Showing 20 of 21629 articles • Page 159 of 1082
ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭವಾಗಿದೆ.
ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಬಾಳೆ ಬೆಳೆ, ಸಂಪೂರ್ಣವಾಗಿ ನೆಲೆ ಕಚ್ಚಿದೆ. ಚಾಮರಾಜನಗರ ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಬಾಳೆ ಬೆಳೆ ಹಾನಿಯಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಬೀಷ್ಮೋತ್ಸವ’ ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಇದೇ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ಪಿ ಹೇಳಿದರು.
ಜೆಟ್ ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹಜ್ ಯಾತ್ರೆಯ ವಿಮಾನ ದರವನ್ನು 10,000 ರೂ. ಹೆಚ್ಚಳ ಮಾಡಲಾಗಿದೆ.
ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯಲ್ಲಿ ನಡೆದಿದೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಾರ್ಗಸೂಚಿ ಅನ್ವಯ ಕಾರ್ಯಾಚರಣೆಗೆ, ಪೈಲಟ್ಗಳ ಕೊರತೆ ಕಾರಣಕ್ಕೆ ಶಿವಮೊಗ್ಗ–ಬೆಂಗಳೂರು ನಡುವೆ ವಿಮಾನ ಸಂಚಾರ ಮೇ 1ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಇಂಡಿಗೊ ಏರ್ಲೈನ್ಸ್ ಸಂಸ್ಥೆ ಮುಂದಾಗಿದೆ.
ಮದವೇರಿದ ಆನೆಯೊಂದು ಅಟ್ಟಹಾಸಗೈದಿದೆ. ಆನೆಯ ತುಳಿತಕ್ಕೆ ಸಿಲುಕಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಾವುತನ ಸ್ಥಿತಿ ಗಂಭೀರವಾಗಿರುವ ಘಟನೆ ಎರ್ನಾಕುಳಂ ಜಿಲ್ಲೆಯ ಅಂಕಮಾಲಿಯ ಕಿದಂಗೂರ್ ಮಹಾವಿಷ್ಣು ದೇವಸ್ಥಾನದ ಆವರಣದಲ್ಲಿ ನಡೆದಿದೆ.
ಸುಪ್ರಸಿದ್ಧ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ 2026-27ನೇ ಸಾಲಿನ ಆಡಳಿತ ಸಮಿತಿಗೆ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ವತಿಯಿಂದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದ್ದು, ಸಮಿತಿಯು ಕ್ಷೇತ್ರವನ್ನು ಮುನ್ನಡೆಸಲು ಸನ್ನದ್ಧವಾಗಿದೆ ಎಂದು ಸಮಿತಿಯ ನೂತನ ಕಾರ್ಯದರ್ಶಿ ರವಿಶಂಕರ್ ಮಿಜಾರ್ ತಿಳಿಸಿದರು.
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ.
ಕಾಸರಗೋಡಿನ ಅಡೂರಿನ ರವಿ ಎಂಬುವವರ ಮನೆಯಲ್ಲಿ ‘ಚಿನ್ನದ ಉಂಗುರ ಧರಿಸಿದ್ದ’ ಜೀವಂತ ಹಾವು ಕಂಡುಬಂದಿದೆ.
ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ ಪ್ರವಾಸಿ ಬೋಟ್ನಲ್ಲಿದ್ದ ಉಳಿದ ಐವರ ಮೃತದೇಹಗಳನ್ನು ಶುಕ್ರವಾರ ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದು, ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರ ನೇತೃತ್ವದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್, ಬಸ್ ನೌಕರರ ಸಂಘ ಹಾಗೂ ಆಟೋ ರಿಕ್ಷಾ ಚಾಲಕ-ಮಾಲೀಕರ ಸಂಘದ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಮಂಗಳೂರಿನ ಹಂಪನಕಟ್ಟೆಯ ತಾಜ್ ಮಹಲ್ ಎದುರಿನ ರಿಕ್ಷಾ ನಿಲ್ದಾಣದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು.
ತಾಯಿಯ ಮಮತೆ ಮತ್ತು ಕ್ಷಮತೆಗೆ ಯಾವುದೇ ಬೆಲೆ ಕಟ್ಟಲು ಸಾಧ್ಯವಿಲ್ಲ.
ಶ್ರಮಜೀವಿ ಕಾರ್ಮಿಕರ ಪರಿಶ್ರಮದಿಂದ ಜಗತ್ತು ಬೆಳೆದು ನಿಂತಿದೆ ಕಾರ್ಮಿಕರಿಲ್ಲದೆ ಸಮಾಜದ ಚಕ್ರ ತಿರುಗದು ಎಂದು ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಹೇಳಿದರು.
ನಗರದಲ್ಲಿ ನೇತ್ರಾವತಿ ನದಿ ನೀರಿನ ಒಳಹರಿವು ಈಗಾಗಲೇ ನಿಂತಿದ್ದು, ಬಿರು ಬಿಸಿಲಿನಿಂದಾಗಿ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ.
ತಾಲ್ಲೂಕಿನ ಹೆಡಿಯಾಲ ಸಮೀಪದ ಈರೇಗೌಡನಹುಂಡಿ ಗ್ರಾಮದಲ್ಲಿ ಬಿರುಗಾಳಿಯ ರಭಸಕ್ಕೆ ತೆಂಗಿನ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಎರಡು ವಿದ್ಯುತ್ ಕಂಬಗಳು ದರೆಗರುಳಿದ ಘಟನೆ ನಡೆದಿದೆ.
ಉಪದ್ರವ ಉಂಟು ಮಾಡಿ ಸಾರ್ವಜನಿಕರಿಗೆ ಶಾಂತಿ ಭಂಗ ಮಾಡಿದ ವ್ಯಕ್ತಿಗೆ ನಂಜನಗೂಡು ಪ್ರಧಾನ ಸಿವಿಲ್ ನ್ಯಾಯಾಲಯ ಸೇವೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತಾಲ್ಲೂಕಿನ ಯಲ್ದೂರು-ಹೊಗಳಗೆರೆ ತೋಟದ ಮಧ್ಯೆ ಅಕ್ರಮವಾಗಿ ಇಸ್ಟೀಟ್ ಜೂಜಾಟದಲ್ಲಿ ತೊಡಗಿದ್ದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾತ್ರಿ ಸುರಿದ ಗಾಳಿ ಮಳೆಗೆ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಬಳಿ ಹಾಕಿದ್ದ ಶಾಮಿಯಾನ ನೆಲಕಚ್ಚಿದೆ.
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.