Showing 20 of 21592 articles • Page 16 of 1080
ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಮಂಗಳೂರಿನ ಬಜಪೆ ಇನ್ಸ್ಪೆಕ್ಟರ್ ಬಾಲಕೃಷ್ಣ ಬಿದ್ದಿದ್ದಾರೆ. 5000 ಲಂಚದ ಹಣ ಪಡೆಯಬೇಕಾದರೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಇನ್ಸ್ಪೆಕ್ಟರ್ ಬಿದ್ದಿದ್ದಾರೆ. ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇನ್ಸ್ಪೆಕ್ಟರ್ ಸಿಕ್ಕಿ ಬಿದ್ದಿದ್ದಾರೆ.
‘ಉಡುಪಿಯ ರಾಜ’ ಖ್ಯಾತಿಯ ಕಡಿಯಾಳಿ ಉಡುಪಿ ಸಾರ್ವಜನಿಕ ಗಣೇಶೋತ್ಸವದ ಸಂಕಷ್ಟಹರ ಗಣಪತಿ ವಿಗ್ರಹದ ಜಲಸ್ತಂಭನ ಮಲ್ಪೆ ಕಡಲ ಕಿನಾರೆಯಲ್ಲಿ ನೆರವೇರಿತು.
ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಡೆದಿರುವ ನಿರಂತರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ದಲಿತರ ಭೂಮಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ (DHS) ರಾಜ್ಯ ಸಮಿತಿ ಕರೆ ನೀಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಸೋಮವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ಜಗನ್ನಾಥ ದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಜಗನ್ನಾಥ ದಾಸರ ಕೃತಿಗಳ ಮೆರವಣಿಗೆ ರಥಬೀದಿಯಲ್ಲಿ ನಡೆಯಿತು.
ಉರ್ದು ಭಾಷೆಗೆ ಅಧಿಕೃತ ಭಾಷೆಯ ಮಾನ್ಯತೆ ನೀಡುವಂತೆ ಸಿಎಂ ಡಿಕೆಶಿಗೆ SDPI ಪತ್ರ ಬರೆದಿದ್ದಾರೆ.
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್ ಹಾಗೂ ವಿವಿಧ ಕಾರ್ಯಕ್ರಮಗಳ ಟಿಕೆಟ್ಸ್ ಮಾರಾಟ ಮಾಡಲಾಗುತ್ತದೆ. ಆನ್ ಲೈನ್ ಮೂಲಕ ದಸರಾ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ಸ್ ಬುಕ್ಕಿಂಗ್ ಗೆ ಅವಕಾಶ ಇದೆ.
ಬಿಜೆಪಿಯವರು ರಣಹದ್ದುಗಳಂತೆ. ಎಲ್ಲಿ ಕೋಮು ಗಲಭೆ ನಡೆಯುತ್ತದೆಯೋ ಅಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಕುಡಿಯುವ ನೀರಿಲ್ಲ, ಶೌಚಾಲಯಗಳು ದುಸ್ಥಿತಿ, ಪ್ರಯೋಗಾಲಯಗಳಲ್ಲಿ ಸಲಕರಣೆಗಳಿಲ್ಲ, ಗ್ರಂಥಾಲಯವೂ ಇಲ್ಲ. ಹೀಗೆ ಸಾಲು ಸಾಲು ಸಮಸ್ಯೆಗಳ ನಡುವೆ ನಂಜನಗೂಡಿನ ದೇಬೂರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನ 178ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಅಂಗವಾಗಿ ನಂಜನಗೂಡು ತಾಲ್ಲೂಕು ಸ್ವೀಪ್ ಚಟುವಟಿಕೆಗೆ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಅವರು ಚಾಲನೆ ನೀಡಿದರು.
ಉಡುಪಿ ಜಿಲ್ಲಾಡಳಿತ, ಕಾಪು ಪುರಸಭೆ, ಸ್ವಚ್ಛಂ ವಾಟರ್ ಅಡ್ವೆಂಚರ್, ವಿವಿಧ ಸಂಘ–ಸಂಸ್ಥೆಗಳು ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳ ಸಹಯೋಗದಲ್ಲಿ ಕಾಪು ಬೀಚ್ನಲ್ಲಿ ಭಾನುವಾರ ಸ್ವಚ್ಛತಾ ಅಭಿಯಾನ ನಡೆಯಿತು.
ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದ ಆರೋಪದಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ.
ಶಿವನ ಓಲೈಕೆಗೆ ಸರ್ವ ಋತುಗಳಲ್ಲಿ ಪಾರ್ವತಿಯ ತಪಸ್ಸು, ಅವಳ ಆತ್ಮ ಸೌಂದರ್ಯದ ಪ್ರೀತಿಗೆ ಹೃದಯಭಾಗವನ್ನೇ ನೀಡಿ ಅರ್ಧನಾರೀಶ್ವರನಾಗುವ ಶಿವ
ಕೆಎಸ್ಆರ್ಟಿಸಿ ಬಸ್ ನಲ್ಲಿ ಮಹಿಳೆಯರು ಗಲಾಟೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ರೆಹಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಿದ್ದು, ಈ ಪೈಕಿ ರೌಡಿಶೀಟರ್ ಭರತ್ ಕುಮ್ದೇಲು ಸೇರಿ ಆರು ಮಂದಿಗೆ ಹೆಚ್ಚುವರಿಯಾಗಿ ಗೂಂಡಾ ಕಾಯ್ದೆ ಹೇರಲಾಗಿದೆ.
ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ.
ಅಬ್ದುಲ್ ರೆಹಮಾನ್ ಕೊಲೆ ಆರೋಪಿಗಳ ವಿರುದ್ಧ ಪೊಲೀಸರು ಗೂಂಡಾ ಕಾಯ್ದೆ ಪ್ರಯೋಗಿಸಿರುವುದನ್ನು ವಿರೋಧಿಸಿ ವಿ.ಎಚ್.ಪಿ. ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಪದ್ಮರಾಜ್ ಆರ್. ಪೂಜಾರಿ, ದೇಶದಲ್ಲಿ ಸಂವಿಧಾನ ಹಾಗೂ ಕಾನೂನಿನ ಆಡಳಿತವಿದೆ.
ಇಲ್ಲಿಯ ಸಮೀಪದ ಪೆರ್ನೆಯ ಮೈರಕಟ್ಟೆಯಲ್ಲಿ ಇಬ್ಬರು ಮಕ್ಕಳನ್ನು ಬಾವಿಗೆಸೆದು ಓರ್ವ ಕಂದನ ಸಾವಿಗೆ ಕಾರಣವಾದ ಆರೋಪಿತೆ ಮಹಿಳೆ ನೂರುನ್ನಿಸಾ ಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರವಿವಾರ (ಸೆ.20) ಮುಂಜಾನೆ ಸರಣಿ ಅಪಘಾತ ಸಂಭವಿಸಿದ್ದು, ಮದ್ಯದ ಲೋಡ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದೆ. ಚಾಲಕನ ದುಡುಕು ಹಾಗೂ ನಿರ್ಲಕ್ಷ್ಯದ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆಯಲ್ಲಿ ಮೂರು ವಾಹನಗಳು ಜಖಂಗೊಂಡಿವೆ.
ಮಂಗಳೂರು” ಎಂ.ಸಿ.ಸಿ. ಬ್ಯಾಂಕ್ ಲಿ. 2025–26ನೇ ಸಾಲಿನಲ್ಲಿ ರೂ. 10.07 ಕೋಟಿ ನಿವ್ವಳ ಲಾಭ ದಾಖಲಿಸಿದ್ದು, ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರಿಗೆ 10% ಡಿವಿಡೆಂಡ್ ಘೋಷಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠ ಹಾಗೂ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇವುಗಳ ಜಂಟಿ ಆಶ್ರಯದಲ್ಲಿ ‘ಸಾಹಿತ್ಯಿಕ್ ಲಿಖ್ಣಿ’ ಎಂಬ ಒಂದು ದಿನದ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರವನ್ನು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.