Showing 20 of 21629 articles • Page 182 of 1082
48 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮೀರತ್ ನಲ್ಲಿ ನಡೆದಿದೆ.
ಗುರುಪುರ ಶಂಭಾವಿ ನದಿಗೆ ಹಾರಿ ಯುವಕ ಆತ್ಮಹತ್ಯೆ!
ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ.
ಮಾನವೀಯ ಸಂಬಂಧ ಗಟ್ಟಿಗೊಳಿಸುವ ಜಾನಪದ ಕಲೆಗೆ ತನ್ನದೇ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸುವುದು ಮುಖ್ಯವಾಗಬೇಕು ಎಂದು ನಾದಗಂಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕಳಲೆ ದೇವಣ್ಣ ಹೇಳಿದರು.
ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ‘ಆಕಾಸ ಏರ್’, ತನ್ನ ಇನ್-ಫ್ಲೈಟ್ ಆಹಾರ ಸೇವೆಯಾದ ‘ಕೆಫೆ ಆಕಾಸ’ ಮೂಲಕ ಈಸ್ಟರ್ ಹಬ್ಬದ ಪ್ರಯುಕ್ತ ವಿಶೇಷ ಭೋಜನವನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಏಪ್ರಿಲ್ 9ರಂದು ಸಂಜೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಪ್ರಜೆಯೊಬ್ಬನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿ, ₹25.63 ಕೋಟಿ ವೆಚ್ಚದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಿಂದ ವಸೂಲಿ ಮಾಡಿ ಸಂಗ್ರಹಿಸಲಾಗಿದ್ದ ₹5 ಲಕ್ಷ ಹಣವನ್ನು ಹಾಡಹಗಲೇ ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮುಳಬಾಗಿಲು ನಗರದ ಶಾಮೀರ್ ಮೊಹಲ್ಲಾದ ಸಂಘದ ಕಚೇರಿಯಲ್ಲಿ ನಡೆದಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ.
ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಐಪಿಎಲ್ ಪಂದ್ಯಗಳ ಟಿಕೆಟ್ ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಕ್ರಮವಾಗಿ ಟಿಕೆಟ್ ಮಾರಾಟಕ್ಕಿಳಿದಿದ್ದ 11 ಮಂದಿಯನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡ್ರಿಂಕ್ & ಡ್ರೈವ್ ಕೇಸಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ನನ್ನು ಬಂಧಿಸಲಾಗಿದೆ.
ಮಂಗಳೂರು ಹೊರವಲಯದ ಗುರುಪುರ ಕೈಕಂಬ ಸಮೀಪ ಇಂದು ರೌದ್ರಾವತಾರ ನಡೆದಿದೆ. ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಪ್ರಯಾಣಿಕರ ಬಸ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬಸ್ ಚಾಲಕನ ಕಾಲು ಮುರಿದು ಹೋಗಿದ್ದು, ಸ್ಥಿತಿ ಗಂಭೀರವಾಗಿದೆ.
ರಾ. ಹೆ. 66ರ ಕಟಪಾಡಿ ಜಂಕ್ಷನ್ನಲ್ಲಿ ರಾ. ಹೆ. ಅಂಡರ್ಪಾಸ್ ಮತ್ತು ವೆಹಿಕಲ್ ಓವರ್ಪಾಸ್ ನಿರ್ಮಾಣ ಕಾಮಗಾರಿ ಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪರಿಶೀಲಿಸಿದರು.
ಮೂಡು ಅಲೆವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಮೋಹನ ತಂತ್ರಿ (82) ಬುಧವಾರ ನಿಧನರಾದರು.
ಆಟೋ ಗ್ಯಾಸ್ (ಎಲ್ಪಿಜಿ) ಕೊರತೆ ತೀವ್ರವಾಗಿದ್ದು, ಚಾಲಕರಿಗೆ ದೊಡ್ಡ ಸಂಕಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಾದ್ಯಂತ ಗ್ಯಾಸ್ ಸ್ಟಾಕ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವೆಡೆ ಸ್ವಲ್ಪ ಪ್ರಮಾಣದಲ್ಲಿ ಸ್ಟಾಕ್ ಇದ್ದರೂ ದರ ಹೆಚ್ಚಾದ ಕಾರಣ ಆಟೋ ಚಾಲಕರು ತಕರಾರು ಮಾಡುತ್ತಿದ್ದಾರೆ.
ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆಯಾಗಿದೆ. ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಸೀರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ ಎಂಬ ಮಾಹಿತಿ ತಿಳಿದು ಬಂದಿದೆ.
ಗ್ಯಾಸ್ ವಿತರಣೆ ವಿಳಂಬ ಮಾಡಿ ಗ್ಯಾಸ್ ಏಜನ್ಸಿಗಳು ಅಕ್ರಮ ದಂಧೆಗಿಳಿದಿದೆ ಅಮೇರಿಕಾ-ಇರಾನ್ ಯುದ್ಧದ ಲಾಭ ಪಡೆಯಲು ಗ್ಯಾಸ್ ಮಾಫಿಯಾಗಳು ಸಕ್ರಿಯವಾಗಿದ್ದು ಅಕ್ರಮ ದಂಧೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಹೇಳಿದರು.
ಗೌಡ ಸಾರಸ್ವತ ಬ್ರಾಹ್ಮಣ ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ 2017 ರಲ್ಲಿ ಆರಂಭವಾದ ಜಿಪಿಎಲ್ ಉತ್ಸವ್ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ಅಮ್ಗಿಲೆ ದಿ ಒರಿಜಿನಲ್ ಆಭರಣ್ ಜಿಪಿಎಲ್ ಉತ್ಸವ್ 2026 ಈ ಬಾರಿ ದಶಮಾನೋತ್ಸವದ ಸಂಭ್ರಮ.
ಇಲ್ಲಿಯ ಸುಜೀರ್ ಸಿ. ವಿ. ನಾಯಕ್ ಹಾಲ್ನಲ್ಲಿ ಕಳೆದ ಒಂದು ವರ್ಷದಿಂದ ಕೊಂಕಣಿ ವಾಚನ ಸಂಘ ಕಾರ್ಯಾಚರಿಸುತಿದ್ದು ಪ್ರತಿ ಬುಧವಾರ ಆಸಕ್ತ ಕೊಂಕಣಿ ಭಾಷಾ ಪ್ರೇಮಿಗಳು ಕೊಂಕಣಿ ಸಾಹಿತ್ಯದ ವಾಚನ ಮಾಡುತಿದ್ದಾರೆ. ಈ ಬುಧವಾರದಂದು ಈ ವಾಚನ ಸತ್ರದ ವಿಶೇಷಾಂಕ ನೆರವೇರಿತು.