ ವ್ಯವಸ್ಥೆ ಮಾಡಲಾಗಿತ್ತು. ಇದರ ಬಿಲ್ ಕೂಡ ಬಾಕಿ ಇದೆ.
ತಾಂತ್ರಿಕ ದೋಷದಿಂದ ಫಿಶ್ ಮಿಲ್ ಲಾರಿಯಿಂದ ತೈಲ ಸೋರಿಕೆಯಾಗಿರುವ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿರುವ ಮಹಾರುದ್ರಯಾಗ ಅಂಗವಾಗಿ ಇಂದು ಬೆಳಿಗ್ಗೆಯಿಂದ ರುದ್ರಜಪ, ಉಗ್ರಾಣ ಮುಹೂರ್ತ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.