Showing 20 of 21629 articles • Page 166 of 1082
ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ವಿಭಾಗಕ್ಕೆ ನೂತನ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ (PRO) ವಂದನೀಯ ರೂಪೇಶ್ ಅಶೋಕ್ ಮಾಡ್ತ ಅವರನ್ನು ನೇಮಕ ಮಾಡಲಾಗಿದೆ.
ಹೋಮಿಯೋಪತಿಯ ಸಂಸ್ಥಾಪಕ ಡಾ. ಸ್ಯಾಮ್ಯುಯೆಲ್ ಹಾನೆಮನ್ ಅವರ 271 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥವಾಗಿ, ವಿಶ್ವ ಹೋಮಿಯೋಪತಿ ದಿನ 2026 ಅನ್ನು 25.04.2026 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಚರಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಬೆಂಗಳೂರಿನ CHRIST (ಡೀಮ್ಡ್ ಟು ಬಿ ಯುನಿವರ್ಸಿಟಿ) ಜೊತೆ ಏಪ್ರಿಲ್ 25, 2026 ರಂದು ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಪ್ರತಿಷ್ಠಿತ ಸಲಹಾ ಒಪ್ಪಂದ (MoU)ಕ್ಕೆ ಸಹಿ ಹಾಕಿತು. ಶೈಕ್ಷಣಿಕ ಶ್ರೇಷ್ಠತೆ, ಉದ್ಯಮ ಜೋಡಣೆ ಮತ್ತು ಸಾಂಸ್ಥಿಕ ಅಭಿವೃದ್ಧಿಯನ್ನು ಬಲಪಡಿಸುವತ್ತ ಈ ಸಹಯೋಗವು ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ.
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ತನ್ನ ಮೊದಲ ಸೆಂಟ್ರಿಪ್ಯೂಗೇಶನ್ ಆಧಾರಿತ ಥೆರಪ್ಯೂಟಿಕ್ ಪ್ಲಾಸ್ಮಾ ಎಕ್ಸ್ಚೇಂಜ್ ಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಿ ಮಹತ್ವದ ವೈದ್ಯಕೀಯ ಮೈಲಿಗಲ್ಲು ದಾಖಲಿಸಿದೆ.
ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಡಾ. ಉದಿತಾ ತ್ಯಾಗಿ ಅವರು ಮುಸ್ಲಿಮರನ್ನು “ಜಿಹಾದಿ ಹಂದಿಗಳು” ಎಂದು ಉಲ್ಲೇಖಿಸಿ, “ಮುಸ್ಲಿಮರು ಹಂದಿಗಳಂತೆ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ”, ಎಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಗಾಳದಲ್ಲಿ ಗೆಲುವು ಸಾಧಿಸಿದ ನಂತರ ನಾನು ಎಲ್ಲಾ ರಾಜಕೀಯ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
ಮಂಗಳೂರಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (YIT) ತನ್ನ 18ನೇ ವಾರ್ಷಿಕೋತ್ಸವವನ್ನು ಸಾಂಸ್ಕೃತಿಕ ವೈಭವ ಮತ್ತು ಶೈಕ್ಷಣಿಕ ಹೆಮ್ಮೆಯೊಂದಿಗೆ ಅದ್ಧೂರಿಯಾಗಿ ಆಚರಿಸಿತು.
ತೀವ್ರ ಶಾಖದಿಂದ ಪ್ರಾಣಿಗಳನ್ನು ರಕ್ಷಿಸಲು ಅರಣ್ಯ ಇಲಾಖೆ ಜೈಪುರದ ನಹರ್ಗಢ ಜೈವಿಕ ಉದ್ಯಾನವನದಲ್ಲಿ ವಿಶೇಷ ಕ್ರಮಗಳನ್ನು ಜಾರಿಗೆ ತಂದಿದೆ.
ವಿಡಿಯೋ ಗೇಮ್ ಆಡಲು ಮೊಬೈಲ್ ಕೊಡದೇ ಇದ್ದಿದ್ದಕ್ಕೆ ಬಾಲಕ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಬಿದರಹಳ್ಳಿ ಸಮೀಪದ ರಾಂಪುರದ ಹೊರವಲಯದಲ್ಲಿ ಪ್ಲಾಸ್ಟಿಕ್ ಮರುಬಳಕೆ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿದೆ.
ನಗರದ ನಂಜನಗೂಡು ಮತ್ತು ಊಟಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಕಣ್ಮುಚ್ಚಿ ಕುಳಿತಿರುವ ನಂಜನಗೂಡು ನಗರಸಭಾ ಅಧಿಕಾರಿಗಳ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
35 ನವಿಲುಗಳು ಸಾವನ್ನಪ್ಪಿದ್ದು ಆತಂಕ ಸೃಷ್ಟಿಸಿದ ಘಟನೆ ತುಮಕೂರಿನ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನವಿಲುಗಳ ಸಾವುಗಳು ಸಂಭವಿಸಿದೆ.
ಆನ್ಲೈನ್ ನಲ್ಲಿ ಸಾಲ ಕೊಡಿಸುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿ ಮೋಸ ಮಾಡುತ್ತಿದ್ದ ತಂಡವನ್ನು ರಾಯಚೂರು ಸೈಬರ್ ಅಪರಾಧ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.
ಇಂದು ನಟಸಾರ್ವಭೌಮ ಡಾ. ರಾಜಕುಮಾರ್ ಜನ್ಮದಿನ. ಈ ದಿನವನ್ನು ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ನಟಸಾರ್ವಭೌಮನ ಜನ್ಮದಿನದ ಅಂಗವಾಗಿ ಅಶ್ವಥ ಎಲೆಯಲ್ಲಿ ಚಿತ್ರವನ್ನು ರಚಿಸಲಾಗಿದೆ.
ಬಾಳೆಹಣ್ಣಿನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದ್ದು, ಇವುಗಳನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಮಹತ್ವದ ಪಂದ್ಯದಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ.
ಜೋಕಾಲಿ ಆಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಲಕ್ಕಿನಕೊಪ್ಪದಲ್ಲಿ ನಡೆದಿದೆ.