Showing 20 of 21629 articles • Page 190 of 1082
ಆಟವಾಡುತ್ತಿದ್ದ ಬಾಲಕನಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಾಯಗೊಂಡ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕು ಶಬ್ಬೀರ್ ನಗರದಲ್ಲಿ ನಡೆದಿದೆ.
ನಂಜನಗೂಡು ವಿಧಾನಸಭಾ ಕ್ಷೇತ್ರದ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರ 31ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮಾಜಿ ಸಂಸದರಾದ ದಿವಂಗತ ಆರ್. ಧ್ರುವನಾರಾಯಣ್ ರವರ ಪುತ್ಥಳಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರಿಗೆ ನೀಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಒಂದೆಡೆ ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆ, ಇನ್ನೊಂದೆಡೆ ಅಡುಗೆ ಅನಿಲದ ಕೊರತೆಯಿಂದಾಗಿ ಕರಾವಳಿಯಲ್ಲಿ ಮೀನುಗಾರಿಕೆ ಅರ್ಧಕ್ಕರ್ಧ ನಿಂತು ಹೋಗಿದೆ.
ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಟೋ ಎಲ್ಪಿಜಿ (ಗ್ಯಾಸ್) ಸಮಸ್ಯೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ವಹಿಸಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್ಬಿಟಿಯು) ಸರಕಾರವನ್ನು ಒತ್ತಾಯಿಸಿದೆ.
ಮದುವೆಯಾದ ಒಂದೇ ತಿಂಗಳಿಗೆ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಸಾವನ್ನಪ್ಪಿದ ಪ್ರಕರಣದಲ್ಲಿ ಈತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಮೃತನ ಪೋಷಕರು ಗಂಭೀರ ಆರೋಪ ಮಾಡುತ್ತಿರುವ ಬೆನ್ನಲ್ಲೇ ತಾನೂ ಕೂಡ ಅದೇ ಯುವತಿಯಿಂದಾಗಿ ಮೋಸ ಹೋಗಿದ್ದಾಗಿ ಯುವಕನೋರ್ವ ಮುಂದೆ ಬಂದಿದ್ದಾನೆ.
ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಬ್ರಹ್ಮಾವರ ಇವರ ವತಿಯಿಂದ ಮಟಪಾಡಿ ಪ್ರೀಮಿಯರ್ ಲೀಗ್ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಜರುಗಿತು.
ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸುತ್ತಿದ್ದ ಯುವಕನೋರ್ವ ತಪಾಸಣಾಧಿಕಾರಿಯ ಸಮಯಪ್ರಜ್ಞೆಯಿಂದ ಬದುಕುಲಿದ ಘಟನೆ ಉಡುಪಿಯ ಇನ್ನಂಜೆಯಲ್ಲಿ ನಡೆದಿದೆ.
ಕಲಾಕೃತಿ ಗಳಿಂದ ಅಲಂಕೃತವಾದ ಏರ್ ಇಂಡಿಯಾ ಎಕ್ಸ್ಪ್ರೆಸ್ ಬೋಯಿಂಗ್ ವಿಮಾನ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡು ಮೂಲದ ಅಂತರ್ ರಾಜ್ಯ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ಅಥ್ಲೆಟಿಕ್ ತಂಡವು 2026 ರ ಮಾರ್ಚ್ 26 ರಿಂದ 29 ರವರೆಗೆ ತಿಪಟೂರಿನ ಕೆಐಟಿಯಲ್ಲಿ ನಡೆದ ವಿಟಿಯು 27 ನೇ ಅಂತರ-ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ 140 ಅಂಕಗಳನ್ನು ಗಳಿಸುವ ಮೂಲಕ 9 ನೇ ಬಾರಿಗೆ ಸಮಗ್ರ ಚಾಂಪಿಯನ್ಶಿಪ್ ಗೆದ್ದುಕೊಂಡಿತು. ಸಹ್ಯಾದ್ರಿ ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕಗಳನ್ನು ಬಾಚಿಕೊಂಡಿದ್ದಾರ
2026 ರ ಜನಗಣತಿ ಪ್ರಕ್ರಿಯೆಯಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸುವಂತೆ, ನಿಖರ ಮತ್ತು ಸಮಗ್ರ ದತ್ತಾಂಶ ಸಂಗ್ರಹಣೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾಹಿತಿ ನೀಡಿದ್ದಾರೆ.
