Showing 20 of 21629 articles • Page 183 of 1082
ತನ್ನ ಅಸ್ತಿತ್ವದ ನಲ್ವತ್ತನೇ ವರ್ಷಾಚರಣೆ (1986 – 2026) ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ಆಯೋಜಿಸುತ್ತಿದೆ.
ಕದನ ವಿರಾಮದ ಪರಿಸ್ಥಿತಿಗಳು ಮತ್ತು ಮುಂಬರುವ ಮಾತುಕತೆಗಳ ಕುರಿತು ಇರಾನ್ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇದು ಅಮೆರಿಕಾ-ಇಸ್ರೇಲ್ ವಿರುದ್ಧ ನಮಗೆ ಸಿಕ್ಕ ದೊಡ್ಡ ವಿಜಯ ಎಂದು ಹೇಳಿಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂಭ್ರಮ ನಡೆಯುತ್ತಿದೆ. ಒಂದು ತಿಂಗಳ ಕಾಲ ನಡೆಯುವ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ.
ಮಂಗಳೂರು ವ್ಯಾಪ್ತಿಯ ಪ್ರಾದೇಶಿಕ ಉಪ ಔಷಧ ನಿಯಂತ್ರಕ ಬಾಬು ಬಿ.ಎನ್ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ.
ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ ಮಲ್ಲತ್ತಹಳ್ಳಿಯಲ್ಲಿ ನಡೆದಿದೆ.
ಲಾಯಿಲದಲ್ಲಿರುವ ಜ್ಯೋತಿ ಆಸ್ಪತ್ರೆ ಮತ್ತು ಕೆಎಂಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಕೇಂದ್ರದ ವತಿಯಿಂದ ಸಾಮಾಜಿಕ ಹೊಣೆಗಾರಿಕೆಯ ಅಂಗವಾಗಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್ನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯಡಕ ರಾಷ್ಟ್ರೀಯ ಹೆದ್ದಾರಿ (169 ಎ) ಸಮೀಪ 5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಉಡುಪಿ ಶ್ಯಾಮಿಲಿ ಸಮೂಹ ಸಂಸ್ಥೆಗಳ ಸಹಸಂಸ್ಥೆ ಶ್ಯಾಮಿಲಿ ಸ್ಪ್ರಿಂಗ್ಸ್ ಲಕ್ಸುರಿ ರೆಸಾರ್ಟ್ ಮಂಗಳವಾರ ಅದ್ಧೂರಿಯಾಗಿ ಉದ್ಘಾಟನೆಗೊಂಡಿತು.
ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ತನ್ನ ಇಂಧನ ಹೆಚ್ಚುವರಿ ಶುಲ್ಕವನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಇದರಿಂದಾಗಿ ವಿಮಾನ ಟಿಕೆಟ್ ದರಗಳು ಏರಿಕೆಯಾಗಲಿವೆ.
ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ನಡೆದಿದೆ.
ರಾಕೆಟ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿ, ಅವರ ತಾಯಿ ಗಾಯಗೊಂಡ ನಂತರ ಮಣಿಪುರ ಸರ್ಕಾರ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಿದೆ. ಈ ಘಟನೆಯು ಪ್ರಕ್ಷುಬ್ಧ ರಾಜ್ಯದಲ್ಲಿ ಹೊಸ ಪ್ರತಿಭಟನೆಗಳು ಮತ್ತು ಹಿಂಸಾಚಾರಕ್ಕೆ ಕಾರಣವಾಯಿತು.
ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾದುದು, ಈ ದೇಶದ ಪ್ರತಿಯೊಬ್ಬರೂ ಕೂಡ ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ನಮ್ಮ ದೇಶ ವಿಶ್ವಕ್ಕೆ ಪರಿಚಯವಾಗುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಇವರು ತಿಳಿಸಿದರು.
ನಾಡಿನ ಸೈನಿಕರು ಎಲ್ಲವನ್ನೂ ನಮಗಾಗಿ ಧಾರೆ ಎರೆದವರು. ಬಿಸಿಲು, ಮಳೆ, ಚಳಿ ಯಾವುದನ್ನು ಲೆಕ್ಕಿಸದೆ ಕರ್ತವ್ಯವೇ ಮುಖ್ಯ ಎಂಬಂತೆ ತಾಯಿ ಭಾರತಿಯ ಸೇವೆಯನ್ನು ಹಗಲಿರುಳು ಮಾಡುತ್ತಿದ್ದಾನೆ.
ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಸುಪ್ರಸಿದ್ಧ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಸಮೀಪವಿರುವ ಬಾಲ್ಬೋವಾ ಟ್ಯಾಂಕ್ ಸೌಲಭ್ಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ತಾಲೂಕಿನ ಸಿಎಂ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಶುಲ್ಲಕ ಕಾರಣಕ್ಕೆ ವಿಶೇಷ ಚೇತನನಿಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ, ಕ್ರಮ ಕೈಗೊಳ್ಳುವಂತೆ ತಾಲೂಕಿನ ವಿಕಲಚೇತನರ ಒಕ್ಕೂಟದಿಂದ ತಹಶೀಲ್ದಾರ್ ಅವರಿಗೆ ಮಂಗಳವಾರ ದೂರು ಸಲ್ಲಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ (64) ಅವರು ಮಂಗಳವಾರ ನಿಧನರಾದರು.
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆಯು ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಆರಂಭವಾಯಿತು.