Showing 20 of 21629 articles • Page 164 of 1082
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಪರಿಶೀಲನೆ ನಡೆಸಿದರು.
ಕಲ್ಲಂಗಡಿ ಹಣ್ಣು ಸೇವಿಸಿ ದಂಪತಿ ಹಾಗೂ ಅವರ ಇಬ್ಬರು ಪುತ್ರಿಯರು ಮೃತಪಟ್ಟಿರುವ ಘಟನೆ ದಕ್ಷಿಣ ಮುಂಬೈನಲ್ಲಿ ನಡೆದ ಕೌಟುಂಬಿಕ ಸಮಾರಂಭವೊಂದರಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ಆರಂಭವಾದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ವಿಶ್ವದ ಜನಪ್ರಿಯ ನಾಯಕ ಹಾಗೂ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಕರೆದು ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಸರಕಾರಿ ಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.
ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 50 ಗ್ರಾಂ ಎಂಡಿಎಮ್ಎ ಮಾದಕ ವಸ್ತು ಸಹಿತ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೆ.ಎಸ್ .ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಇರಿಸಿದ್ದ ಪರ್ಸ್ ಕಳವಾಗಿದ ಘಟನೆ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿ. ನರಸೀಪುರ ತಾಲ್ಲೂಕಿನ ಕೈಯಂಬಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ ಬಿ. ಆರ್.ಅಂಬೇಡ್ಕರ್ ರವರ 135ನೇ ಜನ್ಮದಿನಾಚರಣೆ ಅಂಗವಾಗಿ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಭೀಮೋತ್ಸವನ್ನು ಆಚರಿಸಲಾಯಿತು.
ಬಾಬಾ ಸಾಹೇಬ್ ಡಾ.ಬಿಆರ್ ಅಂಬೇಡ್ಕರ್ ರವರ ಕನಸಿನ ಸಮ ಸಮಾಜ ನಿರ್ಮಾಣವಾಗಲಿ, ದೇಶದಲ್ಲಿ ಜಾಗೃತ ಸಮಾಜ ನಿರ್ಮಾಣವಾಗಬೇಕು ಎಂದು ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಿ.ಬಸವರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಎಪ್ರಿಲ್ 29 ಮತ್ತು 30 ರಂದು ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್ (IEEE) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ “ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ” ಗಳ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಆಯೋಜಿಸಲಾಗಿದೆ.
: ವಿವಿಧ ಬೇಡಿಕೆಗೆ ಆಗ್ರಹಿಸಿ ತಾಲೂಕು ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಅಥಣಿ ತಾಲೂಕಿನ ಗಡಿಭಾಗದ ಬಳ್ಳಿಗೇರಿ ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗಳು ಸಾವನ್ನಪ್ಪಿದ ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ನಗರದ ಮಧ್ಯಭಾಗದಲ್ಲಿರುವ ಖಾದರ್ ವಾಣಿಜ್ಯ ಸಂಕೀರ್ಣದಲ್ಲಿ ಭಾನುವಾರ ಸಂಜೆ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ. ನಿನ್ನೆ ಸಂಜೆ ಪ್ಲಾಸ್ಟಿಕ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ, ಆರಕ್ಕೂ ಹೆಚ್ಚು ಅಂಗಡಿಗಳನ್ನು ಸಂಪೂರ್ಣ ಭಸ್ಮಗೊಳಿಸಿದೆ.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಕಳೆದ ಕೆಲ ವಾರದಿಂದ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಮಂಗಳೂರು ನಗರಕ್ಕೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯ ಕುಸಿತ ಕಾಣುತ್ತಿದೆ.
ಬಹುಬೇಡಿಕೆಯ ಬೆಂಗಳೂರು- ಮಂಗಳೂರು – ಮಡಗಾಂವ್ ವಂದೇ ಭಾರತ್ ರೈಲು ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ ಇದೆ.
ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಭಾನುವಾರ ರಾತ್ರಿ ವೇಳೆ ನಡೆದಿದೆ.
ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ.