Showing 20 of 20442 articles • Page 162 of 1023
ಹಲವಾರು ಸುರಕ್ಷತಾ ಸಲಹೆಗಳ ಹೊರತಾಗಿಯೂ ಇರಾನ್ನಲ್ಲಿಯೇ ಉಳಿದುಕೊಂಡಿದ್ದ ಭಾರತೀಯ ವಿದ್ಯಾರ್ಥಿಗಳು ಈಗ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ತುರ್ತು ಸಹಾಯವನ್ನು ಕೋರುತ್ತಿದ್ದಾರೆ.
ಇರಾನ್ ಮೇಲೆ ಇಸ್ರೇಲ್, ಅಮೆರಿಕ ಜಂಟಿಯಾಗಿ ಯುದ್ಧ ಸಾರಿದ್ದು 30 ಕಡೆ ದಾಳಿ ನಡೆಸಿ ನಗರಗಳನ್ನ ಉಡೀಸ್ ಮಾಡಿದ್ವು. ಇದಕ್ಕೆ ಇರಾನ್ ಕೂಡ ಪ್ರತ್ಯುತ್ತರ ಕೊಟ್ಟಿದ್ದು ದೊಡ್ಡಣ್ಣನ ಸೇನಾ ನೆಲೆಗಳನ್ನೇ ಧ್ವಂಸ ಮಾಡಿದೆ. ಇದೀಗ ಇರಾನ್ನ ಸರ್ವೋಚ್ಛ ನಾಯಕನನ್ನೇ ಮಿತ್ರಪಡೆಗಳು ಹತ್ಯೆಗೈದಿವೆ. ಖಮೇನಿ ಸಾವಿನ ಬೆನ್ನಲ್ಲೇ ಇರಾನ್ ಹೊರ್ಮುಜ್ ಜಲಸಂಧಿ ಮುಚ್ಚಿದೆ.
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಬೆನ್ನಲ್ಲೇ ಗಲ್ಫ್ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಿವಾರ ಪತ್ರ ಬರೆದಿದ್ದಾರೆ.
ಅರೇಬಿಯನ್ ಸಮುದ್ರ ತೀರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಒಮಾನ್ ಕರಾವಳಿಯ ಸಮೀಪ ಪಲಾವ್ ಧ್ವಜ ಹೊತ್ತ ‘ಸ್ಕೈಲೈಟ್’ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿದೆ.
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಯಿತು.
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 17 ಜನರು ಮೃತಪಟ್ಟಿದ್ದಾರೆ. 18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಸ್ಫೋಟದಲ್ಲಿ ಗಾಯಗೊಂಡವರನ್ನು ನಾಗ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರಂದು ನಡೆದಿದೆ.
ಕೆಸರು ಗದ್ದೆಗೆ ಇಳಿದ ಎನ್ಎಸ್ಎಸ್ ಶಿಬಿರಾರ್ಥಿಗಳು, ಭತ್ತದ ಪೈರು ನೆಟ್ಟು ನಾಟಿ ಮಾಡಿ, ಗ್ರಾಮಸ್ಥರ ಗಮನ ಸೆಳೆದಿದ್ದಾರೆ.
ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಈ ಕುರಿತು ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಅಮೆರಿಕ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು.
ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್ ರದ್ದುಗೊಳಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿರುವ ಮೌಡ್ಯತೆಯನ್ನು ಹೋಗಲಾಡಿಸಲು ರಾಷ್ಟ್ರೀಯ ಸೇವಾ ಯೋಜನೆಯ, ಶಿಬಿರಗಳು ಅತ್ಯವಶ್ಯಕವಾಗಿವೆ ಎಂದು ವಿವಿ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ ತಿಮ್ಮಯ್ಯ ಅಭಿಪ್ರಾಯಪಟ್ಟರು.
ಸಂಬಂಧಿಕರೊಬ್ಬರ ಸಾವಿನ ಅಂತಿಮ ದರುಶನಕ್ಕೆ ತೆರಳುತ್ತಿದ್ದ ದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರಂತ ಘಟನೆ ಕೆ.ಆರ್.ನಗರ ನಾರಾಯಣಪುರದ ಕೆಗ್ಗೆರೆ ಬಳಿ ನಡೆದಿದೆ.
ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,
ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಪತ್ನಿ ಮತ್ತು ಮಕ್ಕಳೊಂದಿಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಭೇಟಿ ನೀಡಿದರು.
ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರದು ಎಷ್ಟು ದಾಖಲೆಯ ಬಜೆಟ್ ದಾಖಲೆಗೆ ಯಾರು ಅಡ್ಡಿ ಮಾಡುತ್ತಾರೆ ಕಾಂಗ್ರೆಸ್ ತೀರ್ಮಾನ ಮಾಡಬೇಕು. ಕುರ್ಚಿಯ ಕಾದಾಟಕ್ಕೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ ಎಂದರು.
ಕಂಬಳ ವಿವಾದ ವಿಚಾರವಾಗಿ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಜಿಲ್ಲಾಡಳಿತದೊಂದಿಗೆ ಚರ್ಚೆ ಮಾಡಿ ದಿನ ನಿಗದಿ ಮಾಡಿದ್ದಾರೆ. ಸ್ವಂತ ಹಣವನ್ನು ಖರ್ಚು ಮಾಡಿ ಕಂಬಳ ಮಾಡುತ್ತಿದ್ದಾರೆ. ವಿನಾಕಾರಣ ರಾಜಕಾರಣ ಬೆರಿಸಲಾಗಿದೆ. ಕಾಂಗ್ರೆಸ್ ಮತ್ತು ಮಾಜಿ ಸಚಿವರು ಈ ಕೆಲಸ ಮಾಡಿದ್ದಾರೆ. ಕಂಬಳದಲ್ಲಿ ಪಕ್ಷಭೇದ ಮರೆತು ಎಲ್ಲರೂ ಕೆಲಸ ಮಾಡುತ್ತಾರೆ ಎಂದರು.
ಹೊಡೆಯ ಕಡಲ ಕಿನಾರೆ ಸಮೀಪವಿರುವ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ (58) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.
ನಿಷೇಧಾಜ್ಞೆ ಮಧ್ಯೆಯೇ ಬಡಗುಬೆಟ್ಟು ಗ್ರಾಮದಲ್ಲಿ ಕಂಬಳ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಜಿಲ್ಲೆಯ ಶಾಸಕರು ಮತ್ತು ಹಲವರ ವಿರುದ್ಧ ಉಡುಪಿ ತಹಶೀಲ್ದಾರ್ ನೀಡಿದ ದೂರಿನಂತೆ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಎಂಬಿಎ ಮತ್ತು ಪಿಎಚ್ಡಿ ಪದವಿ ಪಡೆದವರನ್ನು ಗೌರವಿಸಲು 2023-25 ಎಂಬಿಎ ಬ್ಯಾಚ್ನ 15 ನೇ ಪದವಿ ಪ್ರದಾನ ಸಮಾರಂಭವನ್ನು ಫೆಬ್ರವರಿ 28, 2026 ರಂದು ನಡೆಸಲಾಯಿತು.