Showing 20 of 20442 articles • Page 163 of 1023
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಮೌಲ್ಯಾಧಾರಿತ ಶಿಕ್ಷಣಕ್ಕಾಗಿ ದಿ ಟೈಮ್ಸ್ ಆಫ್ ಇಂಡಿಯಾ ನೀಡುವ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ದೊರಕಿದೆ. ಮಂಗಳೂರಿನ ಅವತಾರ್ ಹೋಟೇಲ್ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ನೀಡಿ ಗೌರವಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ – ಅಮೆರಿಕದಿಂದ ದಾಳಿ ನಡೆದ ಬಳಿಕ ಮದ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಖತರ್, ಕುವೈತ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಮ್ಮ ವಾಯುಪ್ರದೇಶಗಳನ್ನು ತಕ್ಷಣದಿಂದಲೇ ಮುಚ್ಚಿವೆ. ಭದ್ರತಾ ಪರಿಸ್ಥಿತಿಯನ್ನು ಉಲ್ಲೇಖಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು Al Jazeera ವರದಿ ಮಾಡಿದೆ.
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭಾರೀ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಸೈದಾ ಕಡಲ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಂತಹ ಪರಿಸ್ಥಿತಿಯಿಂದ ದುಬೈನಲ್ಲಿರೋ ಜನರು ಭಯಭೀತರಾಗಿದ್ದು, ದುಬೈ ಏರ್ಪೋರ್ಟ್ ಮೇಲೆ ಕೂಡಾ ದಾಳಿಗಳು ನಡೆದಿದ್ದು, ದುಬೈಗೆ ತೆರಳುವ ವಿಮಾನಗಳ ಹಾರಾಟವನ್ನ ರದ್ದುಗೊಳಿಸಲಾಗಿದೆ.
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ವೈಮಾನಿಕ ದಾಳಿಯಲ್ಲಿ, ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿ ಮಾಡಿದೆ. ಈ ಮೂಲಕ ಖಮೇನಿ ಹತ್ಯೆ ದೃಢಪಟ್ಟಿದೆ.
ತಾಂತ್ರಿಕ ದೋಷದಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ (ಟಿಟಿ) ವಾಹನವೊಂದು ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯಡಿ, ಮುಂದಿನ 5 ವರ್ಷದಲ್ಲಿ ಮಂಗಳೂರನ್ನು ದೇಶದ ಪ್ರಮುಖ ಉದ್ದಿಮೆ ಕೇಂದ್ರವನ್ನಾಗಿ ಪರಿವರ್ತಿಸುವ ಗುರಿಯೊಂದಿಗೆ ಹಮ್ಮಿಕೊಂಡಿರುವ ‘ಬೊಲ್ಪು – ಅವಕಾಶ ನವೋದಯʼ ಯೋಜನೆಯು ಇದೀಗ ಮಹತ್ವದ ಘಟ್ಟ ತಲುಪಿದೆ.
ರಿಫಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ಇಪ್ತಾರ್ ಗೆಟ್ ಟುಗೆದರ್ ಕಾರ್ಯಕ್ರಮವು ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು.
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.
ಮಾರ್ಚ್ 3ಕ್ಕೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ ಆಗಿದೆ.
ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದಕ್ಷಿಣ ಕಾಶಿಯೆಂದೇ ಖ್ಯಾತಿಗಳಿಸಿರುವ ನಂಜುಂಡೇಶ್ವರಿಗೆ, ಒಂದೇ ತಿಂಗಳಿನಲ್ಲಿ 82 ಲಕ್ಷ ರೂ., ಕಾಣಿಕೆ ಬಂದಿದೆ.
ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಪತ್ನಿ ಸಂಗೀತಾ ಸೊರ್ನಲಿಂಗಂ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಟನ ಜೊತೆಗಿನ 27 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. 1999 ರ ಆಗಸ್ಟ್ನಲ್ಲಿ ವಿವಾಹವಾದ ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ವಿಜಯ್ ಅವರು ನಟಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಪತ್ನಿ ಆರೋಪಿಸಿದ್ದಾರೆ. ಈ ಸಂಬಂಧ ನಿಲ್ಲಿಸುತ್ತೇನೆ ಅಂತ ವಿಜಯ್ ಭರವಸೆ ಕೊಟ್ಟಿದ್ದರು. ಆದರೆ, ಅದು ಹಾಗೆಯೇ […]
ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಕಚ್ಚಾಟದ ಮಧ್ಯೆಯೇ ಉಡುಪಿ ಕಂಬಳದ ಶಂಕುಸ್ಥಾಪನೆ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆ ಇಂದು ನೆರವೇರಿತು.
ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು.
ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಮೈಸೂರು ಮಹಾರಾಜ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಸಂಜೆ ಕಾಲೇಜು ವತಿಯಿಂದ ಏಳು ದಿನಗಳ ಕಾಲ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಬೊಕ್ಕಹಳ್ಳಿ ಮತ್ತು ಬೊಕ್ಕಹಳ್ಳಿ ಹೊಸೂರು ಗ್ರಾಮಸ್ಥರಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿಯಿಂದ ನೀಡುವ ಹಸಿ ಕಸ ಮತ್ತು ಒಣ ಕಸ ಹಾಕುವ ಬಕೆಟ್ ಗಳನ್ನು ವಿತರಿಸಿದರು.
ಶಾಲಾ ಮಕ್ಕಳಂತೆ ತಮ್ಮ ಕುತ್ತಿಗೆಗೆ ಟೈ ಧರಿಸಿಕೊಂಡು ಶಾಸಕ ದರ್ಶನ್ ಧ್ರುವನಾರಾಯಣ್ ಖುಷಿ ಪಟ್ಟಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ತಯಾರಿಸಿ ಬಿಸಿಯೂಟ ನೀಡುವ ಅಕ್ಷರ ದಾಸೋಹ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ಥಕ ಕಾರ್ಯಕ್ರಮವಾಗಿದೆ ಎಂದು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಬಿ.ಸೋಮಶೇಖರ್ ಹೇಳಿದರು.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದಲ್ಲಿ 6.30 ಎಕರೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಮೀನಿನಲ್ಲಿ ಉಡುಪಿ ಕಂಬಳ ಆಯೋಜನೆ ಸಂಬಂಧ ಫೆ.28ರ ಬೆಳಗ್ಗೆ 10 ಗಂಟೆಗೆ ಶಂಕುಸ್ಥಾಪನೆ ಮಾಡಲು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಂದಾಗಿದ್ದರು.
ಮಂಗಳೂರು ಧರ್ಮಕ್ಷೇತ್ರದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಮೈದಾನದಲ್ಲಿ ನಡೆಯುತ್ತಿರುವ ‘ಬೃಹತ್ ಬೈಬಲ್ ಅಧಿವೇಶನ 2026’ರ ಎರಡನೇ ದಿನವಾದ ಶುಕ್ರವಾರ (ಫೆ. 27) ಸಹಸ್ರಾರು ವಿಶ್ವಾಸಿಗಳು ಭಕ್ತಿಪೂರ್ವಕವಾಗಿ ಪಾಲ್ಗೊಂಡರು.