Showing 20 of 21629 articles • Page 169 of 1082
ಯೆನೆಪೋಯ ವೈದ್ಯಕೀಯ ಕಾಲೇಜು ಇದರ ಅಂಗ ಸಂಸ್ಥೆಯಾಗಿರುವ ಈ ಕಾಲೇಜಿನಲ್ಲಿ 22ನೇ ಪದವಿ ಪ್ರದಾನ ಸಮಾರಂಭವು ಏಪ್ರಿಲ್ 18, 2026ರಂದು ದೇರಳಕಟ್ಟೆಯ ಎಂಡ್ಯೂರನ್ಸ್ ಝೋನ್ನಲ್ಲಿ, Mangalore ನಲ್ಲಿ ವಿಜೃಂಭಣೆಯಿಂದ ನಡೆಯಿತು.
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಶರದ್ ಪವಾರ್ ಅವರು ಆರೋಗ್ಯ ತಪಾಸಣೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಖಾಸಗಿ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಪೈಲಟ್ಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ನಡೆದಿದೆ.
ಜರ್ಮನಿಯ ಮೋರ್ಸ್ ನಗರದ ಡ್ಯೂಸ್ಬರ್ಗ್ ಪ್ರದೇಶದ ಗುರುದ್ವಾರದೊಳಗೆ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿದ್ದು, ಸುಮಾರು 40 ವ್ಯಕ್ತಿಗಳು ತೀವ್ರ ವಾಗ್ವಾದದಲ್ಲಿ ಸಿಲುಕಿಕೊಂಡ ನಂತರ ಕನಿಷ್ಠ 11 ಜನರು ಗಾಯಗೊಂಡಿದ್ದಾರೆ.
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀ ಪರಶುರಾಮ ಕ್ಷೇತ್ರದ ಸುತ್ತ ಅಶುಚಿತ್ವ ತಾಂಡವವಾಡುತ್ತಿದ್ದು ಸ್ವಚ್ಛಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ವಿಶ್ವಮಾನ್ಯ ಯತಿಕುಲಚಕ್ರವರ್ತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯೊಂದಿಗೆ ಗೀತಾ ಮಂದಿರದ ನೃಸಿಂಹ ಸಭಾ ಭವನದಲ್ಲಿ ಶ್ರೀ ಪುತ್ತಿಗೆ ಸುಗುಣ ಶಿಬಿರವನ್ನು ಉದ್ಘಾಟಿಸಲಾಯಿತು.
ಯಾನ್ ತುಳುವಪ್ಪೆನ ಮಗೆ, ಎನ್ನ ಬಾಲ್ಯ ಜೀವನ, ಬಾಲ್ಯ ಶಿಕ್ಷಣ ಈ ತುಳುನಾಡ್ ಮನ್ಸ್ ಡೇ. ಯಾನ್ ತುಳುನಾಡುದಾಯೆ.. ಯಾನ್ ಪುಟ್ಟುದಿನಿ ಎಂದು ಉಡುಪಿ ಧರ್ಮಪ್ರಾಂತದ ನೂತನ ಧರ್ಮಾಧ್ಯಕ್ಷ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು.
ಅತೀ ವೇಗದ ಚಾಲನೆಯಿಂದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್ನ ಅಜಗಾಂವ ಬಳಿ ನಡೆದಿದೆ.
ಜಿಲ್ಲೆಯಾದ್ಯಂತ ಏಪ್ರಿಲ್ 21 ರಿಂದ 23ರವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಕರ್ನಾಟಕದ ಆರೋಗ್ಯ ಸೇವೆಯಲ್ಲಿ ಮಹತ್ವದ ಮೈಲುಗಲ್ಲಾಗಿ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ (YMCH), ಪ್ರದೇಶದ ಮೊದಲ ರೋಬೋಟಿಕ್ ಸಹಾಯಿತ ಸಣ್ಣ ರಂಧ್ರದ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು (ROBOTIC ASSISTED MICS CABG) ಯಶಸ್ವಿಯಾಗಿ ನೆರವೇರಿಸಿದೆ. ಈ ಮುಂಚೂಣಿ ಕ್ರಮವು ಆಧುನಿಕ ಹೃದಯ ಚಿಕಿತ್ಸೆಯನ್ನು ಪ್ರದೇಶದ ರೋಗಿಗಳಿಗೆ ಇನ್ನಷ್ಟು ಸಮೀಪಕ್ಕೆ ತರುವ ಮಹತ್ವದ ಹೆಜ್ಜೆಯಾಗಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 500ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ರ್ಯಾಂಕ್ (ವಿಜ್ಞಾನ) ಪಡೆದ ಕುಮಾರಿ ಪ್ರಿನ್ಸಿಲ್ಲಾ ಕಾರ್ಡೋಜಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಮಂಡಳಿಯಿಂದ ಗೌರವ ಸನ್ಮಾನ ನೀಡಲಾಯಿತು. ಈ ಸನ್ಮಾನ ಕಾರ್ಯಕ್ರಮ ಮಂಗಳೂರು ಜಿಲ್ಲಾ ಪಂಚಾಯತ್ ತ್ರೈಮಾಸಿಕ ಸಭೆಯಲ್ಲಿ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಸಮ್ಮುಖದಲ್ಲಿ ನಡೆಯಿತು.
ಡಾ. ಬಿ.ಆರ್ ಅಂಬೇಡ್ಕರ್ ರವರ ಕನಸುಗಳನ್ನು ನನಸು ಮಾಡಲು ಯುವ ಸಮೂಹ ಮುಂದಾಗಬೇಕು. ಅಂಬೇಡ್ಕರ್ ರವರ ಜಯಂತಿಗಳನ್ನು ಆಚರಣೆ ಮಾಡುವುದಲ್ಲ ಅವರನ್ನು ಅನುಸರಿಸುವುದು ಮುಖ್ಯ ಎಂದು ಪತ್ರಕರ್ತರಾದ ಸಿ.ಎಂ ಸುಗಂಧರಾಜು ಕರೆ ನೀಡಿದರು.
ನಂಜನಗೂಡು: ಪ್ರಸ್ತುತ ದಿನಗಳಲ್ಲಿ ಬಸವಣ್ಣರವರ ವಿಚಾರಧಾರೆಗಳು ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು. ನಂಜನಗೂಡು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಬಸವಣ್ಣನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಯಾರು ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡವರಿದ್ದಾರೆ ಅವರಿಗೆ ಸಹಾಯ ಮಾಡಬೇಕು. ಸಮಾಜದಲ್ಲಿ ಯಾವುದೇ ಅಪೇಕ್ಷೆ ಇಲ್ಲದೆ ತಮ್ಮ ಕೆಲಸ ಕಾರ್ಯಗಳನ್ನು ಕರ್ತವ್ಯಗಳನ್ನು ಮಾಡಬೇಕು. ಬಸವಣ್ಣನವರ ತತ್ವಗಳಾದ ಕಾಯಕವೇ ಕೈಲಾಸ ಮತ್ತು […]
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ನಾರಿಶಕ್ತಿ ವಂದನ್ ಅಧಿನಿಯಮ’ವು ಕೇವಲ ರಾಜಕೀಯ ಮೀಸಲಾತಿಯಲ್ಲ, ದೇಶದ ಮಾತೃಶಕ್ತಿಗೆ ಸಲ್ಲಿಸಿದ ಗೌರವವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಸಿಂಗಲ್ ಆಗಿ ಜಾರಿಗೆ ತನ್ನಿ, ನಿಮಗೇನ್ರಿ ತೊಂದ್ರೆ? ಬಿಜೆಪಿಗೆ ನಿಜವಾಗಿಯೂ ಮಹಿಳೆಯರ ಮೇಲೆ ಕಾಳಜಿ ಇದ್ದರೆ, ಕ್ಷೇತ್ರ ವಿಂಗಡಣೆಯ ನೆಪ ಬಿಟ್ಟು ತಕ್ಷಣವೇ ‘ಸಿಂಗಲ್ ಬಿಲ್ ಮೂಲಕ ಮೀಸಲಾತಿಯನ್ನು ಜಾರಿಗೆ ತರಲಿ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಸವಾಲು ಹಾಕಿದ್ದಾರೆ.
ಶಾಸಕ ವಿನಯ ಕುಲಕರ್ಣಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ, ಅಧಿಕೃತ ಸೂಚನೆ ಬಂದ ಬಳಿ ಅವರ ವಿಧಾನಸಭಾ ಅಧಿಕಾರದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು.
ವಾಡಿ ಪಟ್ಟಣದಲ್ಲಿ ಗುಂಡು ಹಾರಿಸಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ್ ಬಳಿ ನಡೆದಿದೆ.