ತಜ್ಞರಿಂದ ಜ್ಞಾನವನ್ನು ಪಡೆದುಕೊಳ್ಳುವ ವಿನೂತನ ಜಾಗತಿಕ ಕಾರ್ಯಕ್ರಮವಾದ ಟೆಡ್ ಎಕ್ಸ್ ಒಡಿಶಾದ ಭುವನೇಶ್ವರದಲ್ಲಿರುವ ಪ್ರತಿಷ್ಠಿತ ಕಳಿಂಗ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರಗಿದ್ದು ಜಾದೂಗಾರ ಕುದ್ರೋಳಿ ಗಣೇಶ್ ರವರು ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನೀಡಿದರು.
: ‘ನಮ್ಮ ಮಗನ ಸಾವಿಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಆಹಾರದಲ್ಲಿ ವಿಷ ನೀಡಿರುವುದು ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಇತ್ತೀಚೆಗೆ ಸಾವಿಗೀಡಾಗಿರುವ ಸುದೀಪ್ ರೈ ಅವರ ಪೋಷಕರು ಆಗ್ರಹಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ “ಕಲಾಸೌರಭ” ಕಾರ್ಯಕ್ರಮವನ್ನು ಆಟಿಸಂ ಸೊಸೈಟಿ ಉಡುಪಿ ಮತ್ತು ಇನ್ನಿತರ ಸಮಾನ ಮನಸ್ಕ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಿಂದ ಆಯೋಜಿಸುತ್ತಾ ಬಂದಿದ್ದೇವೆ.
ಜಿಎಸ್ಬಿ ಸಮಾಜ ಹಿತ ರಕ್ಷಣಾ ವೇದಿಕೆ ಸಮಾಜದ ಹಿರಿಯರಿಗಾಗಿ ನಿರ್ಮಿಸುತ್ತಿರುವ ವಯೋವಂದನ ಆತಿಥ್ಯ ಗೃಹ ಮಕ್ಕಳಿಲ್ಲದ ಹಿರಿಯರಿಗೆ ಜೀವನದ ಸಂಧ್ಯಾಕಾಲದಲ್ಲಿ ಆಸರೆಯಾಗಿ ಚೈತನ್ಯದಾಯಿಯಾಗಲಿದೆ.
ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ರಾಗಿ ಒಕ್ಕಣೆ ಯಂತ್ರ ಮುಖಾಮುಖಿ ಡಿಕ್ಕಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಅವರ ನಿಗೂಢ ಸಾವು ಈಗ ಕರಾವಳಿಯಾದ್ಯಂತ ಭಾರಿ ಚರ್ಚೆಗೆ ಮತ್ತು ಹಲವು ಸಂಶಯಗಳಿಗೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಸೋಶಿಯಲ್ ಮೀಡಿಯಾ ಮೂಲಕ ಪ್ರೀತಿಸಿ, ಎರಡೂ ಕುಟುಂಬಗಳನ್ನು ಒಪ್ಪಿಸಿ ಕಳೆದ ಫೆಬ್ರವರಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದ ಸುದೀಪ್ ಮತ್ತು ಕಾರ್ಕಳದ ಮೇಕಪ್ ಆರ್ಟಿಸ್ಟ್ ಸೌಮ್ಯ ಶೆಟ್ಟಿ ಅವರ ಜೀವನದಲ್ಲಿ ಒಂದೇ ತಿಂಗಳೊಳಗೆ ಬಿರುಗಾಳಿ ಎದ್ದಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ಏಳನೇ ತರಗತಿಯ ವಿದ್ಯಾರ್ಥಿನಿ ಅನನ್ಯ ಬಿ. ಅವರು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಗಾಗಿ ಕೊಡಮಾಡುವ ‘ಇನ್ಸ್ಫಯರ್ ಅವಾರ್ಡ್ ಮಾನಕ್’ 2025-26 ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮರ್ಯಾದಾ ಪುರುಷೋತ್ತಮ ಶ್ರೀರಾಮನು ನಮಗೆ ಆದರ್ಶ ವ್ಯಕ್ತಿ. ರಾಮನಂತೆ ನಡೆಯಲು ಅವನ ಗುಣಗಳನ್ನು ಅಳವಡಿಸಿಕೊಳ್ಳಬೇಕು.