Showing 20 of 21629 articles • Page 165 of 1082
ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯೋ ವಿಚಾರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಹಾವು ಕಡಿದು ಬಾಲಕ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲ್ಲೂಕು ಕಂಪಲಾಪುರದಲ್ಲಿ ನಡೆದಿದೆ.
ಸಾರ್ವಜನಿಕರ ಕುಂದುಕೊರತೆಗಳನ್ನು ಅಧಿಕಾರಿಗಳು ಆಲಿಸಿ, ಆದಷ್ಟು ಬೇಗ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡಿ, ವರುಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮವನ್ನು ಅಭಿವೃದ್ಧಿ ಪಡಿಸುವುದು ನನ್ನ ಗುರಿ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವಕೀಲರ ಸಂಘದಿಂದ ನ್ಯಾಯಾಲಯದ ಆವರಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಕಮಲಾಕ್ಷ ಡಿ ರವರು ಉದ್ಘಾಟಿಸಿದರು.
ಸ್ಯಾಂಟ್ರೋ ಕಾರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಏ.14 ರಂದು ಡಾ. ಬಿ. ಆರ್. ಅಂಬೇಡ್ಕರ್ ರವರ ಜಯಂತೋತ್ಸವ ದಿನವೇ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ಖಂಡನೀಯ. ಕೂಡಲೇ ಕಿಡಿಗೇಡಿಯನ್ನು ಬಂಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಜೆಪ್ಪುವಿನ ಸಂತ ಅಂತೋನಿ ಚಾರಿಟಿ ಸಂಸ್ಥೆಯ ವತಿಯಿಂದ, ಆಶ್ರಮದ ಅಭಿವೃದ್ಧಿಗೆ ಸಹಕರಿಸುತ್ತಿರುವ ದಾನಿಗಳು ಮತ್ತು ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸುವ ‘ದಾನಿಗಳ ದಿನಾಚರಣೆ’ಯನ್ನು 2026ರ ಏಪ್ರಿಲ್ 26ರಂದು ಆದಿವಾರ ‘ಸಂಭ್ರಮ’ ಸಭಾಂಗಣದಲ್ಲಿ ಆಚರಿಸಲಾಯಿತು.
ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ರಾಜ್ ಕಾಂಚನ್ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಭಾನುವಾರ ಕೊಡವೂರು ಶಂಕರನಾರಯಾಣ ದೇಗುಲದ ವಸಂತ ಮಂಟಪದ ನಡೆಯಿತು.
ಬೈಂದೂರು ಶಿರೂರು ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ರಿಸಲ್ಟ್ನಲ್ಲಿ ಚಮತ್ಕಾರಗೊಂಡಿದ್ದು, 35% ನಿಂದ ನೇರವಾಗಿ 94% ಫಲಿತಾಂಶಕ್ಕೆ ಭಾರೀ ಜಿಗಿತಗೊಂಡಿದೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉತ್ತರಾಧಿ ಮಠದ ಪಟ್ಟದ ದೇವರಾದ ಶ್ರೀ ಮೂಲ ರಾಮ ದೇವರ ಸಮೇತ ಪೀಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರನ್ನು ಶ್ರೀಕೃಷ್ಣಮಠಕ್ಕೆ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ಪರ್ಯಾಯ ಶೀರೂರು ಮಠದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.
ಉಡುಪಿಯ ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ಕೆ. ರಾಜಶೇಖರ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಬುಡ್ನಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಉಡುಪಿ ಜಿಲ್ಲೆಯ ಕಾಳಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೋಡು ಶ್ರೀ ಕುಮಾರಮಹಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿರುವ ವಾರಾಹಿ ಕಾಲುವೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವನ್ನು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮೇ 3ರಂದು ಸಂಜೆ 4ಗಂಟೆಗೆ ದೇವಸ್ಥಾನದ ಪ್ರಾಂಗಣದಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.
ಉಡುಪಿಯಲ್ಲಿ ನಾರಿ ಶಕ್ತಿ ಫೋರಂ ನವರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ನಾರಿ ಶಕ್ತಿ ವಂದನ ಅಧಿನಿಯಮವನ್ನು ಜಾರಿಯಾಗದಂತೆ ತಡೆಹಿಡಿದ ಕೇಂದ್ರದ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.
ವಾಮಂಜೂರು ನಿವಾಸಿ ನವೀನ್ ಎಂಬಾತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ನವೀನ್ಗೆ ಕುಟುಂಬ ಸಮಸ್ಯೆಗಳಿದ್ದು, ಪತ್ನಿಯಿಂದ ವಿಚ್ಛೇದನವಾಗಿದ್ದು, ಕಳೆದ ಕೆಲವು ತಿಂಗಳಿನಿಂದ ಆಕೆ ಜೋಕಟ್ಟೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ.
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.