Showing 20 of 21629 articles • Page 180 of 1082
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.89.58 ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿ ಚಂದು ಶೇ.91 ರಷ್ಟು ಫಲಿತಾಂಶ ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಸರಳಾ ಹೇಳಿದರು.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ಹೇಳಿದರು.
ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯ ಸುನೀಲ್ ಕೋಟ್ಯಾನ್ ಪುರಸಭೆ ಕಛೇರಿಯೊಳಗೆ ಮಾಹಿತಿ ಹಕ್ಕು ಅಧಿಕಾರಿ ಟೇಬಲ್ ಮುಂಭಾಗದಲ್ಲಿ ಪ್ರತಿಭಟನೆ ಕುಳಿತ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ 196 ಬಿಎಸ್ಎನ್ಎಲ್ ಟವರ್ಗಳಿದ್ದು, ಇತ್ತೀಚೆಗೆ 39 ಹೊಸ 4ಜಿ ಟವರ್ಗಳು ಮಂಜೂರಾಗಿವೆ. ಇದರಲ್ಲಿ 30 ಟವರ್ಗಳಿಗೆ ಸಂಪರ್ಕ ಕಲ್ಪಿಸಲಾಗಿದೆ.
ಮನುಷ್ಯನನ್ನು ಮತ್ತೆ ಚಂದ್ರನ ಕಕ್ಷೆಗೆ ಕಳುಹಿಸಿದ ನಾಸಾದ ಐತಿಹಾಸಿಕ ‘ಆರ್ಟೆಮಿಸ್ 2’ ಬಾಹ್ಯಾಕಾಶ ಯಾನ ಇದೀಗ ಅಂತಿಮ ಹಂತದಲ್ಲಿದೆ. ಈ 10 ದಿನಗಳ ರೋಚಕ ಪಯಣದಲ್ಲಿ ಗಗನಯಾತ್ರಿಗಳ ಆರೋಗ್ಯ ಕಾಪಾಡಲು ಅವರ ಪ್ರಥಮ ಚಿಕಿತ್ಸಾ ಪೆಟ್ಟಿಗೆಯಲ್ಲಿ ಜೀರ್ಣಕ್ರಿಯೆ ಹಾಗೂ ಮಲಬದ್ಧತೆ ನಿವಾರಕ ಔಷಧ ‘ಡಲ್ಕೋಲಾಕ್ಸ್’ ಕೂಡ ಸ್ಥಾನ ಪಡೆದಿದೆ. ಭಾರತದಲ್ಲಿ ಈ ಔಷಧಿಯನ್ನು ‘ಡಲ್ಕೋಫ್ಲೆಕ್ಸ್’ ಎಂಬ ಹೆಸರಿನಿಂದ ಕರೆಯಲಾಗುತ್ತದೆ.
ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 1500 ಅಡಿ ಪ್ರಪಾತದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದೆ.
ಶ್ರವಣ ದೋಷವಿದ್ದರೂ ವಿದ್ಯಾರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದಾನೆ. ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೆ.ಮಹದೇವ ಪ್ರಸಾದ್ ಎಂಬ ವಿದ್ಯಾರ್ಥಿಯೂ 600 ಅಂಕಗಳಿಗೆ 529 ಅಂಕಗಳನ್ನು ಗಳಿಸಿದ್ದಾನೆ.
ನಗರದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ)ಯಲ್ಲಿ “ಮಿಲನ್ 2026” ಎಂಬ ಸಾಂಸ್ಕೃತಿಕ ವೈವಿಧ್ಯತೆಯ ಹಬ್ಬವನ್ನು 2026 ಏಪ್ರಿಲ್ 10 ರಂದು ಭವ್ಯವಾಗಿ ಆಯೋಜಿಸಲಾಯಿತು. ಕಾಲೇಜು ಆವರಣಕ್ಕೆ ಆಗಮಿಸಿದ ಎಲ್ಲರನ್ನು ವಿದ್ಯಾರ್ಥಿಗಳಿಂದ ರೂಪಿಸಲಾದ ಬಣ್ಣಬಣ್ಣದ ಕಲಾಕೃತಿಗಳು ಸ್ವಾಗತಿಸಿತು.
ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ ಆರ್ಎಸ್ಎಸ್. ಈ ಸಂಘಟನೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಆಡಿರುವ ಮಾತು ಸರಿಯಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.
ಶ್ರೀ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದ ನಂತರ ತಾಲೂಕಿನ ಹುಲ್ಲಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಶ್ರೀಮತಿ ಪೂಜಾ (24) ಎಂಬುವವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೋದಿ ಅವರ ಭದ್ರತೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಿಹಾರದ ಬಕ್ಸರ್ನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತನೆಗೆ ನೆರವಾಗುತ್ತಿದ್ದ ಇನ್ನಿಬ್ಬರನ್ನೂ ಸಹ ವಶಕ್ಕೆ ಪಡೆಯಲಾಗಿದೆ.
ಬೆಂಕಿ ನಂದಿಸಲು ಹೋದಾಗ ಬೆಂಕಿಯಲ್ಲಿ ಸಿಲುಕಿ ತೀವ್ರ ಸುಟ್ಟ ಗಾಯಗಳಾಗಿದ್ದ ವೃದ್ಧರೊಬ್ಬರು ಗುರುವಾರ ನಿಟ್ಟೆ ಗ್ರಾಮದ ಬಜೆಕಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಯರು ಅಕ್ರಮವಾಗಿ ಸಾಗಿಸುತ್ತಿದ್ದ ₹37 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐಪಿಎಲ್ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್ನಲ್ಲಿರುವ 2 ತಂಡಗಳು ಶುಕ್ರವಾರ ಮುಖಾಮುಖಿಯಾಗುತ್ತಿದೆ. ಹಾಲಿ ಚಾಂಪಿಯನ್ ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ.
ಉಡುಪಿಯ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಪ್ರತಿಷ್ಠಿತ ಅಡ್ವಕೇಟ್ ಪಿ. ಶಿವಾಜಿ ಶೆಟ್ಟಿ ಸ್ಮಾರಕ 10ನೇ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಎ.10 ರಿಂದ 12ರವರೆಗೆ ಆಯೋಜಿಸಲಾಗುತ್ತಿದೆ ಎಂದು ಪ್ರಾಂಶುಪಾಲೆ ಪ್ರೊ. ಸುರೇಖಾ ಕೆ. ತಿಳಿಸಿದ್ದಾರೆ.
ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (ಬಯೋಮೆಟ್ರಿಕ್) ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಜ್ಜಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಇರಾನ್ ಮತ್ತು ಅಮೆರಿಕ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿದ್ದು, ಈ ನಡುವೆ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ನನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿದೆ.
ತಾನು ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ ಕಾರಣದಿಂದ ಬೇಸತ್ತ ಯುವಕನೊಬ್ಬ ತನ್ನ ಜೀವನವನ್ನೇ ಅಂತ್ಯಗೊಳಿಸಿಕೊಂಡ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಲ್ಲಿ ನಡೆದಿದೆ.