Showing 20 of 21629 articles • Page 179 of 1082
ಬಸ್ಗೆ ಕಂಟೇನರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪೊಲೀಸರು ಸೇರಿದಂತೆ 32 ಮಂದಿ ಗಾಯಗೊಂಡಿರುವ ಘಟನೆ ಕೊಯ್ಲಾಂಡಿಯಲ್ಲಿ ಇಂದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಂದೇ ಭಾರತ್ ರೈಲುಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿರುವುದು ಹೆಚ್ಚಾಗುತ್ತಿದೆ. ಕೇರಳದ ಎರ್ನಾಕುಲಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದು, ರೈಲಿನ ಗಾಜುಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ತನ್ನ ದಿನಪೂರ್ತಿ ನಡೆದ ಸಾಂಸ್ಕೃತಿಕ ಉತ್ಸವ “ಮಿಲಾನ್ 2026” ಅನ್ನು ಏಪ್ರಿಲ್ 10, 2026ರಂದು ಭವ್ಯ ಸಂಜೆ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಮಾಪ್ತಿಗೊಳಿಸಿತು. ಈ ಕಾರ್ಯಕ್ರಮವು ಸೃಜನಶೀಲತೆ ಮತ್ತು ವೈವಿಧ್ಯದ ಸಂಭ್ರಮವನ್ನು ಪ್ರತಿಬಿಂಬಿಸಿತು.
ಪ್ರೀತಿ ಅನ್ನೋದು ಬದುಕಿಗೆ ದಾರಿಯಾಗಬೇಕಿತ್ತು, ಆದರೆ ಇಲ್ಲೊಬ್ಬ ಯುವಕನ ಪಾಲಿಗೆ ಅದೇ ಪ್ರೀತಿ ಮರಣಶಾಸನವಾಗಿದೆ. ಪ್ರೀತಿಸಿದ ಹುಡುಗಿಯ ಮಾನಸಿಕ ಕಿರುಕುಳ ತಾಳಲಾರದೆ 22 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಸಮೀರ್ ಎಂಬಾತನಿಂದ ಹಿಂದೂ ಯುವತಿಗೆ ಲವ್ ಜಿಹಾದ್ ಬಲೆಗೆ ಬಿದಿದ್ದು, ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ಎದುರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಮಾಯಿಸಿದರು.
ಮನೆಗೇ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾತ್ರೋರಾತ್ರಿ ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯಾದ ಯುವಕ ಎಂಬ ಮಾಹಿತಿ ತಿಳಿದು ಬಂದಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಲರ್ನಿಂಗ್ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, ಸಂಸ್ಥೆಯ ಶೇ.100ರಷ್ಟು ಫಲಿತಾಂಶ ಪಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಂತೆ ರಿಕ್ಷಾವೊಂದು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ನಡೆದಿದೆ.
ಐಪಿಎಲ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯುವ ನಿರೂಪಕನೋರ್ವ ಮದರಂಗಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕೇಶಿ ಘಾಟ್ನಲ್ಲಿ ಯಮುನಾ ನದಿಯಲ್ಲಿ 30ಕ್ಕೂ ಹೆಚ್ಚು ಪಂಜಾಬ್ ಮೂಲದ ಯಾತ್ರಾರ್ಥಿಗಳಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 22 ಪ್ರಯಾಣಿಕರನ್ನು ರಕ್ಷಿಸಲಾಗಿದೆ.
ಇಲ್ಲಿನ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಟಾಸ್ ವಿಳಂಬವಾಗಿದೆ.
ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಇಂದು ಮಳೆಯಾಗಿದೆ.
ರಾಜ್ಯ ಮಟ್ಟದಲ್ಲಿ ಅಗ್ರ ಸ್ಥಾನ: 600ರಲ್ಲಿ 599 ಅಂಕಗಳನ್ನು ಪ್ರಿನ್ಸಿಲಾ ಕಾರ್ದೋಜಾ ಅವರು ಪಡೆದು ಕೊಂಡಿದ್ಧಾರೆ. ರಾಜ್ಯ ಮಟ್ಟದಲ್ಲಿ 600 ರಲ್ಲಿ 598 ಅಂಕ ಗಳನ್ನು ಪಡೆದು ಮೀನಾಕ್ಷಿ ಉನ್ನಿತನ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ಧಾರೆ .
ವಿಶ್ವ ಆರೋಗ್ಯ ದಿನ-2026ರ ಅಂಗವಾಗಿ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು, ಈ ವರ್ಷದ ವಿಷಯವಾದ ಆರೋಗ್ಯಕ್ಕಾಗಿ ಒಟ್ಟಾಗಿ-ವಿಜ್ಞಾನವನ್ನು ಬೆಂಬಲಿಸೋಣ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿತು.
ಸಾರ್ವಜನಿಕರ ಬಹುದಿನಗಳ ಬೇಡಿಕೆ ಭಾಗಶಃ ಈಡೇರಿದೆ. ಜಿಲ್ಲೆಯ ಕಟಪಾಡಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಡರ್ ಪಾಸ್ ಕಾಮಗಾರಿ ವೇಗ ಪಡೆದುಕೊಂಡಿದೆ. ಈ ಭಾಗದಲ್ಲಿ ಅಂಡರ್ ಪಾಸ್ ಬೇಕು ಎಂದು ಅನೇಕ ವರ್ಷಗಳಿಂದ ಹೋರಾಟ ನಡೆದಿತ್ತು.
ಕುಂದಾಪುರ ಕೋಡಿ ಬೀಚ್ನಲ್ಲಿ ಡ್ರೋನ್ ಕ್ಯಾಮರಾ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವೀಡಿಯೊ ಚಿತ್ರೀಕರಣಕ್ಕಾಗಿ ಡ್ರೋನ್ ಹಾರಿಸುತ್ತಿದ್ದ ವೇಳೆ ಅಚಾನಕ್ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದು, ತಕ್ಷಣವೇ ಡ್ರೋನ್ ಮಾಲೀಕರು ಮುಳುಗು ತಜ್ಞ ದಿನೇಶ್ ಖಾರ್ವಿಯನ್ನು ಸಂಪರ್ಕಿಸಿದ್ದಾರೆ