Showing 20 of 21629 articles • Page 150 of 1082
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ವಿದ್ಯಾರ್ಥಿವೇತನ ಮತ್ತು ಸಹಾಯಧನ ವಿತರಣಾ ಸಮಾರಂಭ ಮೇ 17 ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂದಾರ್ತಿಯ ಕರ್ನಾಟಕ ಮರಾಠ ಪರಿಷತ್ ನಿವೇಶನದಲ್ಲಿ ನಡೆಯಲಿದೆ ಎಂದು ಪರಿಷತ್ ನ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್ ಕವಡೆ ಹೇಳಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಾಂತರ ಜಾಮೀನು ನಿರಾಕರಿಸಿದ್ದು, ಇಂದಿನಿಂದ ಒಂದು ವರ್ಷದ ಒಳಗೆ ತ್ವರಿತ ವಿಚಾರಣೆ ನಡೆಸಿ ಪ್ರಕರಣ ಇತ್ಯರ್ಥ ಗೊಳಿಸಲು ಟ್ರಯಲ್ ಕೋರ್ಟ್ ಗೆ ಆದೇಶ ಹೊರಡಿಸಿದೆ.
ಅಲೋಶಿಯಸ್ ವಿವಿಯ ಸ್ಕೂಲ್ ಆಫ್ ಕಾಮರ್ಸ್, ಫೈನಾನ್ಸ್ ಮತ್ತು ಅಕೌಂಟೆನ್ಸಿಯ ಸಹಾಯಕ ಪ್ರಾಧ್ಯಾಪಕ ಹಾಗೂ 18 ಕೆಎಆರ್ ಬಿಎನ್ ಎನ್ಸಿಸಿಯ ಕ್ಯಾ| ಶಕಿನ್ ರಾಜ್ ಅವರಿಗೆ ಪ್ರತಿಷ್ಠಿತ ‘ಡಿಡಿಜಿ ಪ್ರಶಂಸಾ ಪ್ರಶಸ್ತಿ-2026’ ದೊರೆತಿದ್ದು, ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಉಪ ಮಹಾನಿರ್ದೇಶಕರಿಂದ ಏಪ್ರಿಲ್ 18, 2026 ರಂದು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ಗುಟ್ಟಾಗಿ ನಡೆಸಲಾಗುತ್ತಿದ್ದ ಎರಡು ಪ್ರತ್ಯೇಕ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಅಧಿಕೃತವಾಗಿ ತಿಳಿಸಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಬೆಳವಣಿಗೆಯಲ್ಲಿ ಪುಣೆಯ ಅಹಲ್ಯಾನಗರದ ಧನಂಜಯ ಲೋಖಂಡ ಮತ್ತು ಮನಿಷಾ ವಾಗ್ಮೋರೆ ಎಂಬುವವರನ್ನು ಗುರುವಾರ ಬಂಧಿಸಿದ್ದಾರೆ.
ಮಳೆ ನಡುವೆ ಬೃಹತ್ ಗಾತ್ರದ ಆಲಿಕಲ್ಲು ಧರೆಗೆ ಬಿದ್ದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶದಲ್ಲಿನ ಮೋಡಗಳ ಚಲನೆಯಿಂದಾಗಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮತ್ತಷ್ಟು ಬಿರುಸಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆನ್ನಲ್ಲೇ ಈಗ ಸಂಕುಚಿತ ನೈಸರ್ಗಿಕ ಅನಿಲ ದರವೂ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎನ್ಜಿ ಬೆಲೆಯನ್ನು ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಿಸಲಾಗಿದೆ.
ನಿನ್ನೆ ರಾತ್ರಿ ಸಂಭವಿಸಿದ ಭೀಕರ ಮಳೆ ಮತ್ತು ಗಾಳಿಗೆ ಮನೆಯೊಂದರ ಮೇಲ್ಪಾವಣಿ ಕುಸಿದು ಬಿದ್ದ ಪರಿಣಾಮ, ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಲಮೇಲ ತಾಲೂಕಿನ ಮೊರಗಟ್ಟಿ ಗ್ರಾಮದಲ್ಲಿ ನಡೆದಿದೆ.
ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ 3 ರೂಪಾಯಿ ಏರಿಕೆಯಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ.
ಸುತ್ತಮುತ್ತಲಿನ ಭಾಗಗಳಲ್ಲಿ ನಿನ್ನೆ ಸಂಜೆ ಗುಡುಗು ಸಹಿತ ಸುರಿದ ಭಾರೀ ಮಳೆಗೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್ ವ್ಯತ್ಯಯಗೊಂಡಿದೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ಅದ್ಧೂರಿಯಾಗಿ ನಡೆಯಿತು.
Samarthanam Trust for the Disabled ಸಂಸ್ಥೆಯು Quin Bay Technologies Private Limited ಸಹಯೋಗದಲ್ಲಿ ಆಯೋಜಿಸಿರುವ “ಸಮರ್ಥನಂ ಕಪ್ 2026 – ಕರ್ನಾಟಕ ಪುರುಷರ ಅಂಧರ ಕ್ರಿಕೆಟ್ ಟೂರ್ನಿ” ಇದೀಗ ನಾಕೌಟ್ ಹಂತಕ್ಕೆ ಪ್ರವೇಶಿಸಿದೆ.
ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ತೇಗದ ಮರ ಹಾಗೂ ಸೀಸನ್ ಕಟ್ಟಿಗೆಗಳನ್ನು ವಶಕ್ಕೆ ಪಡೆಯಲಾಗಿದೆ.
ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ಗಳನ್ನು ಹೊಂದಿದ್ದು, ಇದು ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಅಜೀರ್ಣಕ್ಕೆ ಚಿಕಿತ್ಸೆ ನೀಡುತ್ತದೆ.
ಬೈರೂತ್ನ ದಕ್ಷಿಣ ಹೆದ್ದಾರಿಯಲ್ಲಿ ಕಾರುಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಮೂರು ದಾಳಿಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ ತಾಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ.
ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ ಹೊರಡಿಸಿದೆ.