Showing 20 of 21629 articles • Page 155 of 1082
ಎರಡು ಲಾರಿಗಳು ಪರಸ್ಪರ ಓವರ್ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಪರಂಗಿಪೇಟೆಯಲ್ಲಿ ನಡೆದಿದೆ. ಮೃತರನ್ನು ಫರಂಗಿಪೇಟೆ ನಿವಾಸಿ ಸಲಾಹುದ್ದಿನ್ (60) ಎಂದು ಗುರುತಿಸಲಾಗಿದೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಾಗಿದ್ದು, ಪ್ರಮಾಣವಚನ ಸ್ವೀಕಾರಕ್ಕೆ ಸ್ಪೀಕರ್ ಯು.ಟಿ ಖಾದರ್ ವಿಳಂಬ ಮಾಡುತ್ತಿರುವ ಬಗ್ಗೆ ಬಿಜೆಪಿ ಆರೋಪ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾನ -MRPL ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ಇಂದು ರಸ್ತೆ ತಡೆ ಪ್ರತಿಭಟನೆ ನಡೆಯಿತು.
ಕ್ರಿಕೆಟ್ ಆಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಉತ್ತರ ವಿಭಾಗದ ಯಶವಂತಪುರ ಹಾಗೂ ನಂದಿನಿ ಲೇಔಟ್ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರು ಪೆಡ್ಲರ್ಗಳನ್ನು ಬಂಧಿಸಿ ₹20.10 ಕೋಟಿ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಕುಂದಾಪುರ ತಾಲೂಕಿನ ವಕ್ವಾಡಿ ದ್ಯಾಗಳಮನೆಯ ಆವರಣದ ಹೊರಭಾಗದಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆಯಾಗಿದ್ದು, ಇದು ಸುಮಾರು 9ರಿಂದ 10ನೇ ಶತಮಾನದ ಆಳುಪರ ಕಾಲದ ಶಿಲ್ಪವಾಗಿರಬಹುದೆಂದು ಪುರಾತತ್ತ್ವ ಸಂಶೋಧಕ ಹಾಗೂ ಉಡುಪಿಯ ಆದಿಮ ಕಲಾ ಟ್ರಸ್ಟ್ನ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.
ಇದೇ ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ಟ್ರಾಕ್ಟರ್ ಟಿಲ್ಲರ್ ವಾಹನ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಉಡುಪಿಯ ಕೊಕ್ಕರ್ಣೆ ಮೊಗವೀರ ಪೇಟೆ ಬಳಿ ನಡೆದಿದೆ. ಮೃತರನ್ನು ಪಕೀರಪ್ಪ ಎಂದು ಗುರುತಿಸಲಾಗಿದೆ.
ಕಥಾ ಬಿಂದು ಪ್ರಕಾಶನ ವತಿಯಿಂದ ಹತ್ತನೇ ಬಾರಿ ಆಯೋಜಿಸಲಾದ ಕನ್ನಡ ಕಂಪು ಕಾರ್ಯಕ್ರಮದಲ್ಲಿ ಯುವ ಗಾಯಕಿ ರಿಶಾಲ್ ಮೆಲ್ಬಾ ಕ್ರಾಸ್ತಾ ಅವರಿಗೆ ಪ್ರತಿಷ್ಠಿತ ಸಾಧನ ಶ್ರೀ ರಾಷ್ಟ್ರ ಪ್ರಶಸ್ತಿ ಪ್ರದಾನಿಸಲಾಯಿತು.
ಬಸ್ ಪ್ರಯಾಣದ ವೇಳೆ ತಮಗೆ ಆದ ಕಹಿ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಆಟೊನೊಮಸ್ಸ್ ಸಂಸ್ಥೆಯಾದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ನ ವ್ಯವಹಾರ ಆಡಳಿತ ವಿಭಾಗವು, ಮಹತ್ವಾಕಾಂಕ್ಷಿ ಎಂಬಿಎ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯ ತಯಾರಿಯನ್ನು ಬೆಂಬಲಿಸಲು ಕೇಂದ್ರೀಕೃತ PGCET ತರಬೇತಿ ಕಾರ್ಯಕ್ರಮ – 2026 ಅನ್ನು ಆಯೋಜಿಸುತ್ತಿದೆ.
ಸ್ತನ ಕ್ಯಾನ್ಸರ್ ಕಾಯಿಲೆಯ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವ ಮತ್ತು ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಿಶೇಷ ಸ್ತನ ಆರೋಗ್ಯ ತಪಾಸಣೆ ಉಪಕ್ರಮವನ್ನು ಮಂಗಳೂರು, ಡಾ ಬಿ ಆರ್ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆ ಘೋಷಿಸಿದೆ.
ಕ್ರೇನ್ ವಾಹನವೊಂದು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ.
ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ಯಾಂಪ್ರಸಾದ್ (46) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಪೊಲೀಸ್ ಲೇಔಟ್ನಲ್ಲಿ ನಡೆದಿದೆ.
ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ ನಾಯರ್ ಅವರು ಮಂಗಳವಾರ ಬೆಳಿಗ್ಗೆ ಕೇರಳದ ಪತ್ತನಂತಿಟ್ಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತಾಲೂಕಿನ ಅಂಬಳೆ ಗ್ರಾಮದ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಹಲವೆಡೆ ಕಳ್ಳತನ ಎಸಗಿದ್ದ ನಾಲ್ವರು ಅಂತರಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಐದು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಆಗ್ನೇಯ ಬ್ರೆಜಿಲ್ನ ಬೆಲೊ ಹೊರಿಜಾಂಟೆಯಲ್ಲಿ ಸೋಮವಾರ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡಿನ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗಿದ್ದು, ಅಲ್ಲಿನ ವಿಧಾನಸಭಾ ಚುನಾವಣೆಯಲ್ಲಿಆಡಳಿತಾರೂಢ ಡಿಎಂಕೆ ಪಕ್ಷವು ಸೋಲನ್ನು ಅನುಭವಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಎಂ.ಕೆ. ಸ್ಟಾಲಿನ್ ರಾಜೀನಾಮೆ ನೀಡಿದ್ದಾರೆ.
ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ.