Showing 20 of 21629 articles • Page 167 of 1082
ಗುಡುಗು ಸಹಿತ ಮಳೆಗೆ ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ನಡೆದಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಟಾಪರ್ ಆಗಿದ್ದಾರೆ. ಸರ್ಕಾರಿ ಶಾಲೆಯ ಕೀರ್ತಿಯನ್ನು ಮಾಧುರಿ ಆರ್ ಹೆಚ್ಚಿಸಿದ್ದಾರೆ.
SSLCಯಲ್ಲಿ ನಿರೀಕ್ಷೆಯಂತೆ ಅಂಕ ಬರದ ಹಿನ್ನೆಲೆ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೂ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ನಂಜನಗೂಡಿನ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಬಾಲಕಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿಗೆ ಶೇ.93.96 ರಂದು ಫಲಿತಾಂಶ ಬಂದಿದ್ದು, ಆದರ್ಶ ವಿದ್ಯಾಲಯದ ಡಿ.ಎಂ ಚೈತ್ರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ರಾಜ್ಯಕ್ಕೆ ಉಡುಪಿಯ ಶಂಕರನಾರಾಯಣದ ವಿದ್ಯಾರ್ಥಿ ಪ್ರೀತಂ ಪೂಜಾರಿ ಟಾಪರ್ ಆಗಿದ್ದಾರೆ. ಶಂಕರನಾರಾಯಣದ ಮದರ್ ತೆರಸ ಮೆಮೋರಿಯಲ್ ಶಾಲೆ ವಿದ್ಯಾರ್ಥಿಯಾಗಿದ್ದು, 620 ಅಂಕ ಬರಬಹುದು ಎಂದು ಭಾವಿಸಿದ್ದೆ. ಟಾಪರ್ ಆಗುತ್ತೇನೆ ಅನ್ನೋ ಭರವಸೆ ಇತ್ತು. ಆದರೆ 625 ಅಂಕ ನಿರೀಕ್ಷಿಸಿರಲಿಲ್ಲ ಎಂದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರಕಾರವು ಮಹಿಳಾ ಮಸೂದೆಯನ್ನು ನೆಪವಾಗಿಟ್ಟುಕೊಂಡು ಕ್ಷೇತ್ರ ಪುನರ್ ವಿಂಗಡಣೆ ಬಿಲ್ ಅನ್ನು ಜಾರಿಗೆ ತರಲು ಹೊರಟಿತ್ತು.
ಜಿಲ್ಲೆಯ ಬಾರ್ಕೂರಿನ ನೇಷನಲ್ ಐಟಿಐ ಸಂಸ್ಥೆ ತನ್ನ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ತಾಂತ್ರಿಕ ಕೌಶಲ್ಯಗಳ ಮೂಲಕ ಮತ್ತೊಮ್ಮೆ ಗಮನ ಸೆಳೆದಿದೆ. ದುಬಾರಿ ವಿದ್ಯುತ್ ವಾಹನಗಳ (EV) ಯುಗದಲ್ಲಿ, ಹಳೆಯ ಪೆಟ್ರೋಲ್ ವಾಹನಗಳನ್ನು ಅತೀ ಕಡಿಮೆ ವೆಚ್ಚದಲ್ಲಿ ವಿದ್ಯುತ್ ವಾಹನಗಳಾಗಿ ಪರಿವರ್ತಿಸಬಹುದು ಎಂಬುದನ್ನು ಈ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಗಳು ಸಾಬೀತುಪಡಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚಿಸಿದ ಆರೋಪ ಎದುರಿಸುತ್ತಿರುವ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. “ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಆಕೆಯನ್ನು ಮದುವೆಯಾಗುವುದೇ ಸೂಕ್ತ” ಎಂದು ನ್ಯಾಯಾಲಯ ಹೇಳಿದೆ.
ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ.
ಬಂದರು ಮಂಡಳಿ(NMPA) ಆಡಳಿತಕ್ಕೆ ಒಳಪಟ್ಟಿರುವ ಮತ್ತು ಕಳೆದ 40 ವರ್ಷಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ ಮಾಧ್ಯಮ ಶಾಲೆಯನ್ನು ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸುವ ಅಥವಾ ಮುಚ್ಚುವ ಪ್ರಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ. IMD ಯಿಂದ ಎಲ್ಲೋಅಲರ್ಟ್ ನೀಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಲು ಕೋರಿದೆ.
ರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಹಬಾಳ್ವೆ ಉಡುಪಿ, ಸಿಐಟಿಯು, ಭಾರತೀಯ ಕ್ರೈಸ್ತ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಹಿತ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಪ್ರಯುಕ್ತ “ದೇಶಾಭಿಮಾನಿ ಸಮಾವೇಶ” ವನ್ನು ಇದೇ ಎ.26ರಂದು ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು ತಿಳಿಸಿದರು.
ಬೇಸಿಗೆಯ ಬಿರು ಬಿಸಿಲಿಗೆ ಕಪಿಲೆಯ ಒಡಲು ಬರಿದಾಗಿ ನೀರಿನ ಪ್ರಮಾಣ ಕುಸಿದ ಹಿನ್ನಲೆ ಭೋರ್ಗರೆದು ಹರಿಯುತ್ತಿದ್ದ ಕಪಿಲೆ ಈಗ ತಣ್ಣಗಾಗಿದ್ದಾಳೆ.ಈ ಮಧ್ಯೆ ನಂಜನಗೂಡಿನ ಸುತ್ತಮುತ್ತಲ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ತ್ಯಾಜ್ಯ ಹಾಗೂ ಕೊಳಚೆ ನೀರು ಕಪಿಲೆಯ ಒಡಲು ಸೇರುತ್ತಿದೆ.
ಕಾಡಾನೆಗಳ ಹಿಂಡಿನಿಂದ ತಪ್ಪಿಸಿಕೊಳ್ಳಲು ಹೋದ ಕರ್ತವ್ಯ ನಿರತ ಅರಣ್ಯ ರಕ್ಷಕ ಕಬಿನಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಿಳೆಯರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಾರಿಗೊಳಿಸಲು ಮುಂದಾಗಿದ್ದ ‘ನಾರಿ ಶಕ್ತಿ ವಂದನ್ ಕಾಯ್ದೆಯ ತಿದ್ದುಪಡಿ ಮಸೂದೆ’ ಅನ್ನು ವಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಮೂಲಕ ಮಹಿಳಾ ವಿರೋಧಿ ಧೋರಣೆ ತೋರಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮವು ಇದೇ ಎ.26ರಂದು ಸಂಜೆ 5 ಗಂಟೆಗೆ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹೇಳಿದರು.
ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ.
ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್ ತಿಳಿಸಿದ್ದಾರೆ.