Showing 20 of 21629 articles • Page 153 of 1082
ಸಂಶೋಧಕರು ನಾಟ್ಯ ಶಾಸ್ತ್ರದಿಂದ ಪಡೆದ 2,000 ವರ್ಷಗಳಷ್ಟು ಹಳೆಯದಾದ ಭಾರತೀಯ ನೃತ್ಯ ವ್ಯವಸ್ಥೆಯನ್ನು ವಿಶ್ಲೇಷಿಸಲು AI ಅನ್ನು ಬಳಸಿದ್ದಾರೆಂದು ವರದಿಯಾಗಿದೆ.
ಮುಂಬೈ ಮೂಲದ ಖ್ಯಾತ ಲೇಖಕ ಮತ್ತು ಜ್ಞಾನ ತರಬೇತುದಾರ ಡಾ. ರಾಧಾಕೃಷ್ಣನ್ ಪಿಳ್ಳೈ (50) ಸೋಮವಾರ ರಾತ್ರಿ ಮಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ ಬಸವಣ್ಣರವರನ್ನ ಸ್ಮರಣೆ ಮಾಡುವ ಜೊತೆಗೆ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗಳಿಗೆ ಮಹತ್ವ ಬರುತ್ತದೆ ಎಂದು ಜಗದ್ಗುರು ಶ್ರೀ ಶಿವರಾತ್ರಿಶ್ವರ ದೇಶಿ ಕೇಂದ್ರ ಮಹಾಸ್ವಾಮಿಗಳು ತಿಳಿಸಿದರು.
ಉಡುಪಿಯಲ್ಲಿ ದಿನ ನಿತ್ಯ ಟ್ರಾಫಿಕ್ ಸಮಸ್ಯೆ ಮಿತಿ ಮೀರುತ್ತಿದ್ದು, ರಸ್ತೆಯುದ್ದಕ್ಕೂ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ. ನಗರದಲ್ಲಿ ಉಂಟಾಗಿರುವ ಸಂಚಾರ ನಿಯಂತ್ರಿಸಲು ನಗರಸಭೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಉಡುಪಿ ನಾಗರಿಕರ ಕಲ್ಯಾಣ ವೇದಿಕೆ ಒತ್ತಾಯಿಸಿದೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ನಡೆಯಲಿದ್ದು, ಇದರ ಪ್ರಯುಕ್ತ ಬೃಹತ್ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಇಂದು ಚಾಲನೆ ನೀಡಲಾಯಿತು.
ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ಕಾಪು ಪುರಸಭೆ ವತಿಯಿಂದ ನಿರ್ಮಿಸಲು ಹೊರಟಿರುವ ಕೊಳಚೆ ನೀರು ಶುದ್ಧೀಕರಣ ಘಟಕ (STP) ನಿರ್ಮಾಣ ವಿರೋಧಿಸಿ ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿ, ಮೂಳೂರು ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕರ್ನಾಟಕ ರಾಜ್ಯ ಮೀನುಗಾರಿಕೆ ಸುಧಾರಣಾ ಯೋಜನೆ (ಎಫ್ಐಪಿ) ಅಡಿಯಲ್ಲಿ ಸ್ಮಾಲ್ ಪೆಲಾಜಿಕ್ ಪರ್ಸ್ಸೈನ್ ಮೀನುಗಾರಿಕೆ ಯೋಜನೆಯ 8ನೇ ಪಾಲುದಾರರ ಸಭೆ ಎರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ ಬೀಚ್ ರೆಸಾರ್ಟ್ನಲ್ಲಿ ನಡೆಯಿತು.
ಬಾವಿಗೆ ಇಳಿದು ಮಣ್ಣು ತೆಗೆಯುತ್ತಿದ್ದ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ಮೂವರು ಕಾರ್ಮಿಕರನ್ನು ಕಾರ್ಕಳ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಸಮೀಪದ ಅಶ್ವಥಪುರ ಎಂಬಲ್ಲಿ ಈ ಘಟನೆ ನಡೆದಿದೆ.
ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ ಮಲ್ಪೆ ಇದರ ವತಿಯಿಂದ ಉಡುಪಿಯ ಶ್ರೀಕೃಷ್ಣಾಪುರ ಮಠ, ಶ್ರೀಅದಮಾರು ಮಠ, ಶ್ರೀಪಲಿಮಾರು ಮಠ, ಶ್ರೀಪೇಜಾವರ ಮಠ ಹಾಗೂ ಶ್ರೀಸೋದೆ ವಾದಿರಾಜ ಮಠದ ಶ್ರೀಪಾದಂಗಳ ಅವರ ಸಂಕಲ್ಪದಂತೆ, ಶ್ರೀ ಈಶಪ್ರಿಯತೀರ್ಥರ ನೇತೃತ್ವದಲ್ಲಿ ಶ್ರೀಕೃಷ್ಣನು ಮಧ್ವರ ಭಕ್ತಿಗೆ ಒಲಿದು ಕಾಣಿಸಿಕೊಂಡು ಅವರ ಕೈ ಸೇರಿದ ಮಲ್ಪೆಯ ಕಡಲತೀರದ ‘ಶ್ರೀಆನಂದ ಶರಧಿ’ ಎಂಬ ಪ್ರತಿಷ್ಠಾನದ ನೂತನ ನಿವೇಶನದಲ್ಲಿ ಮೇ 15 ರಿಂದ ಮೇ 31 ರವರೆಗೆ “ಬೃಹತ್ ಕೃಷಿ ಮೇಳ, ಭಜನಾ ಕಮ್ಮಟ ಹಾಗೂ ಮಾತೃ ವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ವಿಜಯ ಕೊಡವೂರು ತಿಳಿಸಿದ್ದಾರೆ
ಕಾನ -ತೋಕೂರು -ಜೋಕಟ್ಟೆ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ರಸ್ತೆ ಸಂಪೂರ್ಣ ಹೊಂಡಗುಂಡಿಗಳಿಂದ ತುಂಬಿ ಹೋಗಿದ್ದು ಕೂಡಲೇ ರಸ್ತೆ ಕಾಮಗಾರಿ ನಡೆಸಿ ದುರಸ್ಥಿ ಮಾಡುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ಇಂದು ರಸ್ತೆ ತಡೆ ಪ್ರತಿಭಟನೆ ನಡೆಯಿತು.
ಮೇ 10, 2026: ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ ಮೇ 10ರಂದು ವೈಬ್ರೆಂಟ್ ಇಂಡಸ್ಟ್ರಿಯಲ್ ಸೇಫ್ಟಿ ಟ್ರೈನಿಂಗ್ ಅಕಾಡೆಮಿಯಲ್ಲಿ ತಾಯಂದಿರ ದಿನಾಚರಣೆ 2026 ಅನ್ನು ಅತ್ಯಂತ ಸಂಭ್ರಮ ಹಾಗೂ ಆತ್ಮೀಯತೆಯಿಂದ ಆಚರಿಸಲಾಯಿತು.
ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಮೇ 3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ ಖಂಡಿಸಿದ್ದಾರೆ.
ಕ್ಯಾಲಿಕಟ್ನಲ್ಲಿ ನಡೆದ ಪ್ರತಿಷ್ಠಿತ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸೀಸನ್-10 ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿಭಾವಂತ ಪುಟಾಣಿ ಮಕ್ಕಳಾದ ಲೌಕ್ಯ ಎಸ್ ರೈ (6) ಹಾಗೂ ಸಚಿತಾ ರಾವ್ (12) ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.
ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕಳವು ನಡೆಸಿ ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪಣಂಬೂರು ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ.
ಆಟೋ ರಿಕ್ಷಾದಲ್ಲಿ ಪ್ರಯಾಣಿಕರು ಮರೆತು ಬಿಟ್ಟಿದ್ದ ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ಮಂಗಳೂರು ಪೂರ್ವ (ಕದ್ರಿ) ಠಾಣೆಯ ಪೊಲೀಸರು ಮತ್ತು ಆಟೋ ಚಾಲಕನ ಪ್ರಾಮಾಣಿಕತೆಯಿಂದ ವಾರಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಗಿದೆ.
ಕರ್ನಾಟಕದ ಮುಜರಾಯಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು 2025–26ರ ಸಾಲಿನ ಆರ್ಥಿಕ ವರ್ಷದಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ದೇವಸ್ಥಾನವಾಗಿ ಹೊರಹೊಮ್ಮಿದೆ.
ಅಕ್ರಮ ಪೆಟ್ರೋಲ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆರೋಪಿಯನ್ನು ಕೊನೆಗೂ ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉದ್ಯೋಗ ನಿಮಿತ್ತ ಇಸ್ರೇಲ್ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಹೊಯ್ಗೆ ಎಂಬಲ್ಲಿ ಸೋಮವಾರ ನಡೆದಿದೆ.