Showing 20 of 21629 articles • Page 177 of 1082
ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ನಲ್ಲಿ ಎಫ್ಎಂಸಿಐ ಪದವಿ ಪ್ರಧಾನ 2026 ಕಾರ್ಯಕ್ರಮ ಏಪ್ರಿಲ್ 16ರಿಂದ 18ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ ನಿರ್ದೇಶಕರಾದ ಫಾ. ಫೌಸ್ಟಿನ್ ಲೂಕಾಸ್ ಲೋಬೋ ತಿಳಿಸಿದ್ದಾರೆ.
ಕಳೆದ ರಾತ್ರಿ ಅರಣ್ಯದಂಚಿನ ತೋಟದಲ್ಲಿರುವ ಪಾಳು ಬಾವಿಗೆ ಕಾಡಾನೆ ಬಿದ್ದ ಘಟನೆ ಸುಳ್ಯ ತಾಲೂಕಿನ ಪೆರಾಜೆ ಸಮೀಪ ಕಲ್ಬರ್ಪೆದಲ್ಲಿ ನಡೆದಿದೆ.
ಪ್ರದೀಪ್ ಕುಮಾರ್ (48) ಎಂಬವರು ಎಪ್ರಿಲ್ 8 ರಂದು ಮನೆಯಿಂದ ಹೋದವರು ಈವರೆಗೆ ಮನೆಗೆ ಬಾರದೆ ಇದ್ದು ಕಾಣೆಯಾಗಿರುವ ಬಗ್ಗೆ ಪ್ರಕರಣ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇತಿಹಾಸ ಪ್ರಸಿದ್ಧ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ‘ಅಷ್ಟಭಂದ ಬ್ರಹ್ಮಕಲಶೋತ್ಸವ ವೈಭವ-2026’ ಎ.16ರಿಂದ ಎ.20ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ.ಮಾಧವ ಪೂಜಾರಿ ತಿಳಿಸಿದ್ದಾರೆ.
ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿನ ಮುಸ್ಕಾನ್ (24) ಎಂಬವರು ಎಪ್ರಿಲ್ 8 ರಂದು ಕಾಣೆಯಾಗಿದ್ದು, ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಯಾದಗಿರಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಾಜ್ಞೆ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ.
ಟ್ರಕ್ ಯಾತ್ರಿಕರ ಮೇಲೆ ಹರಿದ ಪರಿಣಾಮ 6 ಯಾತ್ರಿಕರು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಇತ್ತೀಚೆಗೆ ಯುವಕನೊಬ್ಬ “ಝಾಂಬಿ ಡ್ರಗ್ಸ್” ಸೇವಿಸಿದಂತೆ ವರ್ತಿಸಿರುವ ವಿಡಿಯೋ ವೈರಲ್ ಆಗಿತ್ತು.ಇದು ಸಾಕಷ್ಟು ಆತಂಕಕ್ಕೂ ಕಾರಣ ಆಗಿತ್ತು. ಬಳಿಕ ಸ್ಪಷ್ಟನೆ ನೀಡಿದ್ದ ಗೃಹ ಸಚಿವರು ,ಝಾಂಬಿ ಡ್ರಗ್ಸ್ ಬಗ್ಗೆ ವದಂತಿ ಹಬ್ಬುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು , ಮಾತ್ರವಲ್ಲ ಓರ್ವ ಯುವಕನನ್ನು ಈ ಸಂಬಂಧ ಬಂಧಿಸಲಾಗಿತ್ತು ಕೂಡ.
