Showing 20 of 21629 articles • Page 170 of 1082
ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ನಾಲೆಯ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ಶನಿವಾರ ನಡೆದಿದೆ. ಅಂಬ್ಲಮೊಗರು ಜರಿ ಹೌಸ್ ನಿವಾಸಿ, ರಿಕ್ಷಾ ಚಾಲಕ ಶಿವರಾಮ್ ಅವರ ಪುತ್ರ ಸೃಜನ್ (17) ಮೃತಪಟ್ಟ ದುರ್ದೈವಿ.
ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಬಿಜೆಪಿಗರು, ಈ ದೇಶಕ್ಕೆ ಮೊದಲ ಮಹಿಳಾ ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿಯನ್ನು ನೀಡಿದ ಪಕ್ಷ ಯಾವುದು ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ನಾರಿ ಶಕ್ತಿ ವಂದನ ಅಧಿನಿಯಮ ಮಸೂದೆಯು ವಿಫಲಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗರು ರಾಜ್ಯದಾದ್ಯಂತ ಜಾಗೃತಿ ಮೂಡಿಸುತ್ತೇವೆ ಎಂದು ಹೇಳುತ್ತಾರೆ. 2011ರ ಜನಗಣತಿಯನ್ನೇ ಆಧರಿಸಿ ಮೀಸಲಾತಿಯನ್ನು ತರುವುದಾದರೆ 2023 ರವರೆಗೆ ಕಾಯುವಂತ ಅವಶ್ಯಕತೆ ಏನಿತ್ತು? ಎಂದು ಕೆಪಿಸಿಸಿ ವಕ್ತಾರೆ ಯು.ಟಿ.ಫರ್ಝಾನ ಪ್ರಶ್ನಿಸಿದ್ದಾರೆ.
ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22, 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಅಸೋಸಿಯೇಷನ್ನಿಂದ ಅಧಿಕೃತ ಮಾನ್ಯತೆ ಪಡೆದ ನೂತನ ಉಡುಪಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ ಇಂದು ಉದ್ಘಾಟನೆಗೊಂಡಿತು. ಮಣಿಪಾಲದ ಮಾಧವ ಕೃಪಾ ಶಾಲೆಯ ಆವರಣದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಸೋಸಿಯೇಷನ್ ಗೆ ಚಾಲನೆ ನೀಡಿ ಲೋಗೋ ಬಿಡುಗಡೆಗೊಳಿಸಿದರು.
ಉತ್ತರ ಜಪಾನ್ನಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಜಪಾನ್ನ ಹವಾಮಾನ ಸಂಸ್ಥೆ ತಿಳಿಸಿದೆ. ಮೂರು ಮೀಟರ್ (10 ಅಡಿ) ಎತ್ತರದ ಅಲೆಗಳ ಸುನಾಮಿ ಎಚ್ಚರಿಕೆ ನೀಡಿದೆ.
ವಾಹನ ಪಾರ್ಕಿಂಗ್ ವಿಚಾರದಲ್ಲಿ ಉಂಟಾದ ಜಗಳದಲ್ಲಿ 34 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಸೋಮವಾರ ಮುಂಜಾನೆ ಪೂರ್ವ ದಿಲ್ಲಿಯ ಪ್ರೀತ್ ವಿಹಾರ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಟ್ಕಾಯಿನ್ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಕಾರಣಕ್ಕೆ ಕಾಂಗ್ರೆಸ್ನ ಯುವ ಮುಖಂಡ ಮಹಮದ್ ನಲಪಾಡ್ ಹ್ಯಾರಿಸ್ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೇರಳಂ ರಾಜ್ಯದ ಕಾಸರಗೋಡು ಜಿಲ್ಲೆ ನಗರ ಮೂಲದ 46 ವಯಸ್ಸಿನ ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತು ಹೃದ್ರೋಗ ಸಂಬಂಧಿ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳಾ ಹೃದ್ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪರಿಣಿತ ವೈದ್ಯರ ತಂಡವು ವಿನೂತನ ಶೈಲಿಯ ಅಪಾಯಕಾರಿ, ಜೀವರಕ್ಷಕಾ ಹೃದ್ರೋಗ ಚಿಕಿತ್ಸೆಯನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸಿ, ಯಶಸ್ವಿಯಾಗಿ ನಿರ್ವಹಿಸಿ, ರೋಗಿಗೆ ಜೀವದಾನ ನೀಡಿ ಆರೋಗ್ಯ ಕ್ಷೇತ್ರದಲ್ಲಿ ಒಂದು ಸಾಧನೆ ಮಾಡಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.
ಅಮೆರಿಕದ ಲೂಸಿಯಾನಾದ ಶ್ರೆವ್ ಪೋರ್ಟ್ ನಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರೂ 14 ವರ್ಷಕ್ಕಿಂತ ಕೆಳ ವಯಸ್ಸಿನವರು ಎಂದು ತಿಳಿದುಬಂದಿದೆ.
ಬಿಸಿಲಿನ ತೀವ್ರತೆಗೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ರಸ್ತೆ ಬಳಿ ನಡೆದಿದೆ.
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಭಾರತೀಯ ವಾಣಿಜ್ಯ ಹಡಗುಗಳ ಮೇಲೆ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪಡೆಗಳು ಗುಂಡಿನ ದಾಳಿ ನಡೆಸಿವೆ.
ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವು ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ನಡೆಯಲಿದೆ.
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.
ಮಧ್ಯಪ್ರಾಚ್ಯ ದೇಶಗಳ ಯುದ್ದದ ಎಫೆಕ್ಟ್ ಈರುಳ್ಳಿ ಬೆಳೆಗಾರರಿಗೂ ತಟ್ಟಿದ್ದು, ಟೊಮ್ಯಾಟೊ ಬೆಲೆ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದರೆ, ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ.
ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ನಡೆದಿದೆ.
ಬೈಕ್ ನಲ್ಲಿ ಚಲಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಮೂವರಿಗೆ ಗಂಭೀರ ಗಾಯಗೊಂಡು, ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ.