Showing 20 of 21629 articles • Page 158 of 1082
ಈಗಾಗಲೇ ಸರ್ಕಾರದ ಒಳ ಮೀಸಲಾತಿಯ ಬಗ್ಗೆ ರಾಜ್ಯದಲ್ಲಿ ಸುಮಾರು 101 ಜಾತಿಯ ಪರ ಮೀಸಲಾತಿಯಲ್ಲಿ ಸರ್ಕಾರ ದೊಡ್ಡ ಧೋರಣೆಯನ್ನು ಮಾಡಿದೆ.
ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶವಾಗಲಿದೆ. ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತ ಸರ್ಕಾರವು ವಿಪತ್ತುಗಳ ಸಮಯದಲ್ಲಿ ನಾಗರಿಕರಿಗೆ ಎಚ್ಚರಿಕೆ ನೀಡಲು ‘ಸೆಲ್ ಬ್ರಾಡ್ಕಾಸ್ಟ್’ ಎಂಬ ಹೊಸ ತಂತ್ರಜ್ಞಾನವನ್ನು ಪರೀಕ್ಷಿಸುತ್ತಿದೆ. ಇದರ ಭಾಗವಾಗಿ, ಮೊಬೈಲ್ಗಳಿಗೆ ‘Extremely Severe Alert’ ಎಂಬ ಪರೀಕ್ಷಾರ್ಥ ಸಂದೇಶವನ್ನು ಕಳುಹಿಸಲಾಗಿದೆ.
ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮೇ 1 ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಮಂಗಳೂರಿನ ಪೌರ ಕಾರ್ಮಿಕರಿಗೆ ಕಾಯಕ ಗೌರವ ಕಾರ್ಯಕ್ರಮ ಪಂಪ್ವೆಲ್ ನಡೆಯಿತು.
ಮೊಬೈಲ್ಗೆ ರೀಚಾರ್ಜ್ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಮಹಿಳೆಯ ಜೊತೆ ರಾಸಲೀಲೆ ವಿಡಿಯೋ ಇಟ್ಟುಕೊಂಡು ಕಾಮುಕನೊಬ್ಬ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ, ಆರೋಪಿ ಚಂದ್ರೇಗೌಡನನ್ನು ಆರ್ ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಚಂದ್ರೇಗೌಡ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದು, ನಾನು ಪೊಲೀಸ್, ರಿಪೋರ್ಟರ್, ವಕೀಲ ಎಂದು ಹೇಳಿ ವಂಚನೆ ಎಸಗುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಮಂಡ್ಯ ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಹಾಗೂ ಪತ್ತೆ ಪ್ರಕರಣ ವರದಿಯಾದ ಹಿನ್ನೆಲೆ ಪಾಂಡವಪುರ ತಾಲ್ಲೂಕು ಆಡಳಿತ ಎಚ್ಚೆತ್ತಿದೆ.ತಾಲ್ಲೂಕು ಖಾಸಗೀ ಆಸ್ಪತ್ರೆಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪರವರ ಸಮಾಜ ಸೇವೆಯ 50 ವರ್ಷ ಆಚರಣೆಯನ್ನು ಪಕ್ಷವು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪುತ್ತೂರಿನಲ್ಲಿ ಕೃಷ್ಣ ರಾವ್ ಎಂಬಾತ ಪ್ರೇಮ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷವು ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪುನರುಚ್ಚರಿಸಿದ್ದಾರೆ.
ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಮರಗಳಿಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ.
ಜಮ್ಮು ನಗರದ ಹೊರವಲಯದಲ್ಲಿರುವ ಬಂಟಲಾಬ್ನ ಥಾಥ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದು ಬಿದ್ದಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ನಮ್ಮದು ಹಿಂದುತ್ವದ ಪಕ್ಷ ಕರ್ನಾಟಕ, ಕರಾವಳಿ, ಕೇರಳ ಅಂತೇನಿಲ್ಲ: ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್
ಸ್ಟೋಟಗೊಳ್ಳದೇ ಹಾಗೆ ಉಳಿದಿದ್ದ ಬಾಂಬ್ಗಳನ್ನು ನಿಷ್ಕ್ರಿಯಗೊಳಿಸುವ ವೇಳೆ ಸಂಭವಿಸಿದ ಸ್ಟೋಟದಲ್ಲಿ ಇರಾನ್ನ ರೆವಲ್ಯೂಷನರಿ ಗಾರ್ಡ್ನ 14 ಸದಸ್ಯರು ಮೃತಪಟ್ಟಿದ್ದಾರೆ ಎಂದು ಇರಾನ್ ಮಾಧ್ಯಮಗಳು ಶುಕ್ರವಾರ ವರದಿ ಮಾಡಿದೆ.
ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹದೇಶ್ವರ ಬೆಟ್ಟದ ರಸ್ತೆಯ ಪೊನ್ನಾಚಿ ಕ್ರಾಸ್ ಬಳಿ ಅಪಘಾತ ನಡೆದಿದೆ.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ, ಕಾರ್ಮಿಕ ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಶುಕ್ರವಾರ ನಡೆಯಿತು.
“ಬಿಎಸ್ ವೈ ಅಭಿಮಾನೋತ್ಸವ’ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ಜಿಲ್ಲೆಯಿಂದ 5 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪರಿಷತ್ ಸದಸ್ಯ ಕಿಶೋರ್ಕುಮಾರ್ತಿಳಿಸಿದರು.
ರಾಜ್ಯ ಸರಕಾರ ಆಡಳಿತ, ಅಭಿವೃದ್ಧಿ ಯೋಜನೆ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದೇ ಚರ್ಚೆ ಯಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್ಮೆಂಟ್ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಮದುವೆ ಮೆರವಣಿಗೆಯಲ್ಲಿ ಸಂಭ್ರಮದಿಂದ ಸಾಗುತ್ತಿದ್ದ 27 ವರ್ಷದ ವರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ.
ಸ್ಯಾಂಡಲ್ವುಡ್ನ ನಟ ಡಾಲಿ ಧನಂಜಯ್ ಧನ್ಯತಾ ದಂಪತಿಯ ಬಾಳಿಗೆ ಪುಟ್ಟ ಅತಿಥಿಯ ಆಗಮನವಾಗಿದೆ.