ಇಸ್ರೇಲ್ ಇರಾನ್ ಹಾಗೂ ಅಮೆರಿಕ ಯುದ್ಧದ ಪರಿಣಾಮ ನಂಜನಗೂಡಿನಲ್ಲಿ ಸಿಲಿಂಡರ್ ಗಾಗಿ ಗ್ರಾಹಕರು ದಿನನಿತ್ಯ ಪರದಾಡುತ್ತಿದ್ದಾರೆ. ನಗರದ ಶ್ರೀ ನಂಜುಂಡೇಶ್ವರ ಇಂಡಿಯನ್ ಗ್ಯಾಸ್ ಏಜೆನ್ಸಿ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿನ್ನ ಮತ್ತು ಬೆಳ್ಳಿ ದರಗಳು ಈ ವಾರದ ಆರಂಭದಲ್ಲಿ ಮತ್ತೆ ಇಳಿಕೆಯಾಗಿವೆ. ಅಮೆರಿಕ ಮತ್ತು ಇರಾನ್ ನಡುವೆ ಇಸ್ಲಾಮಾಬಾದ್ನಲ್ಲಿ ನಡೆದ ಶಾಂತಿ ಮಾತುಕತೆಗಳು ವಿಫಲಗೊಂಡ ಪರಿಣಾಮ, ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಾಗಿದ್ದು, ಬುಲಿಯನ್ ಮಾರುಕಟ್ಟೆಯಲ್ಲಿ ಚಂಚಲತೆ ಉಂಟಾಗಿದೆ. ಇದರಿಂದಾಗಿ ಇಂದು ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಗಳಲ್ಲೂ ಇಳಿಕೆ ಕಂಡುಬಂದಿದೆ.
ತಮಿಳುನಾಡು ಚುನಾವಣಾ ಪ್ರಚಾರದಲ್ಲಿ ತೊಡಗಿರುವ ನಟ-ರಾಜಕಾರಣಿ ವಿಜಯ್ ಅವರಿಗೆ ಸಂಬಂಧಿಸಿದ ವಿಚಿತ್ರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನಾರು, ಕಬ್ಬಿಣ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಇದು ಫೈಬರ್, ರಂಜಕ ಮತ್ತು ವಿಟಮಿನ್ ಎ, ಬಿ ಮತ್ತು ಇ ಸೇರಿದಂತೆ ಹಲವಾರು ಸೂಕ್ಷ್ಮ ಪೋಷಕಾಂಶಗಳನ್ನು ಸಹ ಒಳಗೊಂಡಿದೆ.
ಕೋಳಿ ಅಂಕವು ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ನಡೆಯುತ್ತಿದ್ದ ವೇಳೆ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ.
ಶ್ರೀರಾಮ ಟಂಕ ಜಪ ಅಭಿಯಾನ ಎ.14ರಂದು ಶ್ರೀಕೃಷ್ಣಮಠ ಸಮೀಪದ ಗೀತಾಮಂದಿರದಲ್ಲಿ ನಡೆಯಲಿದೆ ಎಂದು ಅಭಿಯಾನ ಪ್ರವರ್ತಕ ಮಂಜುನಾಥ ಕುಡ್ವ ಮಂಗಳೂರು ತಿಳಿಸಿದ್ದಾರೆ.
ಸ್ಯಾಟ್ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರನ್ನು ಪಾರ್ಕಿಂಗ್ ಸಿಬ್ಬಂದಿ ರಿವರ್ಸ್ ತೆಗೆಯುವಾಗ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈಶಾನ್ಯ ನೈಜೀರಿಯಾದಲ್ಲಿ ಸೇನೆಯು ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರತದ ಆಧ್ಯಾತ್ಮಿಕ ಚೇತನ ಸ್ವಾಮಿ ವಿವೇಕಾನಂದರ ಅಪ್ರತಿಮ ಗೌರವಾರ್ಥವಾಗಿ ಅಮೇರಿಕಾದ ಸೀಟಲ್ ನಗರದ ಹೃದಯಭಾಗದಲ್ಲಿರುವ ವೆಸ್ಟ್ಲೇಕ್ ಸ್ಕ್ವೇರ್ನಲ್ಲಿ ಅವರ ಮೊದಲ ಪೂರ್ಣಕಾಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.
ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ ಸೆಕ್ಸ್ ವರ್ಕ್, ರೀಲ್ಸ್ ಗಳಲ್ಲಿ ಬಳಸಿ, ಲಕ್ಷಾಂತರ ಹಣ ಗಳಿಸಿ ಬಲವಂತವಾಗಿ ಲಿಂಗ ಬದಲಾವಣೆಗೆ ನಡೆಸಿದ ಹುನ್ನಾರಕ್ಕೆ ಬೇಸತ್ತು ಖದೀಮರ ಕಪಿಮುಷ್ಠಿಯಿಂದ ಹೊರಬಂದ ಯುವಕನಿಗೆ ವಾಪಸ್ ದಂಧೆಗೆ ಬರುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಅಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆದ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಸುಮಾರು 340 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶಿಲ್ಪ ಹೇಳಿದರು.