Showing 20 of 21629 articles • Page 172 of 1082
ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐದಾರು ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ನಗರದ ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಸೇರಿದ ಬಸ್ ಒಂದು ಭೀಕರ ಅಗ್ನಿ ಅವಘಡಕ್ಕೆ ಆಹುತಿಯಾಗಿದೆ.
ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಮಾಹೆ ವಿವಿ ಸಹ ಕುಲಾಧಿಪತಿ ಡಾ. ಎಚ್. ಎಸ್.ಬಲ್ಲಾಳ್ ಹೇಳಿದರು.
ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ ನಡೆದಿದೆ.
ವಾಲ್ಪಾರೈನಲ್ಲಿ ಪ್ರವಾಸಿ ಟಿಟಿ ವ್ಯಾನ್ ಕಂದಕಕ್ಕೆ ಉರುಳಿ ಬಿದ್ದು ಒಂಬತ್ತು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನಗರದ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ತೀವ್ರ ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಪ್ರಮುಖ ಮಾಧ್ಯಮ ವೃತ್ತಿಪರ ಮತ್ತು ಪ್ರಾದೇಶಿಕ ಡಿಜಿಟಲ್ ಪತ್ರಿಕೋದ್ಯಮದ ಬೆಳವಣಿಗೆಯ ಹಿಂದಿನ ಪ್ರಮುಖ ವ್ಯಕ್ತಿ ಬ್ರಯನ್ ಫೆರ್ನಾಂಡಿಸ್ ಅವರು ಶನಿವಾರ ಸಂಜೆ 8:30 ರ ಸುಮಾರಿಗೆ ಮಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.
ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಗಳಿಗೆ (ಸೆಸ್ಕ್-ಮೈಸೂರು) 2024-25ನೇ ಸಾಲಿನಲ್ಲಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು 2026-27ನೇ ಸಾಲಿನಲ್ಲಿ ಬೆಸ್ಕಾಂ ಗ್ರಾಹಕರಿಂದ ಪ್ರತಿ ಯುನಿಟ್ಗೆ 56 ಪೈಸೆ ಹಾಗೂ ಸೆಸ್ಕ್ ಗ್ರಾಹಕರಿಂದ ಪ್ರತಿ ಯುನಿಟ್ಗೆ 15 ಪೈಸೆಯಂತೆ ಹೆಚ್ಚುವರಿಯಾಗಿ ಸಂಗ್ರಹಿಸಲು ಕೆಇಆರ್ಸಿ ಆದೇಶ ಮಾಡಿದೆ.
ಲೋಕ ಕಲ್ಯಾಣಾರ್ಥವಾಗಿ ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾರುದ್ರಯಾಗವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಸೇವಾಕರ್ತರಾಗಿರುವ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಶುಕ್ರವಾರ, ಎಪ್ರಿಲ್ 17, 2026 ರಂದು ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಆಯ್ಕೆಯಾಗಿದ್ದಾರೆ.
ಸ್ಥಳೀಯಾಡಳಿತ ಚುನಾವಣೆ ನಡೆಸುವ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ಸೋಲು ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಬೇಸಿಗೆಯಲ್ಲಿ ದೇಹವನ್ನು ತಂಪಾಗಿ ಮತ್ತು ತೇವಾಂಶದಿಂದ ಇಟ್ಟುಕೊಳ್ಳುವುದು ಮುಖ್ಯ. ಇದಕ್ಕಾಗಿ ನೀರಿನಂಶವಿರುವ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಣ್ಣುಗಳಲ್ಲಿ ಕಲ್ಲಂಗಡಿ ಮೊದಲ ಸ್ಥಾನದಲ್ಲಿದೆ. ಕಲ್ಲಂಗಡಿಯಲ್ಲಿ ಶೇ. 90 ರಿಂದ 92 ರಷ್ಟು ನೀರು ಇರುತ್ತದೆ.
ಕಾಡುಕೋಣದ ದಾಳಿಗೆ ಯುವಕ ಬಲಿಯಾದ ಘಟನೆ ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್ನಲ್ಲಿ ನಡೆದಿದೆ.
ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿರುವ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ಎ.18ರ ಶನಿವಾರ ನಡೆದಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ.
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.